ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಲಲಿತಾ ವಿರುದ್ಧ ಮೇಲ್ಮನವಿ ಸಲ್ಲಿಸಲು 7 ಕಾರಣಗಳು!

|
Google Oneindia Kannada News

ಬೆಂಗಳೂರು, ಜೂ. 02 : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ಕರ್ನಾಟಕ ಸರ್ಕಾರ ತೀರ್ಮಾನ ಕೈಗೊಂಡಿದೆ. ತೀರ್ಪು ಪ್ರಕಟಗೊಂಡಾಗ ಮೇಲ್ಮನವಿ ಸಲ್ಲಿಸುವ ಬಗ್ಗೆ ಆಲೋಚನೆ ನಡೆಸುತ್ತಿದ್ದ ಸರ್ಕಾರ ಸೋಮವಾರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಂಡಿರುವ ಹಿಂದೆ ಹಲವಾರು ಲೆಕ್ಕಾಚಾರಗಳು ಅಡಗಿವೆ.

ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಜಯಲಲಿತಾ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ನಂತರ ಮೇಲ್ಮನವಿ ನಿರ್ಧಾರ ಹೊರಬಿದ್ದಿದೆ. [ಜಯಲಲಿತಾ ಪ್ರಕರಣ Timeline]

ಅತ್ತ ತಮಿಳುನಾಡು ಪ್ರತಿಪಕ್ಷ ಡಿಎಂಕೆಯ ಮುಖಂಡ ಎಂ.ಕರುಣಾನಿಧಿ ಅವರು ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವವರಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಘೋಷಿಸಿದ್ದಾರೆ. ಇದರ ಹಿಂದೆ ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯ ಮೈತ್ರಿ ಲೆಕ್ಕಾಚಾರಗಳಿವೆ ಎಂಬ ಮಾತುಗಳು ಹರಿದಾಡುತ್ತಿವೆ. [ಮೇಲ್ಮನವಿ ಕೈ ಬಿಡಲು ಸಿದ್ದರಾಮಯ್ಯಗೆ ಸಲಹೆ]

ಇನ್ನು ಕಾವೇರಿ ವಿವಾದದಲ್ಲಿ ಕರ್ನಾಟಕ-ತಮಿಳುನಾಡು ನಡುವೆ ಜಟಾಪಟಿ ನಡೆಯುತ್ತಲೇ ಇದೆ. ಜಯಲಲಿತಾ ವಿರುದ್ಧ ರಾಜ್ಯ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೂ ಸುಮ್ಮನಿದ್ದರೆ, ಸರ್ಕಾರದ ಬಗ್ಗೆ ರಾಜ್ಯದ ಜನರ ನಿಲುವು ಬದಲಾಗಬಹುದೆಂದು ಸುಪ್ರೀಂಕೋರ್ಟ್ ಮೆಟ್ಟಿಲೇರಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ಸರ್ಕಾರದ ತೀರ್ಮಾನಕ್ಕೆ ಕಾರಣಗಳೇನು? ಇಲ್ಲಿದೆ ವಿವರಣೆ....

ಎಜಿ, ಬಿ.ವಿ.ಆಚಾರ್ಯ ಹೇಳಿಕೆಗಳು

ಎಜಿ, ಬಿ.ವಿ.ಆಚಾರ್ಯ ಹೇಳಿಕೆಗಳು

ಜಯಲಲಿತಾ ಅವರನ್ನು ದೋಷಮುಕ್ತಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ವಿ.ಆಚಾರ್ಯ ಅವರು ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಹೈಕೋರ್ಟ್ ನೀಡಿರುವ ತೀರ್ಪಿನ ಪ್ರತಿಯನ್ನು ಅಧ್ಯಯನ ಮಾಡಿದ ಬಳಿಕ ಈ ಶಿಫಾರಸು ಮಾಡಿದ್ದರು. ಅಡ್ವೊಕೇಟ್ ಜನರಲ್ (ಎಜಿ) ಪ್ರೊ. ರವಿವರ್ಮ ಕುಮಾರ್ ಅವರು ಮೇಲ್ಮನವಿ ಸಲ್ಲಿಸಬಹುದು ಎಂದು ಶಿಫಾರಸು ಮಾಡಿದ್ದರು.

ಪಕ್ಷದ ಹೈಕಮಾಂಡ್ ಹಸಿರು ನಿಶಾನೆ

ಪಕ್ಷದ ಹೈಕಮಾಂಡ್ ಹಸಿರು ನಿಶಾನೆ

ಜಯಲಲಿತಾ ತೀರ್ಪಿನ ವಿಚಾರದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಒಪ್ಪಿಗೆಗಾಗಿ ಕಾದಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಬಳಿಕ, ಸಿಎಂ ಮೇಲ್ಮನವಿ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ.

ವಿಧಾನಸಭೆ ಚುನಾವಣೆ ಮೈತ್ರಿ ಲೆಕ್ಕಾಚಾರ?

ವಿಧಾನಸಭೆ ಚುನಾವಣೆ ಮೈತ್ರಿ ಲೆಕ್ಕಾಚಾರ?

ತಮಿಳುನಾಡಿನ ಪ್ರತಿಪಕ್ಷ ಡಿಎಂಕೆಯ ಮುಖಂಡ ಎಂ.ಕರುಣಾನಿಧಿ ಅವರು ಮೇಲ್ಮನವಿ ಸಲ್ಲಿಸಿದರೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಇದರ ಹಿಂದೆ ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆ ಲೆಕ್ಕಾಚಾರ ಅಡಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಡಿಎಂಕೆ ನಿರ್ಧರಿಸಿದ್ದು, ಇದರ ಭಾಗಿವಾಗಿಯೇ ಕಾಂಗ್ರೆಸ್‌ ಜೊತೆ ಮಾತುಕತೆ ನಡೆಸಿ ಬೆಂಬಲ ಸೂಚಿಸಿದೆ.

ತೀರ್ಪಿನಲ್ಲಿ ತಪ್ಪು ಕಂಡುಹಿಡಿದ ಬಿ.ವಿ.ಆಚಾರ್ಯ

ತೀರ್ಪಿನಲ್ಲಿ ತಪ್ಪು ಕಂಡುಹಿಡಿದ ಬಿ.ವಿ.ಆಚಾರ್ಯ

ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ 919 ಪುಟಗಳ ತೀರ್ಪಿನಲ್ಲಿ ಗಣಿತದ ತಪ್ಪುಗಳಿವೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ.ಆಚಾರ್ಯ ಅವರು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿದ್ದರು. ಇದರಿಂದ ಸರ್ಕಾರ ತಪ್ಪುಗಳಿದ್ದು ಸಮ್ಮನಿರಬಾರದು ಎಂದು ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ತೀರ್ಮಾನ ಕೈಗೊಂಡಿದೆ. ಮೇಲ್ಮನವಿ ಸಲ್ಲಿಸಬಹುದು ಎಂದು ಅವರು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ಕರ್ನಾಟಕದ ಮೇಲಿನ ವಿಶ್ವಾಸ

ಕರ್ನಾಟಕದ ಮೇಲಿನ ವಿಶ್ವಾಸ

ಜಯಲಲಿತಾ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ಕರ್ನಾಟಕ ವಿಫಲವಾದರೆ ಕರ್ನಾಟಕದ ನ್ಯಾಯಾಂಗದ ಮೇಲೆ ಸುಪ್ರೀಂಕೋರ್ಟ್ ಇಟ್ಟಿರುವ ನಂಬಿಕೆ ಕಳೆದುಕೊಂಡಂತಾಗುತ್ತದೆ ಎಂದು ಅಡ್ವೊಕೇಟ್ ಜನರಲ್ ರವಿವರ್ಮ ಕುಮಾರ್ ಅವರು ಸರಕಾರಕ್ಕೆ ತಿಳಿಸಿದ್ದರು. ತಮಿಳುನಾಡಿನಿಂದ ಕರ್ನಾಟಕಕ್ಕೆ ಪ್ರಕರಣ ವರ್ಗಾವಣೆ ಮಾಡಿದಾಗ, ಇಲ್ಲಿನ ನ್ಯಾಯಾಂಗ ಮೇಲೆ ವಿಶ್ವಾಸವಿಟ್ಟು ವರ್ಗಾವಣೆ ಮಾಡಲಾಗಿತ್ತು. ಮೇಲ್ಮನವಿ ಸಲ್ಲಿಸದಿದ್ದರೆ ನಂಬಿಕೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರು ಸರ್ಕಾರವನ್ನು ಎಚ್ಚರಿಸಿದ್ದರು.

ಜನರ ನಿಲುವು ಬದಲಾಗಬಹುದು

ಜನರ ನಿಲುವು ಬದಲಾಗಬಹುದು

ಕಾವೇರಿ ವಿವಾದದಲ್ಲಿ ಕರ್ನಾಟಕ-ತಮಿಳುನಾಡು ನಡುವೆ ಜಟಾಪಟಿ ನಡೆಯುತ್ತಲೇ ಇದೆ. ಜಯಲಿತಾ ಮುಖ್ಯಮಂತ್ರಿಯಾದಾಗ ಇದು ಇನ್ನಷ್ಟು ಹೆಚ್ಚಾಗುತ್ತದೆ. ಸದ್ಯ ಜಯಲಲಿತಾ ವಿರುದ್ಧ ಕರ್ನಾಟಕ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೂ ಸುಮ್ಮನಿದ್ದರೆ, ರಾಜ್ಯ ಸರ್ಕಾರದ ಬಗ್ಗೆ ಜನರ ನಿಲುವು ಬದಲಾಗಬಹುದೆಂದು ಸುಪ್ರೀಂಕೋರ್ಟ್ ಮೆಟ್ಟಿಲೇರಲು ಸರ್ಕಾರ ತೀರ್ಮಾನಿಸಿದೆ.

ಜಯ ಕೇಸಲ್ಲಿ ಏನೇನಾಯ್ತು?

ಜಯ ಕೇಸಲ್ಲಿ ಏನೇನಾಯ್ತು?

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಜಯಲಲಿತಾ ಅವರಿಗೆ 4 ವರ್ಷದ ಜೈಲು ಶಿಕ್ಷೆ ಮತ್ತು 100 ಕೋಟಿ ದಂಡ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಅವರು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಶೇಷ ಪೀಠ, ಪ್ರಕರಣದಲ್ಲಿ ಜೆ.ಜಯಲಲಿತಾ ಸೇರಿದಂತೆ ನಾಲ್ವರು ಅಪರಾಧಿಗಳನ್ನು ನಿರ್ದೋಷಿಗಳು ಎಂದು ಮೇ 11ರಂದು ತೀರ್ಪು ನೀಡಿತ್ತು. ಮೇ.23ರಂದು ಜಯಲಲಿತಾ ಅವರು ಪುನಃ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

English summary
The Karnataka cabinet has finally decided to file an appeal in the Supreme Court challenging the acquittal of Tamil Nadu Chief Minister J.Jayalalithaa in disproportionate assets case, Here is 7 reasons.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X