Karnataka Dam Water Level: ರಾಜ್ಯದಲ್ಲಿ ಧಾರಾಕಾರ ಮಳೆ: ಜಲಾಶಯಗಳ ನೀರಿನ ಮಟ್ಟ ಭರ್ಜರಿ ಹೆಚ್ಚಳ!
ಕರ್ನಾಟಕದಾದ್ಯಂತ ಭಾರೀ ಮಳೆ ಮುಂದುವರಿದಿದೆ. ಇಂದೂ ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಭಾಗದಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಕೆಆರ್‌ಎಸ್ ಸೇರಿದಂತೆ ವಿವಿಧ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದ್ದು. ಈ ಭಾಗದ ಜನರಿಗೆ ಎಚ್ಚರಿಕೆಯನ್ನೂ ನೀಡಲಾಗುತ್ತಿದೆ. ಕಳೆದ ಎರಡು ದಿನಗಳಿಂದಲೂ ಈ ಭಾಗದಲ್ಲಿ ಎಚ್ಚರಿಕೆ ನೀಡಲಾಗುತ್ತಿದೆ. ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಸಂಪೂರ್ಣ ವಿವರ ಇಲ್ಲಿದೆ.
ಕಳೆದ ಬಾರಿ ಮಳೆ ಕೊರತೆಯಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಸಮಸ್ಯೆ ಆಗಿತ್ತು. ಆದರೆ, ಈ ಬಾರಿ ಉತ್ತಮ ಮಳೆಯಾಗಿದ್ದು. ಜಲಾಶಯಗಳಲ್ಲಿ ನೀರು ತುಂಬಿದೆ. ಅಲ್ಲದೇ ಉತ್ತಮ ಮಳೆಯಿಂದಾಗಿ ಈ ಬಾರಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಜಲ ವಿವಾದ ಎದುರಾಗಿಲ್ಲ. ಅಲ್ಲದೇ ಎರಡೂ ರಾಜ್ಯಗಳ ರೈತರಿಗೆ ಕೃಷಿಗೆ ಅವಶ್ಯವಿರುವಷ್ಟು ನೀರು ಸಿಗುತ್ತಿದೆ. ಅಲ್ಲದೇ ಕೆಲವು ಪ್ರಮುಖ ಜಲಾಶಯಗಳು ತುಂಬುತ್ತಿರುವುದರಿಂದ ಮುಂದಿನ ದಿನಗಳಲ್ಲಿಯೂ ನೀರಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇಲ್ಲ ಎಂದೇ ಹೇಳಲಾಗುತ್ತಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 120.78
ಒಳಹರಿವು: 17,560
ಹೊರಹರಿವು: 8,729 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,851.52
ಒಳಹರಿವು: 4,612
ಹೊರಹರಿವು: 5,000 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,278.21
ಒಳಹರಿವು: 15,078
ಹೊರಹರಿವು: 12,000 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ):2,922
ಇಂದಿನ ಮಟ್ಟ: 2,915.58
ಒಳಹರಿವು: 9,494
ಹೊರಹರಿವು: 4,700 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,776.65
ಒಳಹರಿವು: 29,784
ಹೊರಹರಿವು: 5,052 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 533.04
ಒಳಹರಿವು: 18,375
ಹೊರಹರಿವು: 955.61 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 581.34
ಒಳಹರಿವು: 3,724
ಹೊರಹರಿವು: -
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,614.94
ಒಳಹರಿವು: 23,366
ಹೊರಹರಿವು: 196
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,055.85
ಒಳಹರಿವು: 3,436
ಹೊರಹರಿವು: 194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,125.25
ಒಳಹರಿವು: 12,856
ಹೊರಹರಿವು: 130
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 153.06
ಒಳಹರಿವು: 10,933
ಹೊರಹರಿವು: 1,280
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 516.33
ಒಳಹರಿವು: 83,426
ಹೊರಹರಿವು: 67,500
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 490.70
ಒಳಹರಿವು: 66,704
ಹೊರಹರಿವು: 65,180












Click it and Unblock the Notifications