Karnataka Dam Water Level: ಕರ್ನಾಟಕದಲ್ಲಿ ಧಾರಾಕಾರ ಮಳೆ: 13 ಪ್ರಮುಖ ಜಲಾಶಯದ ಇಂದಿನ ನೀರಿನ ಮಟ್ಟ ವಿವರ ಇಲ್ಲಿದೆ!
ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದಲೂ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳ ನೀರಿನ ಮಟ್ಟವು ಭಾರೀ ಹೆಚ್ಚಳವಾಗಿದೆ. ಕೆಆರ್‌ಎಸ್, ಹಾರಂಗಿ ಹಾಗೂ ಕಬಿನಿ ಜಲಾಶಯಗಳು ಸೇರಿದಂತೆ ಹಲವು ಜಲಾಶಯಗಳ ನೀರಿನ ಮಟ್ಟವು ಹೆಚ್ಚಳವಾಗಿದೆ. ರಾಜ್ಯದಾದ್ಯಂತ ಈ ಬಾರಿ ಮುಂಗಾರು ಚುರುಕು ಪಡೆದುಕೊಂಡಿದ್ದು ಈ ಬಾರಿ ಕರ್ನಾಟಕದಲ್ಲಿ ನೀರಿನ ಸಮಸ್ಯೆ ಎದುರಾಗಿಲ್ಲ. ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಇಂದಿನ (ಸೋಮವಾರ ಜೂನ್ 23)ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ಜೀವ ಕಳೆ ಮೂಡಿದೆ. ಹಲವು ಜಲಾಶಯಗಳು ತುಂಬಿ ತುಳುಕುತ್ತಿವೆ. ಈ ನಡುವೆ ಜೂನ್ 27ರ ವರೆಗೆ ಮಳೆ ಮುಂದುವರಿಯಲಿದ್ದು. ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾವ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಎನ್ನುವ ನಿಖರ ಮಾಹಿತಿ ನೋಡೋಣ.

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಜೂನ್ 23
ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 119.80
ಒಳಹರಿವು: 13.359
ಹೊರಹರಿವು: 1,664 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,850.81
ಒಳಹರಿವು: 2,287
ಹೊರಹರಿವು: 1,000 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2,277.92
ಒಳಹರಿವು: 11,932
ಹೊರಹರಿವು: 12,000 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,914
ಒಳಹರಿವು: 8,079
ಹೊರಹರಿವು: 2,400 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,774.20
ಒಳಹರಿವು: 14,816
ಹೊರಹರಿವು: 6,131 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 532.03
ಒಳಹರಿವು: 8,993.22
ಹೊರಹರಿವು: 4,930.77 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ):595
ಇಂದಿನ ಮಟ್ಟ: 580.82
ಒಳಹರಿವು: 2,679
ಹೊರಹರಿವು: ೦
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,613.28
ಒಳಹರಿವು: 30,594
ಹೊರಹರಿವು: 192
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,055.10
ಒಳಹರಿವು: 4,074
ಹೊರಹರಿವು: 194
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2175
ಇಂದಿನ ಮಟ್ಟ: 2,120.50
ಒಳಹರಿವು: 13,080
ಹೊರಹರಿವು: 127
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 151.7
ಒಳಹರಿವು: 9,877
ಹೊರಹರಿವು: 1,278
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 515.82
ಒಳಹರಿವು: 99,805
ಹೊರಹರಿವು: 50,440
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 490.44
ಒಳಹರಿವು: 52,000
ಹೊರಹರಿವು: 42,820












Click it and Unblock the Notifications