Rain Alert: ಮಳೆ.. ಮಳೆ.. ಕರ್ನಾಟಕದ ಡ್ಯಾಂಗಳಲ್ಲಿ ಎಷ್ಟಿದೆ ನೀರು!
ಕರ್ನಾಟಕದಲ್ಲಿ ಉತ್ತಮ ಮಳೆ ಬೀಳುತ್ತಿದ್ದು, ಹೀಗಾಗಿ ಕರ್ನಾಟಕದ ನೀರಿನ ಬವಣೆ ಕೂಡ ನಿಧಾನವಾಗಿ ಕಡಿಮೆ ಆಗ್ತಿದೆ. ಅದ್ರಲ್ಲೂ ಕರ್ನಾಟಕದ ಜಲಾಶಯಗಳಿಗೆ ಉತ್ತಮ ಪ್ರಮಾಣದ ನೀರು ಕೂಡ ಹರಿದು ಬರುತ್ತಿದೆ. ಹಾಗಾದ್ರೆ ಕರ್ನಾಟಕದ ಯಾವ ಡ್ಯಾಂನಲ್ಲಿ ಎಷ್ಟು ನೀರಿದೆ? ಯಾವ ಜಲಾಶಯಕ್ಕೆ ಎಷ್ಟು ನೀರು ಹರಿದು ಬರ್ತಿದೆ? ಮುಂದೆ ಓದಿ.
ಮಳೆ ಇಲ್ಲದೆ ಸೊರಗಿದ್ದ ಕರ್ನಾಟಕದ ಜನರಿಗೆ ಮಳೆರಾಯ ಕಳೆದ ಒಂದು ತಿಂಗಳಿಂದ ಭಾರಿ ದೊಡ್ಡ ಕೊಡುಗೆ ನೀಡಿದ್ದಾನೆ. ಅದರಲ್ಲೂ ಭರ್ಜರಿ ಮಳೆಗೆ, ಕರ್ನಾಟಕದ ಪ್ರತಿಯೊಂದು ಜಿಲ್ಲೆ ಕೂಡ ತಂಪಾಗಿದೆ. ಹೀಗಿದ್ದಾಗಲೇ ಮುಂಗಾರು ಮಳೆಯ ಮೋಡಗಳು ಕರ್ನಾಟಕದ ಕಡೆಗೆ ಓಡೋಡಿ ಬರುತ್ತಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಕರ್ನಾಟಕ ಪ್ರವೇಶಿಸಲಿವೆ. ಈ ಸಮಯದಲ್ಲೇ ಕರ್ನಾಟಕದ ಜಲಾಶಯಗಳು ನಿಧಾನವಾಗಿ ತುಂಬುತ್ತಿವೆ. ಅದರಲ್ಲೂ ಈಗ ಕಾವೇರಿ ಕೊಳ್ಳದಲ್ಲಿ ಭರ್ಜರಿ ನೀರು ಹರಿದು ಬರ್ತಿದೆ.

ಕರ್ನಾಟಕದ ಡ್ಯಾಂಗಳ ನೀರಿನ ಮಟ್ಟ
1) ಕೆಆರ್‌ಎಸ್ ಜಲಾಶಯ: 49.45 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಡ್ಯಾಂ ಇದೀಗ 12.51 ಟಿಎಂಸಿ ನೀರು ಸಂಗ್ರಹ ಹೊಂದಿದೆ. ಹಾಗೇ ಕೆಆರ್‌ಎಸ್ ಜಲಾಶಯಕ್ಕೆ 1,798 ಕ್ಯುಸೆಕ್ ನೀರು ಹರಿದು ಬರುತ್ತಿದ್ದು ಕಳೆದ ವರ್ಷ ಈ ಸಮಯಕ್ಕೆ ಕೆಆರ್‌ಎಸ್ ಡ್ಯಾಂನಲ್ಲಿ 10.66 ಟಿಎಂಸಿ ನೀರು ಸಂಗ್ರಹ ಆಗಿತ್ತು. ಇದೀಗ 542 ಕ್ಯುಸೆಕ್ ನೀರನ್ನ ಡ್ಯಾಂನಿಂದ ಹೊರಗೆ ಬಿಡಲಾಗುತ್ತಿದೆ.
2) ಕಬಿನಿ ಜಲಾಶಯ: ಕಬಿನಿ ಡ್ಯಾಂ ಕರ್ನಾಟಕದ ಪ್ರಮುಖ ಡ್ಯಾಂ ಪೈಕಿ ಒಂದಾಗಿದೆ. ಇಲ್ಲಿ 19.52 ಟಿಎಂಸಿ ಗರಿಷ್ಠ ನೀರು ಸಂಗ್ರಹ ಮಾಡಬಹುದು. ಆದರೆ ಈಗ ಕೇವಲ 7.55 ಟಿಎಂಸಿ ನೀರು ಸಂಗ್ರಹ ಇದ್ದು, 330 ಕ್ಯುಸೆಕ್ ನೀರು ಒಳಗೆ ಹರಿದು ಬರುತ್ತಿದೆ. ಭಾರಿ ಮಳೆಯ ಹಿನ್ನೆಲೆ ಮೈಸೂರಿನ ಈ ಜಲಾಶಯಕ್ಕೆ ನೀರು ಬರುತ್ತಿದ್ದು 300 ಕ್ಯುಸೆಕ್ ನೀರನ್ನ ಹೊರ ಬಿಡಲಾಗುತ್ತಿದೆ.
3) ಹೇಮಾವತಿ ಡ್ಯಾಂ: ಕಾವೇರಿ ಉಪನದಿ ಹೇಮಾವತಿಗೆ ಕಟ್ಟಿದ ಡ್ಯಾಂ ಹೇಮವತಿ ಜಲಾಶಯ ಇಲ್ಲಿ 37.10 ಟಿಎಂಸಿ ಸಾಮರ್ಥ್ಯ ಇದ್ದು, ಇದೀಗ 9.90 ಟಿಎಂಸಿ ಉಳಿದಿದೆ. ಆದರೆ ಕಳೆದ ವರ್ಷ ಇದೇ ವೇಳೆಗೆ ಬರೋಬ್ಬರಿ 16.91 ಟಿಎಂಸಿ ನೀರು ಹೇಮಾವತಿ ಡ್ಯಾಂನಲ್ಲಿ ಸಂಗ್ರಹವಾಗಿ ಆಗಿತ್ತು. 579 ಕ್ಯುಸೆಕ್ ಒಳಹರಿವು ಇದ್ದು, 250 ಕ್ಯುಸೆಕ್ ಹೊರಗೆ ಬಿಡಲಾಗುತ್ತಿದೆ.
4) ಹಾರಂಗಿ ಜಲಾಶಯ: ಹಾರಂಗಿ ಡ್ಯಾಂನಲ್ಲಿ ನೀರೆ ಇಲ್ಲ ಹೀಗಾಗಿ ಡೆಡ್ ಸ್ಟೋರೆಜ್‌ಗೆ ಡ್ಯಾಂ ತಲುಪಿದೆ. ಗರಿಷ್ಠ 8.50 ಟಿಎಂಸಿ ಸಾಮರ್ಥ್ಯ ಇರುವ ತುಂಗಭದ್ರಾ ಡ್ಯಾಂನಲ್ಲಿ ಕೇವಲ 3.03 ಟಿಎಂಸಿ ನೀರು ಉಳಿದಿದೆ. ಕಳೆದ ವರ್ಷ 2.62 ಟಿಎಂಸಿ ನೀರು ಸಂಗ್ರಹ ಇತ್ತು. ಹೀಗಾಗಿ ಇಲ್ಲಿ ಕೂಡ ಜನ ಮಳೆಗಾಗಿ ಕಾಯುತ್ತಿದ್ದಾರೆ.
ಕರ್ನಾಟಕದ ಬೋರ್‌ಗಳಲ್ಲಿ ನೀರು ಖಾಲಿ!
ಅಂತರ್ಜಲ ಕುಸಿತ ದೊಡ್ಡ ಸಮಸ್ಯೆ ತಂದೊಡ್ಡಿದೆ, ಕರ್ನಾಟಕದ ಬಹುತೇಕ ಬೋರ್‌ಗಳಲ್ಲಿ ನೀರು ಖಾಲಿ ಆಗಿದೆ. ಅಂತರ್ಜಲ ಕುಸಿಯುತ್ತಿರುವ ಕಾರಣಕ್ಕೆ ಜನರೀಗ ಕುಡಿಯುವ ನೀರಿಗೂ ಪರದಾಡುತ್ತಿದ್ದಾರೆ. ಆದರೆ ಕಳೆದ ಒಂದು ತಿಂಗಳಿಂದ ಮಳೆ ಬರುತ್ತಿದ್ದು ಕೆರೆ ಮತ್ತು ತೊರೆಗಳು ನಿಧಾನವಾಗಿ ತುಂಬುತ್ತಿವೆ. ಈ ನೀರಿಂದ ಇನ್ನೂ ಒಂದು ಇಲ್ಲ 2 ತಿಂಗಳು ದಿನದೂಡಬಹುದು. ಆದರೆ ಜೂನ್ & ಜುಲೈಗೆ ಒಳ್ಳೆಯ ಮಳೆಯು ಬೀಳುವ ನಿರೀಕ್ಷೆ ಇರುವುದು ಖುಷಿ ಕೊಡುತ್ತಿದೆ. ಹೀಗೆ ರೈತರು ಉತ್ತಮವಾಗಿ ಮುಂಗಾರು ಮಳೆ ಬರಲಿದೆ ಅಂತಾ ಕಾಯುತ್ತಿದ್ದಾರೆ. ಈಗಾಗಲೇ, ಕೇರಳಕ್ಕೆ ಮುಂಗಾರು ಮಾರುತಗಳು ಎಂಟ್ರಿ ಕೊಟ್ಟಿದ್ದು. ಇನ್ನೇನು ಕರ್ನಾಟಕದಲ್ಲಿ ಕೂಡ ಮುಂಗಾರು ಮಳೆ ಅಬ್ಬರಿಸಲಿದೆ.
ಉತ್ತರ ಕರ್ನಾಟಕದಲ್ಲೂ ಮಳೆ
ಜೂನ್ 3 ರಂದು ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ರಾಯಚೂರು ಸೇರಿದಂತೆ ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಈ ಮೂಲಕ ಭಾರಿ, ಭರ್ಜರಿ ಮಳೆ ಆಗಮನಕ್ಕೆ ಇದೀಗ ಮುಹೂರ್ತ ಫಿಕ್ಸ್ ಆಗಿದೆ. ರೈತರು ಕೂಡ ಈ ಸುದ್ದಿಯ ಕೇಳಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ವಾತಾವರಣದಲ್ಲಿ ಯಾವುದೇ ಏರುಪೇರು ಆಗದೇ ಇದ್ದರೆ ಈ ಮುನ್ಸೂಚನೆ ನಿಜವಾಗಲಿದೆ. ಹಾಗೇ ಅಷ್ಟರಲ್ಲಿ ಮುಂಗಾರು ಮಾರುತಗಳ ಎಂಟ್ರಿ ಕೂಡ ಆಗಲಿದೆ.
ಕರ್ನಾಟಕದಲ್ಲಿ ಬಹುಬೇಗ ಮುಂಗಾರು ಮಳೆಯ ಅಬ್ಬರ ಶುರುವಾಗಿದೆ. ಈ ಮೂಲಕವಾಗಿ ಕನ್ನಡಿಗರಿಗೆ ವರುಣ ದೇವ ಸಿಹಿಸುದ್ದಿ ನೀಡಿದ್ದಾನೆ. ಯಾಕಂದ್ರೆ ಮಳೆ ಇಲ್ಲದೆ ಬೆಳೆ ಒಣಗಿ, ಪರದಾಡುತ್ತಿದ್ದ ಸಮಯಕ್ಕೆ ಪೂರ್ವ ಮುಂಗಾರು ಮಳೆ ಕೈಹಿಡಿದು ನಿಲ್ಲಿಸಿತ್ತು. ಈಗ ಮತ್ತೆ ಮುಂಗಾರು ಮಳೆ ಕೂಡ ಕನ್ನಡಿಗರ ಬೆನ್ನಿಗೆ ನಿಂತಿದೆ. ಈ ಮೂಲಕ ಭರ್ಜರಿ ಮಳೆಯಲ್ಲಿ ಕನ್ನಡಿಗರು ಫುಲ್ ಖುಷ್ ಆಗಿದ್ದಾರೆ. ಅಲ್ಲದೆ ಮುಂದಿನ 10 ದಿನಗಳ ಕಾಲ ಭರ್ಜರಿ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಮಳೆ ಬೀಳುವುದು ಯಾವ ಯಾವ ಜಿಲ್ಲೆಗಳಲ್ಲಿ ಗೊತ್ತಾ?












Click it and Unblock the Notifications