Karnataka Dam Water Level: ಭರ್ಜರಿ ಮಳೆ; ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ಎಷ್ಟು?
ಬೆಂಗಳೂರು, ಜೂನ್ 18: ಕರ್ನಾಟಕದಲ್ಲಿ ಈ ಮುಂಗಾರು ಆರಂಭಕ್ಕೂ ಮೊದಲೇ ಭರ್ಜರಿ ಮಳೆಯಾಗಿದೆ. ಈ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ 15 ದಿನಗಳಿಂದ ರಾಜ್ಯ ಮಲೆ ನಾಡು ಹಾಗೂ ಕರಾವಳಿ ಭಾಗದಲ್ಲಿ ಬಿಟ್ಟುಬಿಡದೆ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಾಗಿದೆ.
ಕಳೆದ ಹಲವು ದಿನಗಳಿಂದ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ ದಿನಗಳಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇತ್ತ ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯಲಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಭರ್ಜರಿ ಮಳೆಯಿಂದ ಭದ್ರಾ, ಹಾರಂಗಿ, ಕಬಿನಿ, ಕೆಆರ್ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಇಂದು(ಜೂನ್ 18) ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಹೆಚ್ಚುತ್ತಲೇ ಇದೆ KRS ನೀರಿನ ಮಟ್ಟ
ಹೌದು, ರಾಜ್ಯದಲ್ಲಿ ಬಹುದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ವರುಣಾರ್ಭಟದಿಂದ ಜಲಾಶಯಗಳಿಗೆ ಕಳೆ ಬಂದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನ ಒಳ ಹರಿವಿನಲ್ಲಿ ಮತ್ತಷ್ಟು ಹೆಚ್ಚಳವಾಗಿದೆ. 29,368 ಕ್ಯೂಸೆಕ್ಗೆ ಒಳ ಹರಿವು ಏರಿಕೆ ಆಗಿದೆ. ಸದ್ಯ ಕನ್ನಂಬಾಡಿ ಕಟ್ಟೆ 113 ಅಡಿಗೆ ಭರ್ತಿ ಆಗಿದೆ. 124.80 ಅಡಿ ಗರಿಷ್ಠ ಮಟ್ಟವನ್ನು ಕೆಆರ್ಎಸ್ ಹೊಂದಿದೆ. ಸಂಪೂರ್ಣ ಭರ್ತಿಗೆ ಕೇವಲ 11 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 35.118 ಟಿಎಂಸಿ ನೀರು ಸಂಗ್ರಹವಾಗಿದೆ.
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನಾದ್ಯಂತ ಮಳೆ ಅಬ್ಬರ ಜೋರಾಗಿದೆ. ಹೇಮಾವತಿ ನದಿ ನೀರಿನ ಹರಿವಿನಲ್ಲೂ ಹೆಚ್ಚಳವಾಗಿದ್ದು, ಹೇಮಾವತಿ ನದಿ ಪಾತ್ರದ ಅನೇಕ ಗ್ರಾಮಗಳು ಅಪಾಯದಲ್ಲಿವೆ. ಸಕಲೇಶಪುರ, ಆಲೂರು, ಬೇಲೂರಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯಕ್ಕೆ ಇಂದು ಬಾರಿ ಪ್ರಮಾಣದಲ್ಲಿ ಒಳಹರಿವು ಹೆಚ್ಚಿದೆ. ಹೇಮಾವತಿ ಜಲಾಶಯಕ್ಕೆ ಹೇಮಾವತಿ ಜಲಾಶಯಕ್ಕೆ ಒಂದೇ ದಿನದಲ್ಲಿ 11,270 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಸದ್ಯ ಹೇಮಾವತಿ ಜಲಾಶಯಕ್ಕೆ 19,546 ಕ್ಯೂಸೆಕ್ ಒಳಹರಿವಿದೆ.
ಭದ್ರಾ ಡ್ಯಾನ ಇದೀಗ ಪ್ರಸ್ತುತ ನೀರಿನ ಮಟ್ಟ40,759 ಟಿಎಂಸಿ ಇದ್ದು, ಒಳ ಹರಿವು 8,483 ಕ್ಯೂಸೆಕ್ ಇದೆ. ಹೊರ ಹರಿವು : 1,272 ಕ್ಯೂಸೆಕ್ ಕಳೆದ ವರ್ಷ ಇದೇ ದಿನ 118.11 ಅಡಿ ಇತ್ತು. ಕಳೆದ ವರ್ಷದ ಇದೇ ದಿನ ಒಳಹರಿವು: 446 ಕ್ಯೂಸೆಕ್ ಇದ್ದು, ಕಳೆದ ವಾರ ಬಿಡುವು ನೀಡಿದ್ದ ಮಳೆ ಈ ವಾರ ಮತ್ತೆ ಆರ್ಭಟಿಸಲಿದೆ ಎಂದು ಹವಾಮಾನ ಇಲಖೆಯಿಂದ ಮುನ್ಸೂಚನೆ ಇದೆ.
ಜಲ ವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪಾ, ವಾರಾಹಿ ಜಲಾಶಯಗಳಿಗೆ ಒಟ್ಟು 74 ಸಾವಿರ ಕ್ಯುಸೆಕ್ ಅಧಿಕ ಒಳಹರಿವು ಇದೆ. ಹಾರಂಗಿ ಜಲಾಶಯ ಶೇ.72ರಷ್ಟು ಭರ್ತಿಯಾಗಿದ್ದರೆ, ಕಬಿನಿ ಜಲಾಶ ಶೇ.84ರಷ್ಟು ತುಂಬಿದೆ. ಈ ಜಲಾಶಯಕ್ಕೆ ಪ್ರಸ್ತುತ 15 ಸಾವಿರ ಕ್ಯುಸೆಕ್ಸ್‌ಗೂ ಅಧಿಕ ಒಳಹರಿವು ಇದೆ. ಕೃಷ್ಣಾ ಕೊಳ್ಳದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ, ನಾರಾಯಣಪುರ ಜಲಾಶಯಗಳ ಒಳಹರಿವು ಏರಿಕೆಯಾಗಿದೆ.












Click it and Unblock the Notifications