Karnataka Dam Water Level: ಕರ್ನಾಟಕದಲ್ಲಿ ಭಾರೀ ಮಳೆ: ಜಲಾಶಯಗಳ ಇಂದಿನ ನೀರಿನ ಮಟ್ಟ ವಿವರ ಇಲ್ಲಿದೆ!
Karnataka Dam Water Level: ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಮುಂದುವರಿದಿದ್ದು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು. ಮಳೆಯಿಂದಾಗಿ ಕರ್ನಾಟಕದ ವಿವಿಧ ಜಲಾಯಶಗಳು ಭರ್ತಿ ಆಗುತ್ತಿವೆ. ಈ ಬಾರಿ ಭಾರೀ ಮಳೆಯಿಂದಾಗಿ ಜಲಾಶಯಗಳಲ್ಲಿ ಜೀವ ಕಳೆ ಮೂಡಿದೆ. ಕಳೆದ ಬಾರಿಗಿಂತಲೂ ಈ ಬಾರಿ ಜಲಾಶಯಗಳ ನೀರಿನ ಮಟ್ಟವು ಉತ್ತಮ ರೀತಿಯಲ್ಲಿ ಹೆಚ್ಚಳವಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿದೆ. ಕೊಡಗು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಬಿನಿ ಹಾಗೂ ಕೆಆರ್‌ಎಸ್ ಸೇರಿದಂತೆ ವಿವಿಧ ಜಲಾಯಶಗಳ ನೀರಿನ ಮಟ್ಟವು ಹೆಚ್ಚಳವಾಗಿದೆ. ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವು ಸಹ ಉತ್ತಮವಾಗಿದೆ. ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಆಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಆಗುತ್ತಿರುವುದರಿಂದ ಸಹಜವಾಗಿಯೇ ವಿವಿಧ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಜುಲೈ 07 ರಂದು ಭಾಗಮಂಡಲದಲ್ಲಿ ಬರೋಬ್ಬರಿ 83 ಮಿ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಧಾರಾಕಾರ ಮಳೆಯಿಂದಾಗಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಜಲಾಶಯಗಳಿಗೆ ಜೀವ ಕಳೆ ಮೂಡಿದೆ.
ಕಬಿನಿ ಜಲಾಶಯ: ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ.
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2280.79
ಸಂಗ್ರಹ (Storage): 17.513 / 19.52 TMC
ಒಳಹರಿವು ಕ್ಯೂಸೆಕ್ಸ್‌ಗಳಲ್ಲಿ: 14,589
ಹೊರ ಹರಿವು: 11,875
ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 122.25
ಸಂಗ್ರಹ (Storage): 45.965 / 49.452 TMC
ಒಳಹರಿವು ಕ್ಯೂಸೆಕ್ಸ್‌ಗಳಲ್ಲಿ: 24,903
ಹೊರ ಹರಿವು: 23,104
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2853.25
ಸಂಗ್ರಹ (Storage): 6.64 / 8.5 TMC
ಒಳಹರಿವು ಕ್ಯೂಸೆಕ್ಸ್‌ಗಳಲ್ಲಿ: 7369
ಹೊರ ಹರಿವು: 5000
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2919.81
ಸಂಗ್ರಹ (Storage): 34.994 / 37.10 TMC
ಒಳಹರಿವು ಕ್ಯೂಸೆಕ್ಸ್‌ಗಳಲ್ಲಿ: 17,540
ಹೊರ ಹರಿವು: 15,275












Click it and Unblock the Notifications