Karnataka Dam Water level Aug 17: ಕೆಆರ್‌ಎಸ್ ಸೇರಿ ಕರ್ನಾಟಕದ 14 ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ
Karnataka Dam Water level Aug 17: ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಅಲ್ಪ ಕಡಿಮೆಯಾಗಿದೆ. ಆದರೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ವಾಯವ್ಯ ಬಂಗಾಳ ಕೊಲ್ಲಿಯಲ್ಲಿ ಹಾಗೂ ಪಶ್ಚಿಮ ಬಂಗಾಳ-ಉತ್ತರ ಒಡಿಶಾ ಕರಾವಳಿ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಕಡಿಮೆ ಒತ್ತಡದ ಪ್ರದೇಶವು ಅದೇ ಭಾಗದಲ್ಲಿ ಮುಂದುವರಿದಿದೆ.
ಇದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆ ಸರಾಸರಿ ಸಮುದ್ರಮಟ್ಟದಿಂದ ಸುಮಾರು 7.6 ಕಿ.ಮೀ. ಎತ್ತರದವರೆಗೆ ವಿಸ್ತರಿಸಿದ್ದು, ಎತ್ತರ ಹೆಚ್ಚಾದಂತೆ ನೈಋತ್ಯ ದಿಕ್ಕಿನತ್ತ ವಾಲಿದೆ. ಇದು ಮುಂದಿನ 24 ಗಂಟೆಗಳಲ್ಲಿ ವಾಯವ್ಯ ದಿಕ್ಕಿನತ್ತ ಚಲಿಸಿ ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ. ವಾಯವ್ಯ ಬಂಗಾಳ ಕೊಲ್ಲಿ ಮತ್ತು ಪಶ್ಚಿಮ ಬಂಗಾಳ-ಉತ್ತರ ಒಡಿಶಾ ಕರಾವಳಿಗೆ ಹೊಂದಿಕೊಂಡಿರುವ ಕಡಿಮೆ ಒತ್ತಡದ ಪ್ರದೇಶದ ಕೇಂದ್ರದ ಮೂಲಕ ಸಾಗುತ್ತದೆ. ನಂತರ ಆಕ್ಷೇಯ ದಿಕ್ಕಿನಲ್ಲಿ ಮಧ್ಯ-ಪೂರ್ವ ಬಂಗಾಳ ಕೊಲ್ಲಿಯವರೆಗೆ ವಿಸ್ತರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಗಸ್ಟ್ 17ರಂದು ಸಹ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಇರಲಿದೆ. ಕೆಲವು ಭಾಗದಲ್ಲಿ ಉತ್ತಮ ಮಳೆಯಿಂದ ಜಲಾಯಗಳ ಒಳಹರಿವು ಹೆಚ್ಚಳವಾಗಿದೆ. ಆಗಸ್ಟ್ 17ರಂದು ಕರ್ನಾಟಕದ 14 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟದ ವಿವರ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 109.66
ಒಳಹರಿವು: 2,103
ಹೊರಹರಿವು: 2,987 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,858.22
ಒಳಹರಿವು: 3,177
ಹೊರಹರಿವು: 3,300 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2280.89
ಒಳಹರಿವು: 8,559
ಹೊರಹರಿವು: 13,690 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2916.85
ಒಳಹರಿವು: 4,163
ಹೊರಹರಿವು: 2,045 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,794.45
ಒಳಹರಿವು: 12,348
ಹೊರಹರಿವು: 2,393 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 547.05
ಒಳಹರಿವು: 11,474.51
ಹೊರಹರಿವು: 0 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 585.92
ಒಳಹರಿವು: 2,203
ಹೊರಹರಿವು: 0
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,629.54
ಒಳಹರಿವು: 21,613
ಹೊರಹರಿವು: 6,785
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50
ಇಂದಿನ ಮಟ್ಟ: 2,065.75
ಒಳಹರಿವು: 1,927
ಹೊರಹರಿವು: 844
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.46
ಒಳಹರಿವು: 7,625
ಹೊರಹರಿವು: 2,794
ತುಂಗಾ
ಗರಿಷ್ಠ ಮಟ್ಟ (ಅಡಿಗಳಲ್ಲಿ): 588.24
ಇಂದಿನ ಮಟ್ಟ: 588.24
ಒಳಹರಿವು: 14,194
ಹೊರಹರಿವು: 14,194
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 173.2
ಒಳಹರಿವು: 5,793
ಹೊರಹರಿವು: 203
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 519.54
ಒಳಹರಿವು: 32,243
ಹೊರಹರಿವು: 26,155
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.23
ಒಳಹರಿವು: 25,000
ಹೊರಹರಿವು: 27,420


Click it and Unblock the Notifications
