Karnataka Dam Water Level: ಕರ್ನಾಟಕದ ಜಲಾಶಯಗಳಿಗೆ ಭರ್ಜರಿ ಒಳಹರಿವು: ಡ್ಯಾಂಗಳ ನೀರಿನ ಮಟ್ಟ ಎಷ್ಟು?

ಬೆಂಗಳೂರು: ರಾಜ್ಯಾದ್ಯಂತ ವರುಣನ ಕೃಪೆ ಮುಂದುವರಿದಿದ್ದು, ಕಾವೇರಿ, ಕೃಷ್ಣಾ ಹಾಗೂ ಮಲೆನಾಡು ಜಲಾನಯನ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗಿದೆ. ಇದರ ಪರಿಣಾಮವಾಗಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಕೆಆರ್‌ಎಸ್‌, ಆಲಮಟ್ಟಿ, ಲಿಂಗನಮಕ್ಕಿ, ಭದ್ರಾ, ಕಬಿನಿ ಹಾಗೂ ತುಂಗಭದ್ರಾ ಸೇರಿದಂತೆ ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ರೈತರಲ್ಲಿ ಸಂತಸ ಮೂಡಿದೆ.

ಮಳೆ ಇದೇ ರೀತಿ ಮುಂದುವರಿದು ಜಲಾಶಯಗಳಿಗೆ ಒಳಹರಿವು ಮತ್ತಷ್ಟು ಹೆಚ್ಚಾದರೆ, ಪ್ರಮುಖ ಡ್ಯಾಂಗಳು ಭರ್ತಿಯಾಗುವ ಸಾಧ್ಯತೆಯಿದೆ. ಇದರಿಂದ ನೀರಾವರಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ದೊರೆಯುವ ನಿರೀಕ್ಷೆಯಿದ್ದು, ಕಾವೇರಿ ನೀರು ಹಂಚಿಕೆ ಸೇರಿದಂತೆ ಹಲವು ಜಲಸಂಬಂಧಿತ ವಿಚಾರಗಳಲ್ಲೂ ರಾಜ್ಯಕ್ಕೆ ಕೊಂಚ ನೆಮ್ಮದಿ ಸಿಗುವ ಸಾಧ್ಯತೆಯಿದೆ.

Karnataka Dams Water level Today KRS Kabini water level as on August 26th

ಕೆಆರ್‌ಎಸ್‌ಗೆ ಭರ್ಜರಿ ಒಳಹರಿವು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಜಲಾಶಯದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಇಂದು ನೀರಿನ ಮಟ್ಟ 108.63 ಅಡಿ ತಲುಪಿದೆ. ಒಳಹರಿವು 9,438 ಕ್ಯೂಸೆಕ್ ಇದ್ದರೆ, ಹೊರಹರಿವು 4,478 ಕ್ಯೂಸೆಕ್ ಇದೆ. ಸದ್ಯ ಜಲಾಶಯದಲ್ಲಿ 30.367 ಟಿಎಂಸಿ ನೀರು ಸಂಗ್ರಹವಾಗಿದೆ.

ಕಬಿನಿ ಜಲಾಶಯಕ್ಕೂ ಹೆಚ್ಚಿದ ಒಳಹರಿವು

ಮೈಸೂರು ಭಾಗದ ಕಬಿನಿ ಜಲಾಶಯದ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗಿದ್ದು, ಸುಮಾರು 30 ಮಿ.ಮೀ ಮಳೆ ದಾಖಲಾಗಿದೆ. ಜಲಾಶಯದ ಗರಿಷ್ಠ ಮಟ್ಟ 84 ಅಡಿ ಇದ್ದು, ಇಂದಿನ ನೀರಿನ ಮಟ್ಟ 72.79 ಅಡಿ ಇದೆ. ಕಬಿನಿಗೆ 9,487 ಕ್ಯೂಸೆಕ್ ಒಳಹರಿವು ಬರುತ್ತಿದ್ದು, ನದಿಗೆ 6,100 ಕ್ಯೂಸೆಕ್ ಹಾಗೂ ಕಾಲುವೆಗೆ 1,660 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಒಟ್ಟು ಹೊರಹರಿವು 7,760 ಕ್ಯೂಸೆಕ್ ಇದೆ. ಜಲಾಶಯದಲ್ಲಿ ಒಟ್ಟು 13.09 ಟಿಎಂಸಿ ನೀರು ಸಂಗ್ರಹವಿದೆ.

ಭರ್ತಿಯ ಹಂತಕ್ಕೆ ಆಲಮಟ್ಟಿ

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯವೂ ಭರ್ತಿಯ ಹಂತಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಇದ್ದು, ಪ್ರಸ್ತುತ ನೀರಿನ ಮಟ್ಟ 519.57 ಮೀಟರ್ ಇದೆ. ಒಳಹರಿವು 28,746 ಕ್ಯೂಸೆಕ್ , ಹೊರಹರಿವು 22,658 ಕ್ಯೂಸೆಕ್ ಇದೆ.

ಲಿಂಗನಮಕ್ಕಿ ಜಲಾಶಯದಲ್ಲೂ ನೀರಿನ ಏರಿಕೆ

ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯಕ್ಕೂ ಒಳಹರಿವು ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 1,819 ಅಡಿ ಇದ್ದು, ಇಂದಿನ ನೀರಿನ ಮಟ್ಟ 1,797 ಅಡಿ ಆಗಿದೆ. ಒಳಹರಿವು 10,451 ಕ್ಯೂಸೆಕ್ ಇದೆ. ಲೈವ್ ಸಂಗ್ರಹ ಪ್ರಮಾಣ 58.52% ಇದ್ದು, ಒಂದೇ ದಿನದಲ್ಲಿ ನೀರಿನ ಮಟ್ಟ 0.20 ಅಡಿ ಏರಿಕೆಯಾಗಿದೆ. ಆದರೆ ಕಳೆದ ವರ್ಷ ಇದೇ ದಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1,817 ಅಡಿ ಇತ್ತು. ಹೀಗಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನೀರಿನ ಮಟ್ಟ ಕಡಿಮೆಯಾಗಿದೆ.

ಭದ್ರಾ ಡ್ಯಾಂನಲ್ಲೂ ನೀರು ಏರಿಕೆ

ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿ ಇದ್ದು, ಪ್ರಸ್ತುತ ನೀರಿನ ಮಟ್ಟ 176 ಅಡಿ 4 ಇಂಚು ಇದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 71.535 ಟಿಎಂಸಿ ಆಗಿದ್ದು, ಸದ್ಯ 59.898 ಟಿಎಂಸಿ ನೀರು ಸಂಗ್ರಹವಾಗಿದೆ. ಭದ್ರಾ ಜಲಾಶಯಕ್ಕೆ 5,739 ಕ್ಯೂಸೆಕ್ ಒಳಹರಿವು ಇದ್ದು, ಹೊರಹರಿವು 206 ಕ್ಯೂಸೆಕ್ ಇದೆ. ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 184 ಅಡಿ 5 ಇಂಚು ಹಾಗೂ ಸಂಗ್ರಹ 69.553 ಟಿಎಂಸಿ ಇತ್ತು.

ತುಂಗಭದ್ರಾ ಡ್ಯಾಂನಲ್ಲೂ ನೀರು

ತುಂಗಭದ್ರಾ ಜಲಾಶಯದಲ್ಲೂ ನೀರಿನ ಸಂಗ್ರಹ ಉತ್ತಮವಾಗಿದೆ. ಜಲಾಶಯದ ಗರಿಷ್ಠ ಸಾಮರ್ಥ್ಯ 105 ಟಿಎಂಸಿ ಇದ್ದು, ಪ್ರಸ್ತುತ ಸುಮಾರು 95 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು 10,632 ಕ್ಯೂಸೆಕ್ ಇದ್ದರೆ, ಒಟ್ಟು ಹೊರಹರಿವು 7,968 ಕ್ಯೂಸೆಕ್ ಇದೆ.ಕಾಲುವೆಗಳಿಗೆ 7,935 ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ನದಿಗೆ 33 ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳಿಗೆ ಇದೇ ರೀತಿಯಲ್ಲಿ ಒಳಹರಿವು ಮುಂದುವರಿದರೆ, ಮುಂದಿನ ದಿನಗಳಲ್ಲಿ ನೀರಿನ ಸಂಗ್ರಹ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+