Karnataka Dam Water Level: ಪ್ರಮುಖ ಜಲಾಶಯಗಳಿಗೆ ಭರ್ಜರಿ ಒಳಹರಿವು; ನೀರಿನ ಮಟ್ಟದಲ್ಲಿ ಏರಿಕೆ, ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಪ್ರಮುಖ ಜಲಾಶಯಗಳ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಲಾಶಯಗಳಿಗೆ ಉತ್ತಮ ಪ್ರಮಾಣದ ನೀರಿನ ಒಳಹರಿವು ಮುಂದುವರಿದಿದೆ. ಕೆಆರ್‌ಎಸ್‌, ಕಬಿನಿ, ಹೇಮಾವತಿ, ಆಲಮಟ್ಟಿ, ಬಸವಸಾಗರ ಹಾಗೂ ಲಿಂಗನಮಕ್ಕಿ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ.

ವಿಶೇಷವಾಗಿ ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳಿಗೆ ಭಾರಿ ಪ್ರಮಾಣದ ಒಳಹರಿವು ದಾಖಲಾಗುತ್ತಿದ್ದು, ಎರಡೂ ಜಲಾಶಯಗಳ ನೀರಿನ ಮಟ್ಟ ಗರಿಷ್ಠ ಮಟ್ಟದ ಸಮೀಪದಲ್ಲಿದೆ. ಇತ್ತ ಕರಾವಳಿ ಹಾಗೂ ಮಲೆನಾಡಿನಲ್ಲಿ ಮತ್ತೆ ಮಳೆಯಾಗುವುತ್ತಿರುವುದರಿಂದ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾದರೆ ತುಂಗಭದ್ರಾ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟು ಎಂಬ ಮಾಹಿತಿ ಇಲ್ಲಿದೆ ನೋಡಿ.

Karnataka Dams Water level Today KRS Kabini Bhadra dam water level as on August 11th 2026

ಕೆಆರ್‌ಎಸ್‌ ಜಲಾಶಯ

ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಯಾಗಿದ್ದು, ಸದ್ಯ ನೀರಿನ ಮಟ್ಟ 109.08 ಅಡಿ ಇದೆ. ಜಲಾಶಯಕ್ಕೆ 8,357 ಕ್ಯೂಸೆಕ್‌ ಒಳಹರಿವು ಇದ್ದು, 2,325 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಕೆಆರ್‌ಎಸ್‌ನ ಒಟ್ಟು ಸಂಗ್ರಹ ಸಾಮರ್ಥ್ಯ 49.452 ಟಿಎಂಸಿಯಾಗಿದ್ದು, ಸದ್ಯ 30.905 ಟಿಎಂಸಿ ನೀರು ಸಂಗ್ರಹವಾಗಿದೆ.

ಕಬಿನಿ ಜಲಾಶಯ

ಮೈಸೂರು ಭಾಗದ ಕಬಿನಿ ಜಲಾಶಯ ಕೂಡ ಗರಿಷ್ಠ ಮಟ್ಟದ ಸಮೀಪದಲ್ಲಿದೆ. ಜಲಾಶಯದ ಗರಿಷ್ಠ ಮಟ್ಟ 84 ಅಡಿಯಾಗಿದ್ದು, ಸದ್ಯ 82.76 ಅಡಿ ನೀರಿನ ಮಟ್ಟ ದಾಖಲಾಗಿದೆ. ಜಲಾಶಯದಲ್ಲಿ 18.71 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಟ್ಟು ಸಾಮರ್ಥ್ಯ 19.52 ಟಿಎಂಸಿಯಾಗಿದೆ. ಜಲಾಶಯಕ್ಕೆ 9,660 ಕ್ಯೂಸೆಕ್‌ ಒಳಹರಿವು ಇದ್ದು, ನದಿಗೆ 11,583 ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗುತ್ತಿದೆ. ಎಡ ಮತ್ತು ಬಲದಂಡೆ ಕಾಲುವೆಗಳಿಗೆ ಸದ್ಯ ನೀರು ಹರಿಸಲಾಗುತ್ತಿಲ್ಲ.

ಹೇಮಾವತಿ ಜಲಾಶಯ

ಹಾಸನ ಜಿಲ್ಲೆಯ ಗೊರೂರು ಸಮೀಪದ ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2,922 ಅಡಿ ಆಗಿದೆ. ಸದ್ಯ ಜಲಾಶಯದ ನೀರಿನ ಮಟ್ಟ 2,915.43 ಅಡಿ ಇದ್ದು, 31.53 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 3,117 ಕ್ಯೂಸೆಕ್‌ ಒಳಹರಿವು ಇದ್ದು, ನದಿಗೆ 500 ಕ್ಯೂಸೆಕ್‌ ನೀರು ಹೊರಬಿಡಲಾಗುತ್ತಿದೆ. ಕಾಲುವೆಗಳಿಗೆ ಸದ್ಯ ನೀರು ಬಿಡುಗಡೆ ಮಾಡಲಾಗುತ್ತಿಲ್ಲ. ಕಳೆದ ವರ್ಷದ ಇದೇ ಅವಧಿಯಲ್ಲಿ ಹೇಮಾವತಿ ಜಲಾಶಯದಲ್ಲಿ 2,921.95 ಅಡಿ ನೀರಿನ ಮಟ್ಟ ಹಾಗೂ 37.055 ಟಿಎಂಸಿ ನೀರು ಸಂಗ್ರಹವಾಗಿತ್ತು.

ಆಲಮಟ್ಟಿ ಜಲಾಶಯ

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯ ಕೂಡ ಗರಿಷ್ಠ ಮಟ್ಟದ ಸಮೀಪದಲ್ಲಿದೆ. ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಆಗಿದ್ದು, ಸದ್ಯ 519.46 ಮೀಟರ್ ನೀರಿನ ಮಟ್ಟ ದಾಖಲಾಗಿದೆ.
ಆಲಮಟ್ಟಿಗೆ ಬರೋಬ್ಬರಿ 69,104 ಕ್ಯೂಸೆಕ್‌ ಒಳಹರಿವು ಇದ್ದು, 61,280 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

ಬಸವಸಾಗರಕ್ಕೆ ಭಾರಿ ಒಳಹರಿವು

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯಕ್ಕೂ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 492.25 ಮೀಟರ್‌ ಆಗಿದ್ದು, ಸದ್ಯ 492.22 ಮೀಟರ್ ನೀರಿನ ಮಟ್ಟ ಇದೆ. ಜಲಾಶಯಕ್ಕೆ ಸುಮಾರು 75 ಸಾವಿರ ಕ್ಯೂಸೆಕ್‌ ಒಳಹರಿವು ಇದ್ದು, ಸುಮಾರು 69 ಸಾವಿರ ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

ಲಿಂಗನಮಕ್ಕಿ ಜಲಾಶಯದಲ್ಲೂ ಏರಿಕೆ

ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯಕ್ಕೂ ಒಳಹರಿವು ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಜಲಾಶಯದ ನೀರಿನ ಮಟ್ಟ 0.60 ಅಡಿ ಏರಿಕೆಯಾಗಿದೆ. ಸದ್ಯ ಜಲಾಶಯದ ನೀರಿನ ಮಟ್ಟ 1,792.15 ಅಡಿ ಇದ್ದು, 16,259 ಕ್ಯೂಸೆಕ್‌ ಒಳಹರಿವು ದಾಖಲಾಗಿದೆ. ಒಟ್ಟು ಸಂಗ್ರಹ ಸಾಮರ್ಥ್ಯಕ್ಕೆ ಹೋಲಿಸಿದರೆ ಸದ್ಯ 51.05% ನೀರು ಸಂಗ್ರಹವಾಗಿದೆ.

ಆದರೆ ಕಳೆದ ವರ್ಷದ ಇದೇ ದಿನ ಲಿಂಗನಮಕ್ಕಿಯಲ್ಲಿ ನೀರಿನ ಮಟ್ಟ 1,811.90 ಅಡಿ ಇದ್ದು, ಶೇ.84.78ರಷ್ಟು ನೀರು ಸಂಗ್ರಹವಾಗಿತ್ತು. ಹೀಗಾಗಿ ಈ ಬಾರಿ ಕಳೆದ ವರ್ಷಕ್ಕೆ ಹೋಲಿಸಿದರೆ ಲಿಂಗನಮಕ್ಕಿಯಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ.

ಒಟ್ಟಾರೆ, ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಮುಂದುವರಿದಿರುವುದರಿಂದ ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ವಿಶೇಷವಾಗಿ ಆಲಮಟ್ಟಿ, ಬಸವಸಾಗರ ಮತ್ತು ಕಬಿನಿ ಜಲಾಶಯಗಳು ಗರಿಷ್ಠ ಮಟ್ಟದ ಸಮೀಪದಲ್ಲಿದ್ದು, ಜಲಾಶಯಗಳಿಂದ ನೀರು ಹೊರಬಿಡುವ ಪ್ರಮಾಣದ ಮೇಲೂ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+