Karnataka Dam Water Level: ಮಳೆಯಿಂದ ತುಂಗಾ ಭದ್ರಾ ಡ್ಯಾಂ ಭರ್ತಿ; 14 ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ
ಬೆಂಗಳೂರು, ಸೆಪ್ಟೆಂಬರ್ 05: ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಅಧಿಕಗೊಂಡಿದ್ದರಿಂದ ನದಿಗಳು ಮೈದುಂಬಿ ಹರಿಯುತ್ತಿವೆ. ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿರುವ ಹಿನ್ನಲೆ ಭದ್ರಾ, ಹಾರಂಗಿ, ಕಬಿನಿ, ಕೆಆರ್ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ಚೈನ್ ಲಿಂಕ್ ಮುರಿದು ಹೋಗಿ ಸುಮಾರು 30 ಟಿಎಂಸಿ ನೀರು ನದಿಗೆ ವ್ಯರ್ಥವಾಗಿ ಹರಿದು ಹೋಗಿತ್ತು. ಆಗ ಡ್ಯಾಂ ಖಾಲಿ ಆಗಿತ್ತು. ಆದರೆ ಈಗ ಸಮಸ್ಯೆ ಬಗೆಹರಿದಿದ್ದು ತುಂಗಭದ್ರಾ ಡ್ಯಾಂ ಮತ್ತೆ ಭರ್ತಿಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ,ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ,ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ರಾಜ್ಯದಲ್ಲಿ ಮುಂಗಾರು ಆರಂಭದಿಂದಲೂ ಮಳೆಯಾಗಿದ್ದು, ಬಹುತೇಕ ಡ್ಯಾಂಗಳು ಭರ್ತಿಯಾಗಿವೆ. ಹಾಗಾದರೆ ಸೆಪ್ಟೆಂಬರ್ 05ರಂದು ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.
| ಪ್ರಮುಖ ಜಲಾಯಶಗಳು | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) |
| ಆಲಮಟ್ಟಿ ಜಲಾಶಯ | 123.08 | 122.13 | 45,322 |
| ತುಂಗಭದ್ರಾ ಜಲಾಶಯ | 105.79 | 101.46 | 39,945 |
| ಮಲಪ್ರಭಾ ಜಲಾಶಯ | 37.73 | 36.48 | 3,929 |
| ಕೆ ಆರ್ ಎಸ್ | 49.45 | 48.95 | 15,181 |
| ಲಿಂಗನಮಕ್ಕಿ ಜಲಾಶಯ | 151.75 | 146.92 | 17,363 |
| ಕಬಿನಿ ಜಲಾಶಯ | 19.52 | 19.32 | 8702 |
| ಭದ್ರಾ ಜಲಾಶಯ | 71.54 | 68.21 | 15,574 |
| ಘಟಪ್ರಭಾ ಜಲಾಶಯ | 51.00 | 50.95 | 10,268 |
| ಹೇಮಾವತಿ ಜಲಾಶಯ | 37.10 | 37.06 | 7541 |
| ವರಾಹಿ ಜಲಾಶಯ | 31.10 | 24.58 | 3717 |
| ಹಾರಂಗಿ ಜಲಾಶಯ | 8.50 | 8.34 | 3950 |
| ಸೂಫಾ | 145.33 | 134.89 | 23,077 |
| ನಾರಾಯಣಪುರ | 33.31 | 32.15 | 25,579 |
| ವಾಣಿವಿಲಾಸ ಸಾಗರ | 30.42 | 21.40 | 693 |












Click it and Unblock the Notifications