ಜಯಲಲಿತಾ ಕೇಸ್ : ಮೇಲ್ಮನವಿ ಸಲ್ಲಿಸಲಿದೆ ಕರ್ನಾಟಕ

ಬೆಂಗಳೂರು, ಜೂ. 01 : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ಕರ್ನಾಟಕ ಸರ್ಕಾರ ತೀರ್ಮಾನ ಕೈಗೊಂಡಿದೆ. ಹಲವು ದಿನಗಳಿಂದ ಸರ್ಕಾರ ಮೇಲ್ಮನವಿ ಸಲ್ಲಿಸಲಿದೆಯೇ? ಇಲ್ಲವೇ ಎಂಬ ಚರ್ಚೆ ನಡೆದಿತ್ತು.

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಕಾನೂನು ತಜ್ಞರ ಜೊತೆ ಹಲವು ಸುತ್ತಿನ ಚರ್ಚೆ ನಡೆಸಿದ ಬಳಿಕ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ['ಮೇಲ್ಮನವಿ ಸಲ್ಲಿಸದೆ ವಿಶ್ವಾಸದ್ರೋಹ ಮಾಡಬೇಡಿ']

jayalalithaa

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಸೇರಿದಂತೆ ನಾಲ್ವರು ಅಪರಾಧಿಗಳನ್ನು ನಿರ್ದೋಷಿಗಳು ಎಂದು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. [ಜಯಾ ವಿರುದ್ಧದ ಮೇಲ್ಮನವಿಗೆ ಕಾನೂನು ತೊಡಕಿದೆಯೇ?]

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಸರ್ಕಾರ ಸದ್ಯಕ್ಕೆ ಮೇಲ್ಮನವಿ ಸಲ್ಲಿಸುವುದಿಲ್ಲ, ಕಾಂಗ್ರೆಸ್ ಶಾಸಕರು ಸಹ ಮೇಲ್ಮನವಿ ಸಲ್ಲಿಸಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕಳೆದ ವಾರ ನಡೆದ ಸಂಪುಟ ಸಭೆಯಲ್ಲಿಯೂ ಮೇಲ್ಮನವಿ ಸಲ್ಲಿಸುವ ಕುರಿತು ಚರ್ಚೆ ನಡೆದಿತ್ತು.[ಜಯಾ ಖುಲಾಸೆ ಬಿ.ವಿ.ಆಚಾರ್ಯ ಸಂದರ್ಶನ]

ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ.ಆಚಾರ್ಯ ಅವರು ಹೈಕೋರ್ಟ್ ಆದೇಶವವನ್ನು ಪ್ರಶ್ನಿಸಿ ತಕ್ಷಣ ಮೇಲ್ಮನವಿ ಸಲ್ಲಿಸಿ ಎಂದು ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ್ದರು. ಮೇಲ್ಮನವಿ ಸಲ್ಲಿಸುವುದು ವಿಳಂಬವಾದರೆ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಆಚಾರ್ಯ ತಮ್ಮ ಸಲಹೆಯಲ್ಲಿ ತಿಳಿಸಿದ್ದರು.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಜಯಲಲಿತಾ ಅವರಿಗೆ 4 ವರ್ಷದ ಜೈಲು ಶಿಕ್ಷೆ ಮತ್ತು 100 ಕೋಟಿ ದಂಡ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಅವರು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಕೋರ್ಟ್ ಪ್ರಕರಣದಲ್ಲಿ ಅವರು ದೋಷಮುಕ್ತರು ಎಂದು ತೀರ್ಪು ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+