Chaitra Kundapura: ವಿರೋಧ ಪಕ್ಷದ ನಾಯಕನ ಆಯ್ಕೆಗೆ ವಿಶ್ವನಾಥ್‌ ಅವರ ಸಹಾಯ ಪಡೆಯಿರಿ: ಬಿಜೆಪಿ ಕಾಲೆಳೆದ ಕಾಂಗ್ರೆಸ್‌

ಸದ್ಯ ರಾಜ್ಯ ರಾಜಕೀಯದಲ್ಲಿ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಭಾರಿ ಸದ್ದು ಮಾಡುತ್ತಿದೆ. ಚೈತ್ರಾ ಕುಂದಾಪುರ ಅವರಿಗೂ ನಮಗೂ ಸಂಬಂಧವಿಲ್ಲ ಎಂದು ಹಲವು ಬಿಜೆಪಿ ನಾಯಕರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ, ಹಲವು ದೊಡ್ಡ ಹೆಸರುಗಳು ಹೊರಗೆ ಬರುತ್ತವೆ ಎಂದು ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹೇಳಿರುವುದು ಭಾರಿ ಕುತೂಹಲ ಕೆರಳಿಸಿದೆ.

ಈ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಕೂಡ ಬಿಜೆಪಿಗೆ ಹಲವು ಪ್ರಶ್ನೆಗಳನ್ನು ಹಾಕಿದೆ. ಪ್ರಕರಣದಲ್ಲಿ ಬಿಜೆಪಿ ನಾಯಕರೂ ಇದ್ದಾರ ಎನ್ನುವ ಬಗ್ಗೆ ಅನುಮಾನ ಕೂಡ ವ್ಯಕ್ತಪಡಿಸಿದೆ. ಈಗ ಕಾಂಗ್ರೆಸ್ ಚೈತ್ರಾ ಪ್ರಕರಣವನ್ನು ಬಳಸಿಕೊಂಡು ಬಿಜೆಪಿ ಕಾಲೆಳೆದಿದ್ದು, ಈ ಬಗ್ಗೆ ಟ್ವೀಟ್ ಮಾಡಿದೆ.

Karnataka Congress Suggests BJP to Select Leader of Opposition Mention Chaitra Kundapura Case

ಯಾರಿದು ವಿಶ್ವನಾಥ್?

ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಆರೋಪಿಗಳಲ್ಲಿ ವಿಶ್ವನಾಥ್ ಕೂಡ ಒಬ್ಬರು, ಚನ್ನನಾಯಕ್ ಎನ್ನುವ ವ್ಯಕ್ತಿಯನ್ನು ಉದ್ಯಮಿ ಗೋವಿಂದ ಪೂಜಾರಿಗೆ ವಿಶ್ವನಾಥ್ ಜಿ ಎನ್ನುವ ಹೆಸರಿನಲ್ಲಿ ಪರಿಚಯ ಮಾಡಿದ್ದು, ಅವರು ಕೇಂದ್ರ ಬಿಜೆಪಿ ನಾಯಕ ಎಂದು ನಂಬಿಸಿದ್ದರು. ಈತನನ್ನೂ ಕೂಡ ಈಗ ಸಿಸಿಬಿ ಪೊಲೀಸರು ಬಂಧಿಸಿದ್ದು ವಿಚಾರಣೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ಟ್ವೀಟ್ ಹೀಗಿದೆ

"ಕರ್ನಾಟಕದ ಬಿಜೆಪಿಯನ್ನು ಸಂತೋಷ "ಜಿ" ಮುಳುಗಿಸಿದರು, ಕರ್ನಾಟಕದ ಬಿಜೆಪಿಯನ್ನು ಮೋದಿ "ಜಿ" ಕೈಬಿಟ್ಟರು, ಡಿಯರ್ ಬಿಜೆಪಿ ಕರ್ನಾಟಕ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅದ್ಯಾರೋ ವಿಶ್ವನಾಥ್ "ಜಿ" ಅವರ ಸಹಾಯವನ್ನದರೂ ಪಡೆಯಿರಿ!" ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ನಾಯಕರ ಕಾಲೆಳದಿದೆ.

ಬಿಜೆಪಿ ಆತ್ಮವಂಚನೆ ಮಾಡಿಕೊಳ್ಳುತ್ತಿದೆ

ಟಿಕೆಟ್ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಬಿಎಸ್‌ ಬೊಮ್ಮಾಯಿ ಹೇಳಿದ್ದಾರೆ. ಯಾವುದಾದ್ರೂ ಹೆಣ ಕಂಡರೆ ಹಿಂದೂ ಕಾರ್ಯಕರ್ತರು ಎಂದು ಬೊಬ್ಬೆ ಹೊಡೆಯುವ ಬಿಜೆಪಿ ತನ್ನ ಕಾರ್ಯಕರ್ತರು ಅಕ್ರಮ, ಅನಾಚಾರ ನಡೆಸಿದಾಗ ಜಾರಿಕೊಳ್ಳುವುದೇಕೆ?

ಆರೋಪಿ ಚೈನ್ ಚೈತ್ರ ಎಬಿವಿಪಿ ಕಾರ್ಯಕರ್ತೆಯಾಗಿದ್ದಾಳೆ. ಮತ್ತೊಬ್ಬ ಆರೋಪಿ ಗಗನ್ ಕಡೂರು ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದ. ವಂಚನೆ ನಡೆಸಿದ್ದು ಬಿಜೆಪಿ ಟಿಕೆಟ್ ಹೆಸರಲ್ಲಿ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಡೀಲ್ ನಡೆಸಲು ಬಳಸಿಕೊಳ್ಳಲಾಗಿತ್ತು. ಹೀಗಿದ್ದೂ ಸಂಬಂಧವಿಲ್ಲ ಎಂದು ಕೈತೊಳೆದುಕೊಳ್ಳುವುದು ಆತ್ಮವಂಚನೆ ಅಲ್ಲವೇ ಬಿಜೆಪಿ ಕರ್ನಾಟಕ? ಎಂದು ಕರ್ನಾಟಕ ಕಾಂಗ್ರೆಸ್ ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿದೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಸದ್ಯ ರೋಚಕವಾಗುತ್ತಿದೆ. ನಾಪತ್ತೆಯಾಗಿರುವ ಸ್ವಾಮೀಜಿ ಸಿಕ್ಕಿಹಾಕಿಕೊಂಡರೆ ದೊಡ್ಡ ಹೆಸರುಗಳು ಹೊರಗೆ ಬರುತ್ತವೆ ಎಂದು ಚೈತ್ರಾ ಈಗಾಗಲೇ ಬಾಂಬ್ ಸಿಡಿಸಿದ್ದಾರೆ. ಸಿಸಿಬಿ ಪೊಲೀಸರು ಕೂಡ ಆರೋಪಿಗಳ ವಿಚಾರಣೆ ತೀವ್ರಗೊಳಿಸಿದ್ದು, ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+