Karnataka Dam Water Level: ಕೆಆರ್‌ಎಸ್ ಡ್ಯಾಂಗೆ ಭರ್ಜರಿ ಒಳಹರಿವು; ರಾಜ್ಯದ ಜಲಾಶಯಗಳ ನೀರಿನ ಮಟ್ಟ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕದಲ್ಲಿ ಉತ್ತಮ ಮುಂಗಾರು ಮಳೆಯ ಪರಿಣಾಮ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಉತ್ತಮ ಮಳೆಯಿಂದಾಗಿ ಹಲವು ಡ್ಯಾಂಗಳು ಭರ್ತಿಯ ಹಂತ ತಲುಪಿವೆ. ಕೆಆರ್‌ಎಸ್‌ಗೆ ಒಳಹರಿವು ಗಣನೀಯವಾಗಿ ಏರಿಕೆಯಾಗಿದ್ದು, ತುಂಗಭದ್ರಾ, ಭದ್ರಾ, ಹೇಮಾವತಿ, ಹಾರಂಗಿ, ಆಲಮಟ್ಟಿ ಸೇರಿದಂತೆ ಹಲವು ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮುಂಗಾರು ಮಳೆ ಮುಂದುವರಿದಿರುವ ಪರಿಣಾಮ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಬುಧವಾರ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ಒಳಹರಿವು ಇದೀಗ 17,427 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಎರಡು ದಿನಗಳ ಹಿಂದೆ ಕೇವಲ 1,682 ಕ್ಯೂಸೆಕ್‌ನಷ್ಟಿದ್ದ ಒಳಹರಿವು ಹಲವು ಪಟ್ಟು ಹೆಚ್ಚಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ.

Karnataka Dams Water level Today

ಕೆಆರ್‌ಎಸ್‌ ಜಲಾಶಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್‌ನಲ್ಲಿ ಸದ್ಯ 109.75 ಅಡಿ ನೀರಿನ ಮಟ್ಟ ದಾಖಲಾಗಿದ್ದು, ಒಟ್ಟು 49.452 ಟಿಎಂಸಿ ಸಾಮರ್ಥ್ಯದಲ್ಲಿ 31.471 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದಿಂದ 4,514 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಕಬಿನಿ ಜಲಾಶಯ

ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ 7,676 ಕ್ಯೂಸೆಕ್ ಒಳಹರಿವು ದಾಖಲಾಗಿದೆ. 84 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಸದ್ಯ 72.76 ಅಡಿ ನೀರಿದ್ದು, 13.07 ಟಿಎಂಸಿ ನೀರು ಸಂಗ್ರಹವಾಗಿದೆ. ನದಿ ಹಾಗೂ ವಿವಿಧ ಕಾಲುವೆಗಳಿಗೆ ಒಟ್ಟು 7,760 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.

ತುಂಗಭದ್ರಾ, ಭದ್ರಾ ಜಲಾಶಯಗಳಲ್ಲೂ ನೀರು

ತುಂಗಭದ್ರಾ ಅಣೆಕಟ್ಟು ಶೇ.89.81ರಷ್ಟು ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. 1,633 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಪ್ರಸ್ತುತ 1,630.41 ಅಡಿ ನೀರಿದ್ದು, 95.619 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನು ಭದ್ರಾ ಜಲಾಶಯ ಶೇ.84.25ರಷ್ಟು ಭರ್ತಿಯಾಗಿದೆ. ಉತ್ತಮ ಮಳೆ ಹಾಗೂ ಒಳಹರಿವಿನಿಂದ ಜಲಾಶಯದ ನೀರಿನ ಮಟ್ಟದಲ್ಲಿ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.

ಹೇಮಾವತಿ, ಮಲಪ್ರಭಾದಲ್ಲೂ ಏರಿಕೆ

ಹಾಸನ ಜಿಲ್ಲೆಯ ಹೇಮಾವತಿ ಜಲಾಶಯ ಶೇ.81.10ರಷ್ಟು ಭರ್ತಿಯಾಗಿದ್ದು, 30.092 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 2,210 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಅಲ್ಲದೇ ಇದೇ ವೇಳೆ ಮಲಪ್ರಭಾ ಜಲಾಶಯ ಶೇ.59.67ರಷ್ಟು ಭರ್ತಿಯಾಗಿದೆ. ಮಳೆ ಮುಂದುವರಿದರೆ ಜಲಾಶಯದ ನೀರಿನ ಸಂಗ್ರಹ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಹಾರಂಗಿ ಜಲಾಶಯ

ಇತ್ತ ಕೊಡಗು ಜಿಲ್ಲೆಯ ಹಾರಂಗಿ ಜಲಾಶಯ ಶೇ.98.12ರಷ್ಟು ಭರ್ತಿಯಾಗಿದೆ. ಗರಿಷ್ಠ ಮಟ್ಟ ತಲುಪಲು ಕೆಲವೇ ಅಡಿ ಬಾಕಿಯಿರುವ ಜಲಾಶಯಕ್ಕೆ ಸದ್ಯ 4,275 ಕ್ಯೂಸೆಕ್ ಒಳಹರಿವು ಬರುತ್ತಿದೆ. ಹೀಗಾಗಿ ಹಾರಂಗಿ ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರ ನಿಗಾ ವಹಿಸಲಾಗಿದೆ.

ಆಲಮಟ್ಟಿ, ಹಿಡ್ಕಲ್‌ನಲ್ಲೂ ಭರ್ಜರಿ ನೀರು

ಉತ್ತರ ಕರ್ನಾಟಕದ ಪ್ರಮುಖ ಜಲಾಶಯಗಳಾದ ಆಲಮಟ್ಟಿ ಹಾಗೂ ಹಿಡ್ಕಲ್ ಡ್ಯಾಮ್‌ಗಳಲ್ಲೂ ನೀರಿನ ಸಂಗ್ರಹ ಭರ್ಜರಿಯಾಗಿದೆ. ಎರಡೂ ಜಲಾಶಯಗಳು ಶೇ.99ಕ್ಕೂ ಹೆಚ್ಚು ಭರ್ತಿಯಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಪ್ರಸ್ತುತ 122.48 ಟಿಎಂಸಿ ನೀರು ಸಂಗ್ರಹವಾಗಿದೆ.

ಒಟ್ಟಾರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಉತ್ತಮವಾಗಿರುವುದು ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಆಶಾದಾಯಕ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲೂ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆ ಮುಂದುವರಿದರೆ ಹಲವು ಜಲಾಶಯಗಳು ಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+