Almatti Dam: ಭರ್ಜರಿ ಮಳೆಯಿಂದ ಆಲಮಟ್ಟಿ ​ಭರ್ತಿಗೆ 1 ಅಡಿ ಮಾತ್ರ ಬಾಕಿ

ಬೆಂಗಳೂರು, ಜುಲೈ 22: ರಾಜ್ಯಾದ್ಯಂತ ಕಳೆದ 15 ದಿನಗಳಿಂದ ಅಬ್ಬರದ ಮಳೆಯಾಗುತ್ತಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದ ಜನತೆ ರೋಸಿ ಹೋಗಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬೆಳಗಾವಿ, ಬೀದರ್, ಕಲಬುರಗಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Karnataka Dams Water level Today Alamatti dam water level as on July 22th

ಇನ್ನೂ ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ , ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತದಲ್ಲಿದೆ.

ಇತ್ತ ಕೆ ಆರ್‌ ಎಸ್‌ ಡ್ಯಾಂ ಗೆ ಭರ್ಜರಿ ಒಳಹರಿವು ಹೆಚ್ಚಾಗಿದ್ದು, ರೈತರು ಸಂತಸದಲ್ಲಿದ್ದಾರೆ. ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಆಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಆಲಮಟ್ಟಿ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

519.60 ಮೀಟರ್ ಎತ್ತರದ ಆಲಮಟ್ಟಿ ಡ್ಯಾಂನಲ್ಲಿ ಇಂದು (ಜುಲೈ 22) 517.90 ಮೀಟರ್ ನೀರು ಸಂಗ್ರಹವಾಗಿದೆ. ಡ್ಯಾಂಗೆ 87,217 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಡ್ಯಾಂನಿಂದ 26 ಕ್ರಸ್ಟ್ ಗೇಟ್ ಗಳ ಮೂಲಕ 1,00,064 ಕ್ಯೂಸೆಕ್ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ. 123 ಟಿಎಂಸಿ ನೀರು ಸಂಗ್ರಹ ಮಾಡಿಕೊಳ್ಳುವ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 96.306 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ಆಲಮಟ್ಟಿ ಡ್ಯಾಂ ಭರ್ತಿಗೆ ಕೇವಲ 1.30 ಮೀಟರ್ ಮಾತ್ರ ಬಾಕಿಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+