Karnataka Dam Water Level: ರಾಜ್ಯದಲ್ಲಿ ವರುಣಾರ್ಭಟ; ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ ಎಷ್ಟು? ತಿಳಿಯಿರಿ
ಬೆಂಗಳೂರು, ಆಗಸ್ಟ್ 12: ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದು, ಇನ್ನೂ ಮೂರ್ನಾಲ್ಕು ದಿನ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನೂ ಭಾರೀ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಕರ್ನಾಟಕದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ.
ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಆಗಸ್ಟ್ 13ರಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿರುವುದರಿಂದ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು,ಇತ್ತ ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಭರ್ಜರಿ ಮಳೆಯಿಂದ ಭದ್ರಾ, ಹಾರಂಗಿ, ಕಬಿನಿ, ಕೆಆರ್‌ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಇಂದು(ಆಗಸ್ಟ್ 12) ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಕೆಆರ್‌ಎಸ್ ಜಲಾಶಯ
* ಗರಿಷ್ಠ ಮಟ್ಟ (ಅಡಿಗಳಲ್ಲಿ): 124.8
* ಇಂದಿನ ಮಟ್ಟ: 124.4
* ಒಳಹರಿವು: 11,470
* ಹೊರಹರಿವು: 11,583 ಕ್ಯೂಸೆಕ್ಸ್
ಕಬಿನಿ ಜಲಾಶಯ
* ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00
* ಇಂದಿನ ಮಟ್ಟ: 2,281
* ಒಳಹರಿವು: 3,223
* ಹೊರಹರಿವು: 2550 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
* ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
* ಇಂದಿನ ಮಟ್ಟ: 2,921.98
* ಒಳಹರಿವು: 7398
* ಹೊರಹರಿವು:7675 ಕ್ಯೂಸೆಕ್ಸ್
ಹಾರಂಗಿ ಜಲಾಶಯ
* ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
* ಇಂದಿನ ಮಟ್ಟ: 2,855
* ಒಳಹರಿವು: 1,781
* ಹೊರಹರಿವು: 1,600 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
* ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
* ಇಂದಿನ ಮಟ್ಟ: 1,811.95
* ಒಳಹರಿವು: 7,737
* ಹೊರಹರಿವು: 7,562 ಕ್ಯೂಸೆಕ್ಸ್
ಸೂಪಾ ಜಲಾಶಯ
* ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
* ಇಂದಿನ ಮಟ್ಟ: 551.68
* ಒಳಹರಿವು: 2,945.15
* ಹೊರಹರಿವು: 1,329.82 ಕ್ಯೂಸೆಕ್ಸ್












Click it and Unblock the Notifications