Karnataka Dam Water Level Sep 24: ಸೈಕ್ಲೋನ್ ಪ್ರಭಾವ ಭಾರೀ ಮಳೆ: 14 ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ

Karnataka Dam Water Level Sep 24: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಅರ್ನಬ್ ಸೈಕ್ಲೋನ್ ಪ್ರಭಾವವೂ ಇದೆ. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕದಲ್ಲಿ ಉತ್ತಮ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟವು ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಆದರೆ ಕರಾವಳಿ ಭಾಗದಲ್ಲಿ ಸಾಮಾನ್ಯವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರ್ನಾಟಕದ ಉತ್ತರ ಒಳನಾಡಿನ ಹಲವೆಡೆ ಕಾರವಳಿ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗುತ್ತಿದೆ. ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಆಗುತ್ತಿರುವುದರಿಂದ ಕರ್ನಾಟಕದ ಜಲಾಶಯಗಳಿಗೆ ಜೀವ ಕಳೆ ಬಂದಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.

Karnataka Dam Water Level Sep 24 Cyclone Impact Heavy Rain Today s Levels of 14 Major Reservoirs

ಕೆಆರ್‌ಎಸ್ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 105.90
ಒಳಹರಿವು: 4,120
ಹೊರಹರಿವು: 3,984 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,849.56
ಒಳಹರಿವು: 778
ಹೊರಹರಿವು: 100 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
ಇಂದಿನ ಮಟ್ಟ: 2, 268.63
ಒಳಹರಿವು: 646
ಹೊರಹರಿವು: 500 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,891.96
ಒಳಹರಿವು: 1,098
ಹೊರಹರಿವು: 5,550 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,795.40
ಒಳಹರಿವು: 2,019
ಹೊರಹರಿವು: 5,468 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 548.02
ಒಳಹರಿವು: 883.83
ಹೊರಹರಿವು: 3,830.02 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 585.94
ಒಳಹರಿವು: 0
ಹೊರಹರಿವು: 584

ತುಂಗಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,625.28
ಒಳಹರಿವು: 0
ಹೊರಹರಿವು: 10,879

ಮಲಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50
ಇಂದಿನ ಮಟ್ಟ: 2,065.70
ಒಳಹರಿವು: 0
ಹೊರಹರಿವು: 194

ಘಟಪ್ರಭಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.70
ಒಳಹರಿವು: 3,281
ಹೊರಹರಿವು: 192

ಭದ್ರಾ ಜಲಾಶಯ

ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 176.10
ಒಳಹರಿವು: 510
ಹೊರಹರಿವು: 4,399

ಆಲಮಟ್ಟಿ ಜಲಾಶಯ

ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 519.01
ಒಳಹರಿವು: 0
ಹೊರಹರಿವು: 13,172

ನಾರಾಯಣಪುರ ಜಲಾಶಯ

ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 490.76
ಒಳಹರಿವು: 9,584
ಹೊರಹರಿವು: 11,403

ಅನರ್ಬ್ ಸೈಕ್ಲೋ ಪ್ರಭಾವ: ಭಾರೀ ಮಳೆ

ನೈಋತ್ಯ ಮಾನ್ಸೂನ್ ಪಂಜಾಬ್, ಹರಿಯಾಣ, ರಾಜಸ್ಥಾನ, ಇಡೀ ದೆಹಲಿ, ಉತ್ತರ ಪ್ರದೇಶ ಮತ್ತು ಗುಜರಾತ್‌ನ ಕೆಲವು ಭಾಗಗಳಿಂದ ಮತ್ತಷ್ಟು ಹಿಂತೆಗೆದುಕೊಂಡಿದೆ. ಪಶ್ಚಿಮ ಕೇಂದ್ರ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿಯ ಮೇಲಿನ ಆಳವಾದ ಖಿನ್ನತೆಯು ಕಳೆದ 6 ಗಂಟೆಗಳಲ್ಲಿ 5 ಕಿಮೀ ವೇಗದಲ್ಲಿ ಪಶ್ಚಿಮಕ್ಕೆ ಚಲಿಸಿತು ಕಳಿಂಗಪಟ್ಟಣಂ (ಆಂಧ್ರ ಪ್ರದೇಶ), ವಿಶಾಖಪಟ್ಟಣಂನ ಪೂರ್ವ-ಈಶಾನ್ಯಕ್ಕೆ 140 ಕಿಮೀ (ಆಂಧ್ರ ಪ್ರದೇಶ), ಗೋಪಾಲಪುರದಿಂದ 150 ಕಿಮೀ ದಕ್ಷಿಣ (ಒಡಿಶಾ) ಮತ್ತು 240 ಕಿಮೀ ದಕ್ಷಿಣ ನೈಋತ್ಯ ಪುರಿ (ಒಡಿಶಾ). ಇದು ತೀವ್ರ ವಾಯುಭಾರ ಕುಸಿತವಾಗಿ ಕಳಿಂಗಪಟ್ಟಣಕ್ಕೆ ಸಮೀಪವಿರುವ ವಿಶಾಖಪಟ್ಟಣಂ ಮತ್ತು ಗೋಪಾಲ್‌ಪುರದ ನಡುವೆ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುವ ಮತ್ತು ಉತ್ತರ ಆಂಧ್ರಪ್ರದೇಶ - ದಕ್ಷಿಣ ಒಡಿಶಾ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಒಂದು ಟ್ರಫ್ ಪಶ್ಚಿಮ ಕೇಂದ್ರ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿಯ ಮೇಲೆ ಆಳವಾದ ಖಿನ್ನತೆಯ ಕೇಂದ್ರದಿಂದ ಮಧ್ಯ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಮೂಲಕ ಥೈಲ್ಯಾಂಡ್ ಕೊಲ್ಲಿಯವರೆಗೆ ಸಾಗುತ್ತದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿಮೀ ವರೆಗೆ ವಿಸ್ತರಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇದರ ಪ್ರಭಾವದಿಂದ ದೇಶದ ವಿವಿಧ ಪ್ರದೇಶಗಳಲ್ಲಿ ಮಳೆ ಆಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಆರ್ಭಟ ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+