Karnataka Dam Water Level: ರಾಜ್ಯದಲ್ಲಿ ಮಳೆ ಅಬ್ಬರ; ಹಲವು ಜಲಾಶಯ ಬಹುತೇಕ ಭರ್ತಿ: ರಾಜ್ಯದ ಡ್ಯಾಂಗಳ ನೀರಿನ ಮಟ್ಟ ಎಷ್ಟು?
ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು, ಕರ್ನಾಟಕದ ಬಹುತೇಕ ಜಲಾಶಯಗಳಿಗೆ ಜೀವ ಕಳೆ ಬಂದಿದೆ. ಇತ್ತ ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗುತ್ತಿದ್ದು, ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ.
ರಾಜ್ಯದಲ್ಲಿ ಬಹುತೇಕ ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾಸನ, ಕೊಡಗು, ಮೈಸೂರಿನಲ್ಲಿ ಕೂಡ ಮಳೆಯಾಗಲಿದೆ.

ಇನ್ನೂ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿ, ಜಲಾಶಯಗಳೆಲ್ಲ ತುಂಬಿ ಹರಿಯುತ್ತಿವೆ. ಇತ್ತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಜುಲೈ 12 ರಿಂದ 31 ರವರೆಗೆ ತಮಿಳುನಾಡಿಗೆ ಪ್ರತಿದಿನ ಒಂದು tmc ಅಡಿ ನೀರನ್ನು ಬಿಡುಗಡೆ ಮಾಡುತ್ತಿದೆ. ಇದರಿಂದ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳ ಗರಿಷ್ಠ ಸಾಮರ್ಥ್ಯ ಕೇವಲ 65 ಪ್ರತಿಶತದಷ್ಟು ಮಾತ್ರ ಇದೆ.
| ಕರ್ನಾಟಕದ ಪ್ರಮುಖ ಜಲಾಶಯಗಳು | ಗರಿಷ್ಠ ನೀರಿನ ಮಟ್ಟ (ಮೀ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
| ಆಲಮಟ್ಟಿ ಜಲಾಶಯ | 519.60 | 90.33 | 23678 | 3980 |
| ತುಂಗಭದ್ರಾ ಜಲಾಶಯ | 497.71 | 31.70 | 12194 | 409 |
| ಕೆ ಆರ್ ಎಸ್ | 38.04 | 26.68 | 2898 | 2257 |
| ಮಲಪ್ರಭಾ ಜಲಾಶಯ | 633.80 | 12.66 | 3296 | 194 |
| ಲಿಂಗನಮಕ್ಕಿ ಜಲಾಶಯ | 554.44 | 47.76 | 36197 | 491 |
| ಕಬಿನಿ ಜಲಾಶಯ | 696.13 | 19.00 | 19027 | 16750 |
| ಭದ್ರಾ ಜಲಾಶಯ | 657.73 | 26.37 | 14570 | 161 |
| ಘಟಪ್ರಭಾ ಜಲಾಶಯ | 662.91 | 25.43 | 7835 | 124 |
| ಹೇಮಾವತಿ ಜಲಾಶಯ | 890.58 | 21.53 | 10055 | 250 |
| ವರಾಹಿ ಜಲಾಶಯ | 594.36 | 7.51 | 5123 | 0 |
| ಹಾರಂಗಿ ಜಲಾಶಯ | 871.38 | 6.84 | 4691 | 200 |
| ಸೂಫಾ ಜಲಾಶಯ | 564.00 | 49.35 | 19357 | 1572 |
| ನಾರಾಯಣಪುರ ಜಲಾಶಯ | 492.25 | 21.85 | 3414 | 199 |
| ವಾಣಿವಿಲಾಸ ಸಾಗರ | 652.24 | 18.01 | 0 | 147 |












Click it and Unblock the Notifications