ಎಲ್ಲಾ ವಿದ್ಯಾರ್ಥಿಗಳು ಕರ್ನಾಟಕ ದರ್ಶನ ಪ್ರವಾಸ!

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮಾತ್ರವಲ್ಲದೇ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ರಾಜ್ಯದ ಪ್ರವಾಸಿ ಕೇಂದ್ರಗಳ ಪರಿಚಯ ಮಾಡಿಸಲಾಗುವುದು ಎಂದರು. 'ಕರ್ನಾಟಕ ದರ್ಶನ' ಪ್ರವಾಸ ಕಾರ್ಯಕ್ರಮದಲ್ಲಿ ಇತರೆ ವರ್ಗದ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರ ಮೊದಲಿನ ಆದೇಶದಂತೆ ಎಲ್ಲ ಸರ್ಕಾರಿ ಶಾಲೆಗಳ ಮತ್ತು ಸರ್ಕಾರಿ ವಸತಿ ಶಾಲೆಗಳ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ 'ಕರ್ನಾಟಕ ದರ್ಶನ' ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗಿದೆ. ಸದ್ಯ ಇದನ್ನು ನಿರ್ದಿಷ್ಟ ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ವರ್ಗದವರಿಗೂ ವಿಸ್ತರಣೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವರು ಹೇಳಿದ್ದಾರೆ.
ಬಿಜೆಪಿ, ಕೆಜೆಪಿ ಸೇರಿದಂತೆ ಪ್ರತಿಪಕ್ಷಗಳು ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಕರ್ನಾಟಕ ಪ್ರವಾಸ ದರ್ಶನ ಹಮ್ಮಿಕೊಳ್ಳುವ ಸರ್ಕಾರ ನಿರ್ಧಾರವನ್ನು ವಿರೋಧಿಸಿದ್ದವು. ಸರ್ಕಾರ ಮಕ್ಕಳಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದೆ ಎಂದು ಆರೋಪಿಸಿದ್ದವು. ಆದ್ದರಿಂದ ಪ್ರವಾಸೋದ್ಯಮ ಇಲಾಖೆ ಎಲ್ಲಾ ವರ್ಗಗಳಿಗೂ ಪ್ರವಾಸ ವಿಸ್ತರಿಲು ನಿರ್ಧರಿಸಿದೆ. (ಕರ್ನಾಟಕ ದರ್ಶನ ಸಿದ್ದುಗೆ ಪ್ರತಿಪಕ್ಷ ಗುದ್ದು)
ಏನಿದು ಕರ್ನಾಟಕ ದರ್ಶನ : ನ.6ರಂದು ಆದೇಶ ಹೊರಡಿಸಿದ್ದ ಸರ್ಕಾರ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ಪ್ರವಾಸ ಏರ್ಪಡಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆಗೆ ನಿರ್ದೇಶನ ನೀಡಿತ್ತು. ಅದಕ್ಕಾಗಿ 3.15 ಕೋಟಿ ರೂ. ಬಿಡುಗಡೆ ಮಾಡಿತ್ತು, ಒಟ್ಟು 4 ದಿನಗಳ ಪ್ರವಾಸಕ್ಕೆ ಪ್ರತಿ ವಿದ್ಯಾರ್ಥಿಗೆ ಸರ್ಕಾರದಿಂದ 3,500 ರೂ. ವೆಚ್ಚ ಮಾಡಲಾಗುತ್ತಿತ್ತು.











Click it and Unblock the Notifications