ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್!: ಬಿ ಎಲ್‌ ಸಂತೋಷ್‌ ವಿರುದ್ದ ಕೈ ಟಾಂಗ್‌

ಬೆಂಗಳೂರು, ಸೆಪ್ಟೆಂಬರ್‌ 01: ರಾಜ್ಯ ರಾಜಕಾರಣದಲ್ಲಿ ಆಪರೇಷನ್‌ ಹಸ್ತದ ಸದ್ದು ಜೋರಾಗಿದ್ದು, ಇದೀಗ ಕಾಂಗ್ರೆಸ್‌ ವಿರುದ್ದ ಬಿಜೆಪಿ ರಿವರ್ಸ್‌ ಆಪರೇಷನ್‌ ಕುರಿತಾ ಸ್ಪೋಟಕ ಹೇಳಿಕೆಯನ್ನ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ನೀಡಿದ್ದಾರೆ.

ಹೌದು, 40 ರಿಂದ 45 ಕಾಂಗ್ರೆಸ್‌ನ ಪ್ರಮುಖರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರಿಗೆ ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮೂಲಕ ತಿರುಗೇಟು ನೀಡಿದೆ.

karnataka-congress-slams-bl-santhosh

ಈ ಬಗ್ಗೆ ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೆಡ್ಟು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. ಬಿಎಲ್‌ ಸಂತೋಷ್‌ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್! ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಕಾಂಗ್ರೆಸ್‌ ಟಾಂಗ್‌ ನೀಡಿದೆ.

ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ! ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ BJPvsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ ಬಿ ಎಲ್‌ ಸಂತೋಷ್‌ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಂಡಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ,ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ. ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು! ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯುವುದಕ್ಕೆ ಮಾತ್ರ ಈ ಸಭೆ ಸೀಮಿತವಾಗಿದೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಬಿ ಎಲ್‌ ಸಂತೋಷ್‌ ಹೇಳಿದ್ದೇನು?

ಬಿಜೆಪಿಯಿಂದ ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಹತ್ತು ಜನ ಹೋದರೂ ಅದಕ್ಕೆ ಸಮನಾದ ಒಬ್ಬರನ್ನು ಕರೆತರಬಹುದು. ನನ್ನ ಜೊತೆಯೇ ಕಾಂಗ್ರೆಸ್‌ ನಿಂದ 40 ರಿಂದ 45 ಜನ ಸಂಪರ್ಕದಲ್ಲಿದ್ದಾರೆ. ದೆಹಲಿಯವರು ಒಪ್ಪಿಗೆ ಕೊಟ್ಟರೆ ಒಂದು ದಿನದ ಕೆಲಸ ಅಷ್ಟೆ. ಆದರೆ ನಮಗೆ ಈಗ ಅಗತ್ಯವಿಲ್ಲ. ನಾವು ಈಗ ಸರ್ಕಾರ ಮಾಡಬೇಕಾಗಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಅನ್ಯ ಪಕ್ಷದಿಂದ ನಮ್ಮ ಪಕ್ಷಕ್ಕೆ ಬಂದವರನ್ನ ನಾವು ಬಾಂಬೆ ಬಾಯ್ಸ್ ಎಂದು ಹೇಳುವುದು ಬೇಡ. ಅವರು ಕಷ್ಟ ಕಾಲಕ್ಕೆ ನಮ್ಮ ಜೊತೆ ಬಂದಿದ್ದಾರೆ. ಅವರು ಹೋಗುತ್ತಾರೆ ಎಂದು ನಾವೇ ಹೇಳುವುದು ಸರಿಯಲ್ಲ. ಹಾಗೆಂದು ಬಿಟ್ಟು ಹೋಗುವವರ ಬಗ್ಗೆ ಚಿಂತೆ ಬೇಡ. ಅಷ್ಟಕ್ಕೂ ಯಾರೂ ಕೂಡಾ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಬಿಜೆಪಿ ಮುಖಂಡ ಬಿ ಎಲ್‌ ಸಂತೋಷ್ ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+