Karnataka Dam Water Level: ತುಂಬಿದ ಕಬಿನಿ, ಆಲಮಟ್ಟಿ: ತುಂಗಾ, ಭದ್ರಾ ಜಲಾಶಯ ಒಳಹರಿವು ಹೆಚ್ಚಳ! 13 ಜಲಾಶಯಗಳ ನೀರಿನ ಮಟ್ಟ
Karnataka Dam Water Level Aug 2: ಚಂಡಮಾರುತ ಪ್ರಭಾವ ಹಾಗೂ ಮಾನ್ಸೂನ್ ಚುರುಕುಗೊಂಡಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರ್ನಾಟಕದ ವಿವಿಧ ಜಲಾಶಯಗಳಲ್ಲಿ ನೀರಿನ ಮಟ್ಟವೂ ಸಹ ಹೆಚ್ಚಳವಾಗಿದೆ. ಆಗ್ನೇಯ ರಾಜಸ್ಥಾನ ಮತ್ತು ನೆರೆಹೊರೆಗಳಲ್ಲಿ ಉತ್ತಮವಾಗಿ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಅದೇ ಪ್ರದೇಶದಲ್ಲಿ ಮುಂದುವರಿದಿದೆ. ಸಂಬಂಧಿತ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿಮೀ ವರೆಗೆ ವಿಸ್ತರಿಸಿದೆ, ಇದು ಎತ್ತರದೊಂದಿಗೆ ನೈಋತ್ಯಕ್ಕೆ ಚಲಿಸಲಿದೆ. ಇದು ದಕ್ಷಿಣ ರಾಜಸ್ಥಾನದಾದ್ಯಂತ ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಮತ್ತು ಮುಂದಿನ 24 ಗಂಟೆಗಳಲ್ಲಿ ಕಡಿಮೆ ಒತ್ತಡದ ಪ್ರದೇಶವಾಗಿ ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಆಗಸ್ಟ್ 7ರ ವರೆಗೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಕಬಿನಿ ಜಲಾಶಯವು ಭರ್ತಿಯಾಗಿದ್ದು, ಆಲಮಟ್ಟಿ ಜಲಾಶಯವು ಭರ್ತಿ ಆಗುವ ಹಂತವನ್ನು ತಲುಪಿದೆ. ಕರ್ನಾಟಕದ 13 ಪ್ರಮುಖ ಜಲಾಶಯಗಳ ನೀರಿನ ಮಟ್ಟ ಆಗಸ್ಟ್ 2ರಂದು ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕರ್ನಾಟಕದ ವಿವಿಧ ಜಲಾಶಯಗಳಿಗೆ ಜೀವಕಳೆ ಬಂದಂತೆ ಆಗಿದೆ. ತುಂಗಾ ಮತ್ತು ಭದ್ರಾ ಜಲಾಶಯಗಳ ಒಳಹರಿವು ಹೆಚ್ಚಳವಾಗಿದೆ. ಕರ್ನಾಟಕದ ಪ್ರಮುಖ ಜಲಾಶಗಳ ನೀರಿನ ಮಟ್ಟ ವಿವರ ನೋಡೋಣ.
ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 94.40
ಒಳಹರಿವು: 13,522
ಹೊರಹರಿವು: 1,565 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.75
ಒಳಹರಿವು: 16,880
ಹೊರಹರಿವು: 19,700 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2281.23
ಒಳಹರಿವು: 19037
ಹೊರಹರಿವು: 1200 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2909.06
ಒಳಹರಿವು: 11,686
ಹೊರಹರಿವು: 500 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,777.95
ಒಳಹರಿವು: 38,183
ಹೊರಹರಿವು: 2,032 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 537.90
ಒಳಹರಿವು: 2,606
ಹೊರಹರಿವು: 288.83 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 581.14
ಒಳಹರಿವು: 5,216
ಹೊರಹರಿವು: 0
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,601.56
ಒಳಹರಿವು: 24,968
ಹೊರಹರಿವು: 3,003
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,059.10
ಒಳಹರಿವು: 4,782
ಹೊರಹರಿವು: 1,194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,153.65
ಒಳಹರಿವು: 17,004
ಹೊರಹರಿವು: 1,556
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 158
ಒಳಹರಿವು: 23,000
ಹೊರಹರಿವು: 182
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 519.00
ಒಳಹರಿವು: 92,500
ಹೊರಹರಿವು: 1,11,308
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.42
ಒಳಹರಿವು: 1,10,000
ಹೊರಹರಿವು: 1,05,474


Click it and Unblock the Notifications
