Karnataka Dams Water Level: ಕೆಆರ್‌ಎಸ್ ಸೇರಿ ರಾಜ್ಯದ ಪ್ರಮುಖ ಡ್ಯಾಂಗಳ ಒಳಹರಿವು ಹೆಚ್ಚಳ; ನೀರಿನ ಮಟ್ಟ ಎಷ್ಟಿದೆ?
Karnataka Dam Water Level: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಈ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆ, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಈಗಾಗಲೇ ಮೈಸೂರು, ಬೆಂಗಳೂರು, ಮಂಡ್ಯ ಜಿಲ್ಲೆಗಳ ಜೀನವಾಡಿ ಕೆಆರ್‌ಎಸ್ ಭರ್ತಿಯಾಗಿದೆ. ಹಾಗಾದ್ರೆ ಇಂದು (ಜುಲೈ 3) ಇನ್ನುಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ.
ಕಳೆದ ಕೆಲ ದಿನಗಳಿಂದ ತಗ್ಗಿದ್ದ ಮುಂಗಾರು ಮಳೆ ಆರ್ಭಟ ಇದೀಗ ಮತ್ತೆ ಚುರುಕು ಪಡೆದಿದ್ದು, ಪರಿಣಾಮ ಈಗಾಗಕೇ ಕೃಷ್ಣರಾಜನಗರ ಸಾಗರ ಜಲಾಶಯ ಭರ್ತಿಯಾಗಿದೆ. ಇನ್ನೂ ಕೆಲವು ತುಂಬುವ ಹಂತದಲ್ಲಿದೆ. ಗುರುವಾರ ಕೆಆರ್‌ಎಸ್ ಸೇರಿದಂತೆ ತುಂಗಾಭದ್ರಾ, ಭದ್ರಾ, ಕಬಿನಿ, ಹೇಮಾವತಿ, ಮಲಪ್ರಭಾ, ಘಟಪ್ರಭಾ, ಹಾರಂಗಿ, ಆಲಮಟ್ಟಿ, ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.74 ಅಡಿ
* ಒಳಹರಿವು - 15,180 ಕ್ಯೂಸೆಕ್
* ಹೊರಹರಿವು - 15,941 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,277.46 ಅಡಿ
* ಒಳಹರಿವು - 7,496 ಕ್ಯೂಸೆಕ್
* ಹೊರಹರಿವು - 5,729 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 517.26 ಮೀಟರ್
* ಒಳಹರಿವು - 85,537 ಕ್ಯೂಸೆಕ್
* ಹೊರಹರಿವು - 80,000 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,625.20 ಅಡಿ
* ಒಳಹರಿವು - 32,767 ಕ್ಯೂಸೆಕ್
* ಹೊರಹರಿವು - 10,400 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.5 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,062.65 ಅಡಿ
* ಒಳಹರಿವು - 5,704 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,786.5 ಅಡಿ
* ಒಳಹರಿವು - 20,620 ಕ್ಯೂಸೆಕ್
* ಹೊರಹರಿವು - 5,645 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 164 ಅಡಿ
* ಒಳಹರಿವು - 11,875 ಕ್ಯೂಸೆಕ್
* ಹೊರಹರಿವು - 3,391 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,148.55 ಅಡಿ
* ಒಳಹರಿವು - 12,458 ಕ್ಯೂಸೆಕ್
* ಹೊರಹರಿವು - 1,453 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,917.47 ಅಡಿ
* ಒಳಹರಿವು - 13,521 ಕ್ಯೂಸೆಕ್
* ಹೊರಹರಿವು - 11,910 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,852.61 ಅಡಿ
* ಒಳಹರಿವು - 3,688 ಕ್ಯೂಸೆಕ್
* ಹೊರಹರಿವು - 1,500 ಕ್ಯೂಸೆಕ್












Click it and Unblock the Notifications