ಕರ್ನಾಟಕದಲ್ಲಿ 5 ಕೋಟಿ ಡೋಸ್ ಕೊರೊನಾವೈರಸ್ ಲಸಿಕೆ ವಿತರಣೆ

ಬೆಂಗಳೂರು, ಸೆಪ್ಟೆಂಬರ್ 17: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಕರ್ನಾಟಕ ಹೊಸ ದಾಖಲೆ ಬರೆದಿದೆ. ಐದು ಕೋಟಿಗೂ ಅಧಿಕ ಡೋಸ್ ಲಸಿಕೆ ವಿತರಿಸುವುದರ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

"ಕಳೆದ ಏಳು ತಿಂಗಳಿನಿಂದ ನಿರಂತರವಾಗಿ ಲಸಿಕೆ ವಿತರಣೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ವೈದ್ಯಕೀಯ ಸಿಬ್ಬಂದಿ ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳು. ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮಾರ್ಗದರ್ಶನ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೂ ಧನ್ಯವಾದಗಳು," ಎಂದು ಟ್ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಭಾರತವು ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ದೊಡ ದಾಖಲೆಯನ್ನೇ ಬರೆದಿದೆ. ಸೆಪ್ಟೆಂಬರ್ 17ರಂದು ದೇಶಾದ್ಯಂತ ಸಮರೋಪಾದಿಯಲ್ಲಿ ಲಸಿಕೆ ವಿತರಿಸಲಾಗಿದ್ದು, ಕೇವಲ ಒಂದೇ ಒಂದು ನಿಮಿಷದಲ್ಲಿ 34,299 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂಬ ಅಂಶವನ್ನು ರಾಜ್ಯ ಆರೋಗ್ಯ ಸಚಿವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Karnataka Crosses 5 crore Mark in Administering Covid-19 Vaccine Doses

ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:

ರಾಜ್ಯದಲ್ಲಿ ಈವರೆಗೂ 7,62,888 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,27,317 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,38,214 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 6,01,253 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,49,54,582 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 80,12,810 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,56,47,983 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,28,23,140 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು:

ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.66ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.62ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1108 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 809 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 18 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37555 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2965191ಕ್ಕೆ ಏರಿಕೆಯಾಗಿದೆ. ಒಟ್ಟು 2911434 ಸೋಂಕಿತರು ಗುಣಮುಖರಾಗಿದ್ದು. 16174 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ:

ರಾಜ್ಯದಲ್ಲಿ ಒಟ್ಟು 1108 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 1, ಬಳ್ಳಾರಿ 7, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 14 ಬೆಂಗಳೂರು 308, ಬೀದರ್ 3, ಚಾಮರಾಜನಗರ 7, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 63, ಚಿತ್ರದುರ್ಗ 9, ದಕ್ಷಿಣ ಕನ್ನಡ 186, ದಾವಣಗೆರೆ 9, ಧಾರವಾಡ 6, ಗದಗ 3, ಹಾಸನ 64, ಹಾವೇರಿ 0, ಕಲಬುರಗಿ 6, ಕೊಡಗು 9, ಕೋಲಾರ 19, ಕೊಪ್ಪಳ 2, ಮಂಡ್ಯ 26, ಮೈಸೂರು 87, ರಾಯಚೂರು 0, ರಾಮನಗರ 8, ಶಿವಮೊಗ್ಗ 44, ತುಮಕೂರು 24, ಉಡುಪಿ 113, ಉತ್ತರ ಕನ್ನಡ 45, ವಿಜಯಪುರ 3, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      ನಮ್ಮ ಹೆಮ್ಮೆಯ ಅಗ್ನಿ 5 ಬಗ್ಗೆ ತಿಳಿದುಕೊಳ್ಳಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+