ರಾಜ್ಯದ 27 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ; ಇಂದಿನ ಡ್ಯಾಂಗಳ ನೀರಿನ ಮಟ್ಟ ಎಷ್ಟು ?
ಬೆಂಗಳೂರು, ಏಪ್ರಿಲ್ 17: ಯುಗಾದಿಯ ಬಳಿಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕರ್ನಾಟಕ ದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 18 ರಿಂದ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವರ್ಷ ಮುಂಗಾರು ಕೂಡ ವಾಡಿಕೆಗಿಂತ ಹೆಚ್ಚಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕಳೆದ ವರ್ಷ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಜಲಾಶಯಗಳು ಬರಿದಾಗಿದ್ವು, ಇದೀಗ ರಾಜ್ಯದ ಕೆಲವು ಭಾಗದಲ್ಲಿ ಮಳೆಯಾಗಿದೆ. ಹಾಗಾದ್ರೆ ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕ ಏಪ್ರಿಲ್ 17 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 12.28 ಟಿಎಂಸಿ
ಒಳಹರಿವು - 137 ಕ್ಯೂಸೆಕ್
ಹೊರಹರಿವು - 768 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.13 ಟಿಎಂಸಿ
ಒಳಹರಿವು - 161 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 33.39 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 1556 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ-03.92 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 249 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 08.58 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 1394 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 24.64 ಟಿಎಂಸಿ
ಒಳಹರಿವು - 523 ಕ್ಯೂಸೆಕ್
ಹೊರಹರಿವು - 2869 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 698.13 ಮೀಟರ್
ಇಂದಿನ ನೀರಿನ ಮಟ್ಟ - 8.33 ಟಿಎಂಸಿ
ಒಳಹರಿವು -16 ಕ್ಯೂಸೆಕ್
ಹೊರಹರಿವು - 800 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 17.85 ಟಿಎಂಸಿ
ಒಳಹರಿವು - 171 ಕ್ಯೂಸೆಕ್
ಹೊರಹರಿವು - 414 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -20.93 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 2482 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 9.96 ಟಿಎಂಸಿ
ಒಳಹರಿವು -7 ಕ್ಯೂಸೆಕ್
ಹೊರಹರಿವು - 330 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 44.56 ಟಿಎಂಸಿ
ಒಳಹರಿವು- 0 ಕ್ಯೂಸೆಕ್
ಹೊರಹರಿವು- 2611 ಕ್ಯೂಸೆಕ್












Click it and Unblock the Notifications