ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು,ಏಪ್ರಿಲ್25: ಬಿಸಿಲಿನ ತಾಪಕ್ಕೆ ರೋಸಿ ಹೋಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕೊಪ್ಪಳ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳೆದ ಬಾರಿ ಮಳೆಯಾಗದೆ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಜಲಾಶಯಗಳು ಬರಿದಾಗಿದ್ವು, ಇದೀಗ ರಾಜ್ಯದ ಕೆಲವು ಭಾಗದಲ್ಲಿ ಮಳೆಯಾಗುತ್ತಿದ್ದು, ಹಾಗಾದರೆ ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ ಸೇರಿದಂತೆ ಕರ್ನಾಟಕ ಏಪ್ರಿಲ್ 25 ರಂದು ಪ್ರಮುಖ ಜಲಾಶಯಗಳಲ್ಲಿ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ
1. ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ -38.04 ಮೀಟರ್
ಇಂದಿನ ನೀರಿನ ಮಟ್ಟ- 11.74 ಟಿಎಂಸಿ
ಒಳಹರಿವು - 94 ಕ್ಯೂಸೆಕ್
ಹೊರಹರಿವು - 755 ಕ್ಯೂಸೆಕ್
2. ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 871.38 ಮೀಟರ್
ಇಂದಿನ ನೀರಿನ ಮಟ್ಟ - 3.09 ಟಿಎಂಸಿ
ಒಳಹರಿವು - 177 ಕ್ಯೂಸೆಕ್
ಹೊರಹರಿವು - 200 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 519.60 ಮೀಟರ್
ಇಂದಿನ ನೀರಿನ ಮಟ್ಟ - 32.76 ಟಿಎಂಸಿ
ಒಳಹರಿವು -0 ಕ್ಯೂಸೆಕ್
ಹೊರಹರಿವು - 896 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 497.71 ಮೀಟರ್
ಇಂದಿನ ನೀರಿನ ಮಟ್ಟ- 3.77 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 249 ಕ್ಯೂಸೆಕ್
5. ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 633.80 ಮೀಟರ್
ಇಂದಿನ ನೀರಿನ ಮಟ್ಟ - 08.30 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 194 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 554.44 ಮೀಟರ್
ಇಂದಿನ ನೀರಿನ ಮಟ್ಟ - 22.55 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 2594 ಕ್ಯೂಸೆಕ್
7. ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ - 696.13 ಮೀಟರ್
ಇಂದಿನ ನೀರಿನ ಮಟ್ಟ - 7.72 ಟಿಎಂಸಿ
ಒಳಹರಿವು -51 ಕ್ಯೂಸೆಕ್
ಹೊರಹರಿವು - 800 ಕ್ಯೂಸೆಕ್
8. ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 657.73 ಮೀಟರ್
ಇಂದಿನ ನೀರಿನ ಮಟ್ಟ - 16.44 ಟಿಎಂಸಿ
ಒಳಹರಿವು - 103 ಕ್ಯೂಸೆಕ್
ಹೊರಹರಿವು - 3437 ಕ್ಯೂಸೆಕ್
9. ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ - 662.91 ಮೀಟರ್
ಇಂದಿನ ನೀರಿನ ಮಟ್ಟ -18.59 ಟಿಎಂಸಿ
ಒಳಹರಿವು - 0 ಕ್ಯೂಸೆಕ್
ಹೊರಹರಿವು - 3566 ಕ್ಯೂಸೆಕ್
10. ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ -890.58 ಮೀಟರ್
ಇಂದಿನ ನೀರಿನ ಮಟ್ಟ - 9.70 ಟಿಎಂಸಿ
ಒಳಹರಿವು -7 ಕ್ಯೂಸೆಕ್
ಹೊರಹರಿವು - 330 ಕ್ಯೂಸೆಕ್
11. ಸೂಫಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಇಂದಿನ ನೀರಿನ ಮಟ್ಟ- 42.60 ಟಿಎಂಸಿ
ಒಳಹರಿವು- 0 ಕ್ಯೂಸೆಕ್
ಹೊರಹರಿವು- 2952 ಕ್ಯೂಸೆಕ್












Click it and Unblock the Notifications