Karnataka Dam Water Level: ಆಗಸ್ಟ್ 15 ರಂದು ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು? ಇಲ್ಲಿದೆ ಮಾಹಿತಿ
ಬೆಂಗಳೂರು, ಆಗಸ್ಟ್ 01: ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಭಾರೀ ಮಳೆ ಮುಂದುವರೆದಿದೆ. ಅದರಲ್ಲೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಹಲವು ಕಡೆ ಮಳೆಯಿಂದಾಗಿ ಜಲಾಶಯಗಳು, ನದಿಗಳು ಭರ್ತಿಯಾಗಿವೆ.
ರಾಜ್ಯದ ಪ್ರಮುಖ ಜಲಾಶಯಗಳಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ. ಕೃಷ್ಣಾ, ಕಾವೇರಿ ಹಾಗೂ ಭದ್ರಾ ನದಿ ಜಲಾನಯನ ಪ್ರದೇಶಗಳ ಜಲಾಶಯಗಳಲ್ಲಿ ಒಳಹರಿವು, ಹೊರಹರಿವು ಮತ್ತು ನೀರಿನ ಸಂಗ್ರಹದಲ್ಲಿ ಭಿನ್ನತೆ ಕಂಡುಬರುತ್ತಿದ್ದು, ಜಲಾಶಯಗಳ ನೀರು ನಿರ್ವಹಣೆ ಕುರಿತು ಚರ್ಚೆಗಳು ಆರಂಭವಾಗಿವೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಇಂದು(ಆಗಸ್ಟ್ 15) ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೆಆರ್‌ಎಸ್ ಜಲಾಶಯ
ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದಿಂದಲೂ ನೀರು ಹೊರಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಇಂದಿನ ನೀರಿನ ಮಟ್ಟ 109.75 ಅಡಿ ಇದೆ. ಕೆಆರ್‌ಎಸ್‌ನ ಗರಿಷ್ಠ ಸಂಗ್ರಹ ಸಾಮರ್ಥ್ಯ 49.452 ಟಿಎಂಸಿ ಆಗಿದ್ದು, ಪ್ರಸ್ತುತ 31.471 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 2,274 ಕ್ಯೂಸೆಕ್ ಒಳಹರಿವು ಇದ್ದರೆ, 2,699 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.
ಭದ್ರಾ ಜಲಾಶಯ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬಳಿಯ ಭದ್ರಾ ಜಲಾಶಯದಲ್ಲೂ ಉತ್ತಮ ಪ್ರಮಾಣದ ನೀರು ಸಂಗ್ರಹವಾಗಿದೆ. ಜಲಾಶಯದ ಪೂರ್ಣ ಸಾಮರ್ಥ್ಯದ ಮಟ್ಟ 186 ಅಡಿ ಆಗಿದ್ದು, ಇಂದಿನ ನೀರಿನ ಮಟ್ಟ 172.09 ಅಡಿ ಇದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 71.535 ಟಿಎಂಸಿ ಆಗಿದ್ದು, ಪ್ರಸ್ತುತ 55.871 ಟಿಎಂಸಿ ನೀರು ಸಂಗ್ರಹವಾಗಿದೆ. 4,438 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 202 ಕ್ಯೂಸೆಕ್ ಹೊರಹರಿವು ಇದೆ
ಆಲಮಟ್ಟಿ ಜಲಾಶಯ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಕೃಷ್ಣಾ ನದಿಗೆ ನಿರ್ಮಿಸಿರುವ ಆಲಮಟ್ಟಿ ಜಲಾಶಯಕ್ಕೆ ಉತ್ತಮ ಒಳಹರಿವು ಮುಂದುವರಿದಿದೆ. ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಆಗಿದ್ದು, ಇಂದು ನೀರಿನ ಮಟ್ಟ 519.51 ಮೀಟರ್ ಇದೆ. ಜಲಾಶಯಕ್ಕೆ 33,891 ಕ್ಯೂಸೆಕ್ ಒಳಹರಿವು ಇದ್ದರೆ, 22,155 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.
ಕಬಿನಿ ಜಲಾಶಯ
ಕಬಿನಿ ಜಲಾಶಯಕ್ಕೆ ಬರುತ್ತಿರುವ ನೀರಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 84 ಅಡಿ ಇದ್ದು, ಇಂದಿನ ನೀರಿನ ಮಟ್ಟ 81.63 ಅಡಿ ಇದೆ. ಒಟ್ಟು ಸಾಮರ್ಥ್ಯ 19.52 ಟಿಎಂಸಿ ಆಗಿದ್ದು, ಪ್ರಸ್ತುತ 18.01 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 8,701 ಕ್ಯೂಸೆಕ್ ಒಳಹರಿವು ಇದ್ದರೆ, 11,896 ಕ್ಯೂಸೆಕ್ ಹೊರಹರಿವು ಇದೆ. ಈ ಪೈಕಿ ಸುಮಾರು 3,168 ಕ್ಯೂಸೆಕ್ ಹೆಚ್ಚುವರಿ ನೀರು ನದಿಗೆ ಹರಿಯುತ್ತಿದೆ.
ಲಿಂಗನಮಕ್ಕಿ ಜಲಾಶಯ
ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಇಂದು 1794.05 ಅಡಿ ಇದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ ಆಗಿದ್ದು, ಪ್ರಸ್ತುತ ಸುಮಾರು 54.15% ನೀರು ಸಂಗ್ರಹವಾಗಿದೆ . ಇಂದು ಜಲಾಶಯದ ನೀರಿನ ಮಟ್ಟದಲ್ಲಿ 0.45 ಅಡಿ ಏರಿಕೆ ದಾಖಲಾಗಿದೆ.
ಲಿಂಗನಮಕ್ಕಿ ಜಲಾಶಯಕ್ಕೆ ಪ್ರಸ್ತುತ 13,921 ಕ್ಯೂಸೆಕ್ ಒಳಹರಿವು ಇದೆ. ಕಳೆದ ವರ್ಷ ಜಲಾಶಯದ ಮಟ್ಟ 1812.05 ಅಡಿ ಇದ್ದು, ಸುಮಾರು 85.25% ನೀರು ಸಂಗ್ರಹವಾಗಿತ್ತು . ಈ ಅಂಕಿ-ಅಂಶಗಳನ್ನು ಹೋಲಿಸಿದರೆ, ಈ ಬಾರಿ ಲಿಂಗನಮಕ್ಕಿಯಲ್ಲಿ ಕಳೆದ ವರ್ಷಕ್ಕಿಂತ ನೀರಿನ ಸಂಗ್ರಹ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ.


Click it and Unblock the Notifications
