Dam Water Level: ರಾಜ್ಯದ ಹಲವೆಡೆ ಮಳೆ ಅಬ್ಬರ; ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದರೆ ಇನ್ನೂ ಹಲವು ಜಿಲ್ಲೆಗಳ ಜನ ಮಳೆಗಾಗಿ ಕಾಯುತ್ತಿದ್ದಾರೆ. ಏಪ್ರಿಲ್‌ ಮೂರನೇ ವಾರದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಅದರಲ್ಲೂ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು, ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚಿದ್ದರೆ, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.

Karnataka dam water level details alamatti krs hemavathi

ಬೇಸಿಗೆ ಶುರುವಾಗುತ್ತಿದ್ದಂತೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಮಳೆ ಹೀಗೆ ಮುಂದುವರೆದರೆ ಜಲಾಶಯಗಳು ಒಳಹರಿವು ಪಡೆಯುವ ಸಾಧ್ಯತೆ ಇದೆ. ರಾಜ್ಯದ ಜಲಾಶಯಗಳ ಒಟ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು ಏಪ್ರಿಲ್ 13ರಂದು 338.57 ಟಿಎಂಸಿ ನೀರು ಸಂಗ್ರಹದಲ್ಲಿದೆ.

ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 542.30 ಮೀಟರ್ / 53.46 ಟಿಎಂಸಿ
ಒಳಹರಿವು: 0
ಹೊರಹರಿವು: 6923 ಕ್ಯೂಸೆಕ್ಸ್

ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 539.92 ಮೀಟರ್ / 61.98 ಟಿಎಂಸಿ
ಒಳಹರಿವು: 0
ಹೊರಹರಿವು: 5630 ಕ್ಯೂಸೆಕ್ಸ್

ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 581.76 ಮೀಟರ್ / 11.78 ಟಿಎಂಸಿ
ಒಳಹರಿವು: 0
ಹೊರಹರಿವು: 1152 ಕ್ಯೂಸೆಕ್ಸ್

ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2859.00 ಅಡಿ / 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2833.01 ಅಡಿ / 3.49 ಟಿಎಂಸಿ
ಒಳಹರಿವು: 73 ಕ್ಯೂಸೆಕ್ಸ್
ಹೊರಹರಿವು: 200 ಕ್ಯೂಸೆಕ್ಸ್

ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2899.98 ಅಡಿ / 19.67 ಟಿಎಂಸಿ
ಒಳಹರಿವು: 90 ಕ್ಯೂಸೆಕ್ಸ್
ಹೊರಹರಿವು: 300 ಕ್ಯೂಸೆಕ್ಸ್

ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45ಟಿಎಂಸಿ
ಇಂದಿನ ನೀರಿನ ಮಟ್ಟ: 103.00 ಅಡಿ / 25.25 ಟಿಎಂಸಿ
ಒಳಹರಿವು: 201 ಕ್ಯೂಸೆಕ್ಸ್
ಹೊರಹರಿವು: 3879 ಕ್ಯೂಸೆಕ್ಸ್

ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2267.48 ಅಡಿ / 10.49 ಟಿಎಂಸಿ
ಒಳಹರಿವು: 102 ಕ್ಯೂಸೆಕ್ಸ್
ಹೊರಹರಿವು: 1200 ಕ್ಯೂಸೆಕ್ಸ್

ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2123.43 ಅಡಿ / 35.46 ಟಿಎಂಸಿ
ಒಳಹರಿವು: 133 ಕ್ಯೂಸೆಕ್ಸ್
ಹೊರಹರಿವು: 3663 ಕ್ಯೂಸೆಕ್ಸ್

ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1585.12 ಅಡಿ / 7.40 ಟಿಎಂಸಿ
ಒಳಹರಿವು: 1223 ಕ್ಯೂಸೆಕ್ಸ್
ಹೊರಹರಿವು: 1278 ಕ್ಯೂಸೆಕ್ಸ್

ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2124.32 ಅಡಿ / 19.13 ಟಿಎಂಸಿ
ಒಳಹರಿವು: 0
ಹೊರಹರಿವು: 5629 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2057.51 ಅಡಿ / 14.64 ಟಿಎಂಸಿ
ಒಳಹರಿವು: 0
ಹೊರಹರಿವು: 1194 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 509.77 ಮೀಟರ್ / 28.95 ಟಿಎಂಸಿ
ಒಳಹರಿವು: 0
ಹೊರಹರಿವು: 200 ಕ್ಯೂಸೆಕ್ಸ್

ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 488.65 ಮೀಟರ್ / 18.98 ಟಿಎಂಸಿ
ಒಳಹರಿವು: 0
ಹೊರಹರಿವು: 869 ಕ್ಯೂಸೆಕ್ಸ್

ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2137.10 ಅಡಿ / 27.97 ಟಿಎಂಸಿ
ಒಳಹರಿವು: 0 ಕ್ಯೂಸೆಕ್ಸ್
ಹೊರಹರಿವು: 145 ಕ್ಯೂಸೆಕ್ಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+