ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾಮಿಡಿ ಆಕ್ಟರ್!
ಬೆಂಗಳೂರು, ನವೆಂಬರ್ 02 : "ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ..? ಏನಾಗುತ್ತದೆ ಎನ್ನುವ ಗಾದೆಗೆ
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ, ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲ್ ಸಾಕ್ಷಿ" ಎಂದು ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ.
ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕರ್ನಾಟಕ ಕಾಂಗ್ರೆಸ್ ಟ್ವೀಟರ್ ಅಕೌಂಟ್‌ನಿಂದ ಸಾಲು-ಸಾಲು ಟ್ವೀಟ್ ಮಾಡಿದೆ. ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹಲವು ದಿನಗಳಿಂದ ಜಟಾಪಟಿ ನಡೆಯುತ್ತಿದೆ.
"ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯನವರದ್ದು ನಾಯಿಪಾಡು" ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಇದರ ವಿರುದ್ಧ ಕಾಂಗ್ರೆಸ್ ಅಕ್ರೋಶಗೊಂಡಿದ್ದು ಸರಣಿ ಟ್ವೀಟ್‌ಗಳನ್ನು ಮಾಡಿದೆ. ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಸಹ ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.
"ನಳಿನ್ ಕುಮಾರ್ ಕಟೀಲ್ ಅವರ ಮಾತಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲ" ಎಂದು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ. ಕೆಲವು ದಿನಗಳ ಹಿಂದೆ ಸಿದ್ದರಾಮಯ್ಯ ನಳಿನ್ ಕುಮಾರ್ ಕಟೀಲ್ "ಪೋಕರಿ" ಎಂದು ಕರೆದಿದ್ದರು.
|
ಬಿಜೆಪಿಯಲ್ಲಿ ಯಾವ ಪಾಡಿನಲ್ಲಿದ್ದಾರೆ?
"ನಳಿನ್ ಕುಮಾರ್ ಕಟೀಲ್ ರವರೇ ತಾವು ಪದೇ ಪದೇ ಅವಹೇಳನ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳರಿಗೆ ಕನಿಷ್ಠ ನೋಟಿಸನ್ನೂ ಕೊಡದಿದ್ದಿದ್ದು, ರಾಜ್ಯದ ಮುಖ್ಯಮಂತ್ರಿ ಭೇಟಿಗೆ ಸಣ್ಣ ಸಮಯ ಕೊಡದಿದ್ದಿದ್ದು ಯಡಿಯೂರಪ್ಪ ಬಿಜೆಪಿಯಲ್ಲಿ ಯಾವ ಪಾಡಿನಲ್ಲಿದ್ದಾರೆ ಎಂದು ಸೂಚಿಸುತ್ತದೆ" ಕಾಂಗ್ರೆಸ್ ಲೇವಡಿ ಮಾಡಿದೆ.
|
ಯಕಶ್ಚಿತ್ ರಾಜಕಾರಣಿ
"ತಮ್ಮ ನಡೆ-ನುಡಿ ಮೂಲಕ ತಾನೊಬ್ಬ ಅಪ್ರಬುದ್ಧ, ಅನಾಗರಿಕ, ಸಡಿಲ ನಾಲಿಗೆಯ ಯಕಶ್ಚಿತ್ ರಾಜಕಾರಣಿ ಎಂದು ಮತ್ತೆ ಮತ್ತೆ ನಳಿನ್ ಕುಮಾರ್ ಕಟೀಲ್ ಸಾಬೀತು ಮಾಡುತ್ತಿದ್ದಾರೆ" ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
|
ಮಂಗನ ಕೈಗೆ ಮಾಣಿಕ್ಯ
"ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ..? ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲ್ ಸಾಕ್ಷಿ" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
Recommended Video
|
ಸಿದ್ದರಾಮಯ್ಯ ಟ್ವೀಟ್
ಸಿದ್ದರಾಮಯ್ಯ ಸಹ ನಳಿನ್ ಕುಮಾರ್ ವಿರುದ್ಧ ಟ್ವೀಟ್ ಮಾಡಿದ್ದರು. "ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ 'ಸಂತೋಷ'ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ" ಎಂದು ಹೇಳಿದ್ದರು.












Click it and Unblock the Notifications