Karnataka Dam Water Level: ಮಳೆಯಿಂದ ಬಹುತೇಕ ಡ್ಯಾಂಗಳು ಭರ್ತಿ; 14 ಜಲಾಶಯಗಳ ನೀರಿನ ಮಟ್ಟವೆಷ್ಟು? ಇಲ್ಲಿದೆ ವಿವರ
ಬೆಂಗಳೂರು, ಜೂನ್ 27: ಕರ್ನಾಟಕದಾದ್ಯಂತ ಕಳೆದ ಒಂದು ತಿಂಗಳಿನಿಂದ ಮಳೆರಾಯನ ಅಬ್ಬರ ಜೋರಾಗಿದೆ. ಒಂದು ವಾರಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ವರ್ಷಕ್ಕಿಂತ ಈ ವರ್ಷ ವಾಡಿಕೆಗಿಂಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಮುಂಗಾರು ಆರಂಭವಾಗುವ ಮುನ್ನವೇ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳು ಬಹುತೇಕೆ ತುಂಬಿವೆ. ಕಳೆದ ವರ್ಷ 30% ತುಂಬಿದ್ದ ಕೆಆರ್ ಎಸ್ ಈ ವರ್ಷ 89% ತುಂಬಿದೆ. ಕಳೆದ ವರ್ಷ 30% ತುಂಬಿದ್ದ ಹೇಮಾವತಿ 85% ತುಂಬಿದೆ. ಕಳೆದ ವರ್ಷ 40% ತುಂಬಿದ್ದ ಹಾರಂಗಿ ಈ ವರ್ಷ 70% ತುಂಬಿದೆ. 51% ತುಂಬಿದ್ದ ಕಬಿನಿ ಈ ವರ್ಷ 80% ತುಂಬಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ,ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿರುವ ಹಿನ್ನಲೆ ಭದ್ರಾ, ಹಾರಂಗಿ, ಕಬಿನಿ, ಕೆಆರ್‌ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ರಾಜ್ಯದಲ್ಲಿ ಮುಂಗಾರು ಆರಂಭದಿಂದಲೂ ಮಳೆಯಾಗಿದ್ದು, ಬಹುತೇಕ ಡ್ಯಾಂಗಳು ಭರ್ತಿಯಾಗಿವೆ. ಹಾಗಾದರೆ ಜೂನ್ 27 ರಂದು ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.
ಇನ್ನೂ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ಪ್ರತಿವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ಜುಲೈ ತಿಂಗಳಲ್ಲಿ ಮುಂಗಾರು ಮಳೆ ಹೆಚ್ಚಾಗುತ್ತಿತ್ತು. ಆದರೆ, ಈ ಬಾರಿ ಜೂನ್ ತಿಂಗಳ ಮೊದಲ ವಾರದಲ್ಲಿಯೇ ಚುರುಕು ಪಡೆದುಕೊಂಡಿದೆ. ಇದರ ಪರಿಣಾಮ ಹಳೇ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ 120.90 ಅಡಿಯಷ್ಟು ಭರ್ತಿಯಾಗಿದೆ. ಡ್ಯಾಂ ನಿರ್ಮಾಣವಾಗಿದ್ದಾಗಿನಿಂದ ಕೆಆರ್‌ಎಸ್ ಡ್ಯಾಂನಲ್ಲಿ ಜೂನ್ ತಿಂಗಳಲ್ಲೇ ಇಷ್ಟು ಪ್ರಮಾಣದ ನೀರು ಇರಲಿಲ್ಲ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ನೀರು ಜೂನ್ ತಿಂಗಳಿನಲ್ಲಿ ಸಂಗ್ರಹವಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚು ಬೀಳುವ ಸಾಧ್ಯತೆ ಇದ್ದು ಕನ್ನಂಬಾಡಿ ಕಟ್ಟೆಗೆ 50 ಸಾವಿರಕ್ಕೂ ಅಧಿಕ ಕ್ಯೂಸೆಕ್‌ಗೂ ಅಧಿಕ ಒಳಹರಿವು ಬರುವ ಸಾಧ್ಯತೆಯಿದೆ. ಆದ್ದರಿಂದ ಇಂದು ಡ್ಯಾಂನಿಂದ 50 ಸಾವಿರ ಕ್ಯೂಸೆಕ್‌ನ್ನು ಬಿಡುವ ಸಾಧ್ಯತೆ ಇದೆ. ಕೆಆರ್‌ಎಸ್ ಡ್ಯಾಂ ಭರ್ತಿಗೆ ಇನ್ನೂ 4 ಅಡಿ ಬಾಕಿ ಇರೋದು ಸಂತಸ ಒಂದು ಕಡೆಯಾದರೆ, ಇನ್ನೊಂದೆಡೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಹೆಚ್ಚಿರುವ ಕಾರಣ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಇನ್ನೂ ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯದ ಮಲೆನಾಡು ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗುತ್ತಿರುವ ಹಿನ್ನಲೆ ಒಂದೇ ದಿನ ಬರೋಬ್ಬರಿ 22 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಮುಂಗಾರು ಮಳೆ ಪ್ರಾರಂಭವಾಗಿ 25 ದಿನದಲ್ಲಿಯೇ ಭದ್ರಾ ಜಲಾಶಯ ನೀರಿನ ಮಟ್ಟ 157 ಅಡಿ ದಾಟಿದ್ದು, ರೈತರಲ್ಲಿ ಸಂತಸ ತಂದಿದೆ. ಭದ್ರಾ ಜಲಾಶಯಶದ ಇಂದಿನ ನೀರಿನಮಟ್ಟ 157.1 ಅಡಿ ಇದ್ದು, ಒಳ ಹರಿವು 22,407 ಕ್ಯೂಸೆಕ್ ಇದೆ. ಕಳೆದ ವರ್ಷ ಇದೇ ದಿನ 120 ಅಡಿ ನೀರು ಇತ್ತು.
ಹಾಸನದ ಜಿಲ್ಲೆಯ ಜೀವ ನಾಡಿ ಹೇಮಾವತಿ ಜಲಾಶಯ ಭರ್ತಿಗೆ ಕೇವಲ 7.5 ಅಡಿಯಷ್ಟೇ ಬಾಕಿ ಇದೆ. 2922 ಅಡಿ ನೀರಿನ ಸಂಗ್ರಹ ಸಾಮರ್ಥ್ಯದ ಜಲಾಶಯ ಪ್ರಸ್ತುತ 2914.57 ಅಡಿಗೆ ತಲುಪಿದೆ. ಒಳಹರಿವು 8079 ಕ್ಯೂಸೆಕ್‌ಗೆ ತಲುಪಿದೆ. ಹೇಮಾವತಿ ಜಲಾಶಯವು ಪ್ರತಿವರ್ಷ ಆಗಸ್ಟ್ ವೇಳೆಗೆ ಭರ್ತಿಯಾಗುತ್ತಿದ್ದ ಜಲಾಶಯ ಈ ಬಾರಿ ಇದೇ ರೀತಿ ಮಳೆ ಮುಂದುವರಿದರೆ ಜೂನ್ ಅಂತ್ಯದ ವೇಳೆಗೆ ಭರ್ತಿಯಾಗುವ ಸಾಧ್ಯತೆ ಇದೆ.












Click it and Unblock the Notifications