Karnataka Dam Water Level: ಕರ್ನಾಟಕದ 14 ಜಲಾಶಯಗಳ ನೀರಿನ ಮಟ್ಟ ಎಷ್ಟು?
ಬೆಂಗಳೂರು, ಜೂನ್ 21: ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಆಗಮನಕ್ಕೂ ಮುನ್ನವೇ ಮಳೆಯಾಗಿದೆ. ಕಳೆದ ಎರಡು ವಾರಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಮುಂದಿನ ನಾಲ್ಕು ದಿನಗಳವರೆಗೆ ಕರ್ನಾಟಕದಾದ್ಯಂತ ಮಳೆ ಮತ್ತು ಬಿರುಗಾಳಿ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗಗಳಿಗೆ ಮಳೆಯಾಗಿಲಿದ್ದು, ಕೆಲ ಜಿಲ್ಲೆಗಳ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ನೀಡಿದೆ.
ರಾಜ್ಯದಲ್ಲಿ ಕಳೆದ ವಾರದಿಂದ ಭರ್ಜರಿ ಮಳೆಯಾಗುತ್ತಿದ್ದು, ಜೂನ್ 26 ರವರೆಗೆ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ ನಾಲ್ಕು ದಿನಗಳವರೆಗೆ ಕರ್ನಾಟಕದಾದ್ಯಂತ ಮಳೆ ಮತ್ತು ಬಿರುಗಾಳಿ ಮುಂದುವರಿಯುವ ಮುನ್ಸೂಚನೆಯನ್ನು ಐಎಂಡಿ ನೀಡಿದೆ. ಕಳೆದ 15 ದಿನಗಳಿಂದ ಕರ್ನಾಟಕದಲ್ಲಿ ಹೆಚ್ಚು ಮಳೆಯಿಂದಾಗಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಭಾರೀ ಮಳೆಗೆ ಜಲಾಶಯದ ಒಳಹರಿವು ಹೆಚ್ಚಾಗಿದೆ.

ಕಳೆದ ಹಲವು ದಿನಗಳಿಂದ ಮುಂಗಾರು ಮಳೆಯಿಂದಾಗಿಯೇ ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯಲಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಅಬ್ಬರ ಮಳೆಯಿಂದ ಭದ್ರಾ, ಹಾರಂಗಿ, ಕಬಿನಿ, ಕೆಆರ್ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಇಂದು(ಜೂನ್ 21) ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಭರ್ಜರಿ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಹೀಗಾಗಿ ಕೆಆರ್‌ಎಸ್ ಜಲಾಶಯಕ್ಕೆ ಅಧಿಕ ನೀರು ಹರಿದು ಬರ್ತಿದ್ದು, ಕೆಆರ್‌ಎಸ್ ಭರ್ತಿಯ ಅಂಚಿಗೆ ತಲುಪಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಈ ವರ್ಷ ಕೆಆರ್‌ಎಸ್ ಡ್ಯಾಂ ಜುಲೈ ತಿಂಗಳಿನಲ್ಲಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಕೃಷ್ಣರಾಜ ಸಾಗರ ಜಲಾಶಯಕ್ಕೆ ಹರಿದು ಬರುತ್ತಿರುವ ಒಳ ಹರಿವಿನ ಪ್ರಮಾಣ 18,387 ಕ್ಯೂಸೆಕ್ ಆಗಿದ್ದು, ಹೊರ ಹರಿವು 1,343 ಕ್ಯೂಸೆಕ್ ಆಗಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಇಂದು ಜಲಾಶಯದಲ್ಲಿ ನೀರಿನ ಮಟ್ಟ 115.78 ಅಡಿಯಾಗಿದೆ. ಇಂದು ಜಲಾಶಯದಲ್ಲಿ 41.301 ಟಿಎಂಸಿ ನೀರು ಸಂಗ್ರಹವಾಗಿದೆ.
ಇನ್ನೂ ಭದ್ರಾ ಜಲಾಶಯದ ಮಲೆನಾಡು ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಭದ್ರಾ ನದಿ ಹರಿವು ಭರ್ಜರಿ ಹೆಚ್ಚಾಗಿದ್ದು, ಜಲಾಶಯ ಒಳಹರಿವು ಒಂದೇ ದಿನ ಬರೋಬ್ಬರಿ 19 ಸಾವಿರ ಗಡಿದಾಟಿದೆ. ಇಂದು ಬೆಳಗ್ಗೆ ಹೊತ್ತಿಗೆ ಒಳ ಹರಿವು 19,027 ಕ್ಯೂಸೆಕ್ ನಷ್ಟಿದೆ. ಈ ಮೂಲಕ ಒಂದೇ ದಿನ 10 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೆಚ್ಚಳವಾಗಿದೆ. ಕಳೆದ ವರ್ಷ ಇದೇ ದಿನ 119.0 ಅಡಿ ನೀರು ಇತ್ತು. ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಬಿನಿ ಡ್ಯಾಂ ಭರ್ತಿಗೆ ಕೇವಲ ಎರಡು ಅಡಿ ಮಾತ್ರ ಬಾಕಿ ಇದೆ. ಜಲಾಶಯದ ಇಂದಿನ ನೀರಿನ ಮಟ್ಟ 81 ಅಡಿಗಳು. ಜಲಾಶಯದ ಒಟ್ಟು ಎತ್ತರ 84 ಅಡಿಗಳು. ಜಲಾಶಯದಲ್ಲಿ ಒಳಹರಿವಿನ ಪ್ರಮಾಣ 21,500 ಕ್ಯೂಸೆಕ್ಸ್ ಇದೆ.












Click it and Unblock the Notifications