ಕರ್ನಾಟಕ; 2 ಲಕ್ಷದ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ
ಬೆಂಗಳೂರು, ಆಗಸ್ಟ್ 13 : ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 2 ಲಕ್ಷದ ಗಡಿ ದಾಟಿದೆ. ರಾಜ್ಯದ್ಲಲಿ ಮಾರ್ಚ್ 8ರಂದು ಮೊದಲ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿತ್ತು.
ಗುರುವಾರ ಕರ್ನಾಟಕದಲ್ಲಿ 6,706 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 203200ಗೆ ಏರಿಕೆಯಾಗಿದೆ.

ಪ್ರಸ್ತುತ ಕರ್ನಾಟಕದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 78,337. ರಾಜ್ಯದಲ್ಲಿ ಇದುವರೆಗೂ ಸೋಂಕಿನಿಂದಾಗಿ 3613 ಜನರು ಸಾವನ್ನಪ್ಪಿದ್ದಾರೆ. 1,21,242 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕರ್ನಾಟಕದಲ್ಲಿ ಮಾರ್ಚ್ 8ರಂದು ಮೊದಲ ಕೋವಿಡ್ ಪ್ರಕರಣ ದಾಖಲಾಗಿತ್ತು. ಜೂನ್ 24ರಂದು 10 ಸಾವಿರ ಪ್ರಕರಣವಾಯಿತು. ಜುಲೈ 6ರಂದು 25 ಸಾವಿರಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಆಯಿತು. ಜುಲೈ 27ರಂದು ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿತು. ಆಗಸ್ಟ್ 13ರಂದು 2 ಲಕ್ಷ ಪ್ರಕರಣವಾಗಿದೆ.
ರಾಜ್ಯದಲ್ಲಿ ಅತಿ ಹೆಚ್ಚು ಸೋಂಕಿತರು ಬೆಂಗಳೂರು ನಗರದಲ್ಲಿದ್ದಾರೆ. ಗುರುವಾರ ನಗರದಲ್ಲಿ 1893 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 81,733ಕ್ಕೆ ಏರಿಕೆಯಾಗಿದೆ.












Click it and Unblock the Notifications