Karnataka Dam Water Level: ಭಾರೀ ಮಳೆ: ಜಲಾಶಯಗಳ ನೀರಿನ ಮಟ್ಟ ಹೆಚ್ಚಳ, ಕೆಆರ್‌ಎಸ್ ಭಾಗದಲ್ಲಿ ಅಲರ್ಟ್! 13 ಜಲಾಶಯದ ವಿವರ
Karnataka Dam Water Level: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು. ವಿವಿಧ ಜಿಲ್ಲೆಗಳಲ್ಲಿ ಜೂನ್ 29ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಜೀವ ಕಳೆ ಮೂಡಿದೆ. ಜಲಾಶಯಗಳು ತುಂಬಿ ತುಳುಕುತ್ತಿವೆ. ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯನ್ನೂ ನೀಡಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಸಾಧಾರಣ ಮಳೆ ಆಗಲಿದ್ದು. ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರಾವಳಿ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಹೀಗಾಗಿ, ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ. ಜೂನ್ 24ರ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.
ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿರುವುದರಿಂದ ಕಾವೇರಿ ನೀರಾವರಿ ನಿಗಮ ನಿಯಮಿತವು ಪ್ರಮುಖ ಮುನ್ನೆಚ್ಚರಿಕೆಯನ್ನು ನೀಡಿದೆ. ಹೌದು ಈ ಭಾಗದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಸೂಚನೆ ನೀಡಲಾಗಿದೆ. ಕಾವೇರಿ ನದಿ ಜಲಾಶಯ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 15,000 ರಿಂದ 30,000 ಕ್ಯೂಸೆಕ್ಸ್‌ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಹಾಗೂ ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಬೇಕು ಎಂದು ಸೂಚನೆ ನೀಡಲಾಗಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 120.20
ಒಳಹರಿವು: 13,856
ಹೊರಹರಿವು: 1,965 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,851.68
ಒಳಹರಿವು: 5,266
ಹೊರಹರಿವು: 3,000 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,278.07
ಒಳಹರಿವು: 16,102
ಹೊರಹರಿವು: 12,000 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,915
ಒಳಹರಿವು: 7,685
ಹೊರಹರಿವು: 2,400 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,775.30
ಒಳಹರಿವು: 24,229
ಹೊರಹರಿವು: 5,885 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 532.37
ಒಳಹರಿವು: 10,421.57
ಹೊರಹರಿವು: 1,721.98 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 581.08
ಒಳಹರಿವು: 3,556
ಹೊರಹರಿವು: 335
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,614.09
ಒಳಹರಿವು: 21,612
ಹೊರಹರಿವು: 194
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,055.46
ಒಳಹರಿವು: 3,073
ಹೊರಹರಿವು: 194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,122.85
ಒಳಹರಿವು: 12,216
ಹೊರಹರಿವು: 132
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 152.6
ಒಳಹರಿವು: 9,994
ಹೊರಹರಿವು: 1,279
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 515.21
ಒಳಹರಿವು: 98,611
ಹೊರಹರಿವು: 70,000
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 490.53
ಒಳಹರಿವು: 51,570
ಹೊರಹರಿವು: 42,820












Click it and Unblock the Notifications