Karnataka Dam Water Level Aug 4: ಕೆಆರ್‌ಎಸ್ ಸೇರಿ ಕರ್ನಾಟಕದ 14 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ
Karnataka Dam Water Level Aug 4: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆ ಆಗುತ್ತಿದ್ದು, ಇನ್ನೂ ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ಮಳೆ ಆಗುವ ಸಾಧ್ಯತೆ ಇದೆ. ಚಂಡಮಾರುತ ಪ್ರಸರಣದ ಪ್ರಭಾವ ಹಾಗೂ ಮಾನ್ಸೂನ್ ಚುರುಕು ಪಡೆದುಕೊಂಡಿರುವುದರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆಯಿಂದಾಗಿ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀಡಿನ ಮಟ್ಟ ಹೆಚ್ಚಳವಾಗಿದೆ. ಅಲ್ಲದೆ ರಾಜ್ಯದ ಪ್ರಮುಖ ಮೇಲ್ಸೇತುವೆಗಳು ಮುಳುಗಡೆಯಾಗಿವೆ. ಕರ್ನಾಟಕದಲ್ಲಿ ಮಳೆ ಆರ್ಭಟ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ, ನೆರೆಯ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಭಾರೀ ಮಳೆ ಆಗುತ್ತಿದೆ. ಹೀಗಾಗಿ, ಕರ್ನಾಟಕದ ಹಲವು ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಭದ್ರಾ, ತುಂಗಾ ಹಾಗೂ ಹೇಮಾವತಿ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರವು ಭಾರೀ ವಿವಾದ ಸ್ವರೂಪವನ್ನು ಪಡೆದುಕೊಂಡಿರುವಾಗಲೇ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಆಗುತ್ತಿರುವುದರಿಂದ ಕಾವೇರಿ ನದಿ ನೀರು ಹಂಚಿಕೆ ವಿಚಾರವು ಅಲ್ಪ ಪ್ರಮಾಣದಲ್ಲಿ ತಣ್ಣಗಾಗಿದೆ. ಆದರೆ, ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಷಯವಾಗಿ ಪ್ರತಿಭಟನೆಗಳು ಮುಂದುವರಿದಿವೆ.

Karnataka Dam Water Level Aug 4: ಕಬಿನಿಯಿಂದ ತಮಿಳುನಾಡಿಗೆ ನೀರು
ಇನ್ನು ಕರ್ನಾಟಕವು ಕಬಿನಿಯಿಂದ ತಮಿಳುನಾಡಿಗೆ ಕಳೆದ ಮೂರು ದಿನಗಳಲ್ಲಿ 3.5 ಟಿಎಂಸಿಗೂ ಹೆಚ್ಚು ನೀರು ಬಿಟ್ಟಿದೆ. ಕೇರಳದ ವಯನಾಡು ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ಒಳಹರಿವು ಹೆಚ್ಚಾಗಿದೆ. ಹೀಗಾಗಿ, ಆಗಸ್ಟ್ 1ರಿಂದ 3ರ ವರೆಗೆ ಪ್ರತಿ ದಿನ 3.5 ಟಿಎಂಸಿಗೂ ಹೆಚ್ಚು ನೀರು ಬಿಡಲಾಗಿದೆ. ಒಟ್ಟಾರೆ 25,000 ಕ್ಯುಸೆಕ್ಸ್ ನೀರನ್ನು ಬಿಡಲಾಗಿದೆ. ಕರ್ನಾಟಕ ಸರ್ಕಾರವು ನಿಗದಿ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ನಡುವೆ ಕರ್ನಾಟಕವೂ ಹೆಚ್ಚು ನೀರು ಬಿಟ್ಟಿದೆ. ಆಗಸ್ಟ್ 4ರಂದು ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 102.09
ಒಳಹರಿವು: 32,048
ಹೊರಹರಿವು: 1,821 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.01
ಒಳಹರಿವು: 11,645
ಹೊರಹರಿವು: 10,750 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2282.59
ಒಳಹರಿವು: 31,746
ಹೊರಹರಿವು: 27000 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2911.75
ಒಳಹರಿವು: 12,859
ಹೊರಹರಿವು: 500 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,784.70
ಒಳಹರಿವು: 59,203
ಹೊರಹರಿವು: 761 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 540.30
ಒಳಹರಿವು: 44,062
ಹೊರಹರಿವು: 0 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 582.78
ಒಳಹರಿವು: 10,003
ಹೊರಹರಿವು: 0
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,613.16
ಒಳಹರಿವು: 57,785
ಹೊರಹರಿವು: 1,390
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50
ಇಂದಿನ ಮಟ್ಟ: 2,060.60
ಒಳಹರಿವು: 11,703
ಹೊರಹರಿವು: 1,194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,158.33
ಒಳಹರಿವು: 20,782
ಹೊರಹರಿವು: 1,765
ತುಂಗಾ
ಗರಿಷ್ಠ ಮಟ್ಟ (ಅಡಿಗಳಲ್ಲಿ): 588.24
ಇಂದಿನ ಮಟ್ಟ: 586.83
ಒಳಹರಿವು: 86,123
ಹೊರಹರಿವು: 89,503
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 163.6
ಒಳಹರಿವು: 36,103
ಹೊರಹರಿವು: 189
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 518.94
ಒಳಹರಿವು: 1,25,855
ಹೊರಹರಿವು: 1,50,000
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 491.40
ಒಳಹರಿವು: 1,30,000
ಹೊರಹರಿವು: 1,55,144


Click it and Unblock the Notifications
