KRS Dam: ಫೆಂಗಲ್ ಚಂಡಮಾರುತ ಅಬ್ಬರ; ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?
ಫೆಂಗಲ್ ಚಂಡಮಾರುತ ಪರಿಣಾಮ ತಮಿಳುನಾಡು, ಪುದುಚೆರಿಯ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಫೆಂಗಲ್ ಚಂಡಮಾರುತ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೋಮವಾರ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
ರಾಜ್ಯದಲ್ಲಿ ಈ ಭಾರಿ ಮುಂಗಾರು, ಹಿಂಗಾರು ಮಳೆ ಅಬ್ಬರಿಸಿದ್ದ ಪರಿಣಾಮ ಜಲಾಶಯಗಳು ಭರ್ತಿಯಾಗಿವೆ. ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಬೇಸಿಗೆಯಲ್ಲಿ ಕೂಡ ಈ ಬಾರಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ನಂಬಲಾಗಿದೆ.

ಕೆಆರ್ ಎಸ್, ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ, ಹೇಮಾವತಿ ಸೇರಿದಂತೆ ಎಲ್ಲಾ ಜಲಾಶಯಗಳು ತುಂಬಿ ಹರಿದಿವೆ. ರೈತರಿಗೆ ಎರಡನೇ ಬೆಳೆಗೆ ನೀರು ಸಿಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕೂಡ ಭರವಸೆ ನೀಡಿದ್ದಾರೆ. ಹಾಗಾದರೆ ಸದ್ಯ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿ ಇಲ್ಲಿದೆ.
ವಿವಿಧ ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 552.41 ಮೀಟರ್ / 130.64 ಟಿಎಂಸಿ
ಒಳಹರಿವು: 2391 ಕ್ಯೂಸೆಕ್ಸ್
ಹೊರಹರಿವು: 6830 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 560.52 ಮೀಟರ್ / 130.75 ಟಿಎಂಸಿ
ಒಳಹರಿವು: 412 ಕ್ಯೂಸೆಕ್ಸ್
ಹೊರಹರಿವು: 4192 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 591.99 ಮೀಟರ್ / 26.63 ಟಿಎಂಸಿ
ಒಳಹರಿವು: 56 ಕ್ಯೂಸೆಕ್ಸ್
ಹೊರಹರಿವು: 1328 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2859 ಅಡಿ / 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2834.86 ಅಡಿ / 3.81 ಟಿಎಂಸಿ
ಒಳಹರಿವು: 376 ಕ್ಯೂಸೆಕ್ಸ್
ಹೊರಹರಿವು: 1200 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2911.77 ಅಡಿ / 27.77 ಟಿಎಂಸಿ
ಒಳಹರಿವು: 2504 ಕ್ಯೂಸೆಕ್ಸ್
ಹೊರಹರಿವು: 4980 ಕ್ಯೂಸೆಕ್ಸ್
ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45 ಟಿಎಂಸಿ
ಇಂದಿನ ನೀರಿನ ಮಟ್ಟ: 124.56 ಅಡಿ / 49.12 ಟಿಎಂಸಿ
ಒಳಹರಿವು: 5001 ಕ್ಯೂಸೆಕ್ಸ್
ಹೊರಹರಿವು: 4467 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2279.13 ಅಡಿ / 16.55 ಟಿಎಂಸಿ
ಒಳಹರಿವು: 834 ಕ್ಯೂಸೆಕ್ಸ್
ಹೊರಹರಿವು: 500 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2154 ಅಡಿ / 76.58 ಟಿಎಂಸಿ
ಒಳಹರಿವು: 141 ಕ್ಯೂಸೆಕ್ಸ್
ಹೊರಹರಿವು: 431 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1629.72 ಅಡಿ / 93.02 ಟಿಎಂಸಿ
ಒಳಹರಿವು: 2783 ಕ್ಯೂಸೆಕ್ಸ್
ಹೊರಹರಿವು: 5790 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2172.58 ಅಡಿ / 49.17 ಟಿಎಂಸಿ
ಒಳಹರಿವು: 0
ಹೊರಹರಿವು: 5543 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2077.16 ಅಡಿ / 34.53 ಟಿಎಂಸಿ
ಒಳಹರಿವು: 0
ಹೊರಹರಿವು: 2241 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 518.97 ಮೀಟರ್ / 112.95 ಟಿಎಂಸಿ
ಒಳಹರಿವು: 0
ಹೊರಹರಿವು: 1390 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 491.05 ಮೀಟರ್ / 28.17 ಟಿಎಂಸಿ
ಒಳಹರಿವು: 70 ಕ್ಯೂಸೆಕ್ಸ್
ಹೊರಹರಿವು: 3346 ಕ್ಯೂಸೆಕ್ಸ್
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2138.60 ಅಡಿ / 29.28 ಟಿಎಂಸಿ
ಒಳಹರಿವು: 96 ಕ್ಯೂಸೆಕ್ಸ್
ಹೊರಹರಿವು: 0












Click it and Unblock the Notifications