Karnataka Dam Water Level: ರಾಜ್ಯದಲ್ಲಿ ಭರ್ಜರಿ ಮಳೆಯಿಂದ ಡ್ಯಾಂಗಳು ಭರ್ತಿ; 14 ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ

ಬೆಂಗಳೂರು, ಆಗಸ್ಟ್‌ 29: ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಮಳೆಯಾಗಿದೆ. ಕರ್ನಾಟಕದ ಬಹುತೇಕ ಕರೆ-ಕಟ್ಟೆ, ನದಿಗಳು ಮೈದುಂಬಿ ಹರಿಯುತ್ತಿವೆ. ಇತ್ತ ಭರ್ಜರಿ ಮಳೆಯಿಂದಾಗಿ ಜಲಾಯಶಗಳು ಕೂಡ ಭರ್ತಿಯಾಗಿವೆ. ರಾಜ್ಯದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ. 14ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಕರಾವಳಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇನ್ನೂ ಆಗಸ್ಟ್‌ 31ರವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತಮ ಮಳೆ ಹಿನ್ನೆಲೆ ರಾಜ್ಯದ ವಿವಿಧ ಡ್ಯಾಂಗಳು ಭರ್ತಿಯಾಗುತ್ತಿವೆ.

Karnataka Dams Water level Today KRS Kabini Bhadra dam water level as on August 29th

ಇಂದು ಸಹ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಜಾನೆಯೇ ಮಳೆಯಾಗಿದ್ದು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಲಾಶಯಗಳ ನೀರಿನ ಮಟ್ಟ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಇಂದು(ಆಗಸ್ಟ್‌ 29) ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಮುಖ ಜಲಾಶಯಗಳು ಒಟ್ಟು ಸಾಮರ್ಥ್ಯ(ಟಿಎಂಸಿ) ಇಂದಿನ ನೀರಿನ ಮಟ್ಟ(ಟಿಎಂಸಿ) ಒಳಹರಿವು(ಕ್ಯೂಸೆಕ್ಸ್)
​ಆಲಮಟ್ಟಿ ಜಲಾಶಯ 123.08 119.74 1,34,108
​ತುಂಗಭದ್ರಾ ಜಲಾಶಯ 105.79 88.75 21,678
​ಮಲಪ್ರಭಾ ಜಲಾಶಯ 37.73 35.93 15,835
​ಕೆ ಆರ್‌ ಎಸ್‌ 49.45 48.09 5,646
​ಲಿಂಗನಮಕ್ಕಿ ಜಲಾಶಯ 151.75 145.75 22,162
​ಕಬಿನಿ ಜಲಾಶಯ 71.54 65.57 8,159
​ಭದ್ರಾ ಜಲಾಶಯ 71.54 65.57 8,571
​ಫಟಪ್ರಭಾ ಜಲಾಶಯ 51.00 50.48 22,470
​ಹೇಮಾವತಿ ಜಲಾಶಯ 37.10 37.06 10,780
​ವರಾಹಿ ಜಲಾಶಯ 31.10 22.84 3,381
​ಹಾರಂಗಿ ಜಲಾಶಯ 8.50 8.30 998
​ಸೂಫಾ 145.33 128.92 23,261
​ನಾರಾಯಣಪುರ 33.31 28.65 1,47,699
​ವಾಣಿವಿಲಾಸ ಸಾಗರ 30.42 20.96 693
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+