Get Updates
Get notified of breaking news, exclusive insights, and must-see stories!

Karnataka Dam Water Level: ಕೆ‌ಆರ್‌ಎಸ್ ಡ್ಯಾಂ ಭರ್ತಿಗೆ 9 ಅಡಿಯಷ್ಟೇ ಬಾಕಿ; ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ಎಷ್ಟು?

ಬೆಂಗಳೂರು, ಜೂನ್‌ 19: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಮುಂಗಾರು ಆರ್ಭಟ ಜೋರಾಗಿದೆ. ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು ಜಲಾಶಯಗಳಿಗೆ ಹೊಸ ನೀರು ಹರಿದು ಬರುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆ ಜಲಾಶಯ ಬಹುತೇಕ ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿದೆ. ರಾಜ್ಯದಲ್ಲಿ ಕಳೆದೊಂದು ವಾರದಿಂದ ಸುರಿದ ಭಾರೀ ಮಳೆಗೆ ಜಲಾಶಯದ ಒಳಹರಿವು ಹೆಚ್ಚಿದೆ,

ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯ ವಿವಿಧ ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಗಾರು ಮಳೆಯಿಂದಾಗಿ ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯಲಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಅಬ್ಬರ ಮಳೆಯಿಂದ ಭದ್ರಾ, ಹಾರಂಗಿ, ಕಬಿನಿ, ಕೆಆರ್ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಇಂದು(ಜೂನ್‌ 18) ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dams Water level Today KRS Kabini Bhadra dam water level as on june 19th

ಈಗಾಗಲೇ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಲಾಶಯಗಳಿಗೆ ಜೀವ ಕಳೆ ಬಂದಿದೆ. ಅದರಂತೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನ ಒಳ ಹರಿವಿನಲ್ಲಿ ಮತ್ತಷ್ಟು ಹೆಚ್ಚಳವಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೆ‌ಆರ್‌ಎಸ್ ಅಣೆಕಟ್ಟೆ ಭರ್ತಿಗೆ 9 ಅಡಿ ನೀರು ಬಾಕಿ ಇದೆ. 115 ಅಡಿಗೆ ಏರಿಕೆ ಕಂಡಿದೆ. ಡ್ಯಾಂನಲ್ಲಿ ಪ್ರಸ್ತುತ 34,092 ಕ್ಯೂಸೆಕ್ ಒಳಹರಿವು ಇದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 115.78 ಅಡಿ ನೀರು ಭರ್ತಿ ಆಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 37.947 ಟಿಎಂಸಿ ನೀರು ಸಂಗ್ರಹವಾಗಿದೆ.

ವರ್ಷಕ್ಕೆ 2 ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯವೆಂದರೆ ಅದು ಮೈಸೂರಿನ ಹೆಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ.ಮಳೆ ಹೆಚ್ಚಾದ ಹಿನ್ನೆಲೆ ಕಬಿನಿ ಜಲಾಶಯಕ್ಕೆ 22,487 ಕ್ಯುಸೆಕ್ ಒಳಹರಿವು ಹೆಚ್ಚಾಗಿದೆ. ಕಬಿನಿ ಡ್ಯಾಂಗೆ 22,487 ಕ್ಯುಸೆಕ್ ನೀರು ಹರಿದು ಬರುತ್ತಿದೆ. 2,284 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಸದ್ಯ 2,280.84 ಅಡಿ ನೀರಿದೆ. ಕಬಿನಿ ಜಲಾಶಯವು 19.52 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಇದೀಗ 17.38 ಟಿಎಂಸಿ ನೀರಿದೆ. 21,000 ಕ್ಯುಸೆಕ್ ಹೊರಹರಿವಿದೆ.

ಇನ್ನೂ ಆರಂಭದಿಂದಲೂ ಮಲೆನಾಡು ಭಾಗಗಳಲ್ಲಿ ಮಳೆ ಜೋರಾಗಿದ್ದು, ಇದೀಗ ಮಳೆ ಕಡಿಮೆಯಾಗಿದೆ. ಮಳೆ ಅಬ್ಬರದಿಂದಾಗಿ ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಾಗಿದೆ. ಭದ್ರಾ ಜಲಾಶಯದ ಒಳ ಹರಿವು 19,027 ಕ್ಯೂಸೆಕ್‌ ಇದ್ದು, 1273 ಕ್ಯೂಸೆಕ್‌ ಹೊರ ಹರಿವು ಇದೆ. ಇನ್ನೂ ಜಲಾಶಯದ ನೀರಿನ ಮಟ್ಟ 148.3 ಅಡಿಗೆ ತಲುಪಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+