Karnataka Dam Water Level: ಭರ್ತಿಯತ್ತ KRS ಡ್ಯಾಂ: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ಎಷ್ಟು?
ಬೆಂಗಳೂರು, ಜೂನ್ 19: ಕರ್ನಾಟಕದಲ್ಲಿ ವಾಡಿಕೆಗೂ ಮುನ್ನವೇ ಭರ್ಜರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಕಳೆದ ವಾರದಿಂದ ಭರ್ಜರಿ ಮಳೆಯಾಗುತ್ತಿದ್ದು, ಜೂನ್ 26 ರವರೆಗೆ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ರಾಜ್ಯದಲ್ಲಿ ಕಳೆದ 15 ದಿನಗಳಿಂದ ಮುಂಗಾರು ಆರ್ಭಟದಿಂದಾಗಿ ಜಲಾಶಯಗಳಿಗೆ ಹೊಸ ನೀರು ಹರಿದು ಬರುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಭಾರೀ ಮಳೆಗೆ ಜಲಾಶಯದ ಒಳಹರಿವು ಹೆಚ್ಚಾಗಿದೆ.
ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗಿದೆ. ಈಗಾಗಲೇ ಮುಂಗಾರು ಮಳೆಯಿಂದಾಗಿಯೇ ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯಲಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಅಬ್ಬರ ಮಳೆಯಿಂದ ಭದ್ರಾ, ಹಾರಂಗಿ, ಕಬಿನಿ, ಕೆಆರ್ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಇಂದು(ಜೂನ್ 20) ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಳೆದ ಕೆಲ ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಆಗ್ತಿದೆ. ಹೀಗಾಗಿ ಕೆಆರ್‌ಎಸ್ ಜಲಾಶಯಕ್ಕೆ ಅಧಿಕ ನೀರು ಹರಿದು ಬರ್ತಿದ್ದು, ಕೆಆರ್‌ಎಸ್ ಭರ್ತಿಯ ಅಂಚಿಗೆ ತಲುಪಿದೆ. ಕಳೆದ 15 ದಿನಗಳಿಂದ ಜೀವನದಿ ಕಾವೇರಿ ಹುಕ್ಕಿ ಹರಿಯುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಪ್ರತಿವರ್ಷ ಕೆಆರ್‌ಎಸ್ ಡ್ಯಾಂ ಆಗಸ್ಟ್, ಸೆಪ್ಟೆಂಬರ್ ತಿಂಗಳಿನಲ್ಲಿ ಭರ್ತಿಯಾಗ್ತಿತ್ತು. ಅಪರೂಪಕ್ಕೊಮ್ಮೆ ಜುಲೈ ತಿಂಗಳಿನಲ್ಲಿ ಭರ್ತಿಯಾಗಿರುವ ಒಂದೆರಡು ಉದಾಹರಣೆ ಇದೆ. ಆದರೆ ಈ ಬಾರಿ ಜೂನ್ ತಿಂಗಳಿನಲ್ಲಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿದೆ.
ಇನ್ನೂ ಜಲಾಶಯಕ್ಕೆ ಹರಿದು ಬರುತ್ತಿರುವ ಒಳ ಹರಿವಿನ ಪ್ರಮಾಣ 34,092 ಕ್ಯೂಸೆಕ್ ಆಗಿದ್ದು, ಹೊರ ಹರಿವು 1,148 ಕ್ಯೂಸೆಕ್ ಆಗಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಇಂದು ಜಲಾಶಯದಲ್ಲಿ ನೀರಿನ ಮಟ್ಟ 115.78 ಅಡಿಯಾಗಿದೆ. ಇಂದು ಜಲಾಶಯದಲ್ಲಿ 37.947 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ಕಬಿನಿ ಡ್ಯಾಂ ಭರ್ತಿಗೆ ಕೇವಲ ಮೂರು ಅಡಿ ಮಾತ್ರ ಬಾಕಿ ಇದೆ. ಜಲಾಶಯದ ಇಂದಿನ ನೀರಿನ ಮಟ್ಟ 81 ಅಡಿಗಳು. ಜಲಾಶಯದ ಒಟ್ಟು ಎತ್ತರ 84 ಅಡಿಗಳು. ಜಲಾಶಯದಲ್ಲಿ ಒಳಹರಿವಿನ ಪ್ರಮಾಣ 21,500 ಕ್ಯೂಸೆಕ್ಸ್ ಇದೆ.
ಭದ್ರಾ ಜಲಾಶಯಶದ ಇಂದಿನ ನೀರಿನಮಟ್ಟ 149.9 ಅಡಿ ಇದ್ದು, ಒಳ ಹರಿವು 14,932 ಕ್ಯೂಸೆಕ್ ಇದೆ. ಭದ್ರಾ ಜಲಾಶಯದ ಒಟ್ಟು ನೀರಿನ ಸಾಮರ್ಥ್ಯ: 71.54 ಟಿಎಂಸಿ ಇದ್ದು, ಪ್ರಸ್ತುತ ನೀರಿನ ಮಟ್ಟ 34,093 ಟಿಎಂಸಿ ಇದೆ . ಇನ್ನೂ ಭದ್ರಾ ಜಲಾಶಯದ ಒಳ ಹರಿವು : 14,932 ಕ್ಯೂಸೆಕ್, ಹೊರ ಹರಿವು 1,275 ಕ್ಯೂಸೆಕ್ ನಷ್ಟಿದೆ. ಇತ್ತ ನಿರೀಕ್ಷೆಗಿಂತ ಹೆಚ್ಚು ಹಾಸನ ಜಿಲ್ಲೆಯ ಹೇಮಾವರಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಹೇಮಾವತಿ ಜಲಾಶಯದಲ್ಲಿ 12.75 ಅಡಿಗಳಷ್ಟು ನೀರು ಸಂಗ್ರಹ ಮಾತ್ರ ಬಾಕಿ ಇದೆ.












Click it and Unblock the Notifications