Siren Ban: ವಿಐಪಿ ವಾಹನಗಳಲ್ಲಿ ಇನ್ಮುಂದೆ ಸೈರನ್ ಬ್ಯಾನ್: ಡಿಜಿ ಐಜಿಪಿ ಆದೇಶ
ರಸ್ತೆಗಳಲ್ಲಿ ತಮ್ಮ ವಾಹನಗಳಿಗೆ ವಿಐಪಿ ಹೆಸರಲ್ಲಿ ಸೈರನ್ ಹಾಕಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡೋದು ಸಾಮಾನ್ಯ. ಇದರಿಂದ ಬೇಸತ್ತಿರುವ ಮಂದಿಗೆ ಕೊನೆಗೂ ನೆಮ್ಮದಿಯ ಸುದ್ದಿ ಹೊರಬಿದ್ದಿದೆ. ಇನ್ನು ಮುಂದೆ ಅತಿ ಗಣ್ಯ ವ್ಯಕ್ತಿಗಳ (ವಿಐಪಿ) ಸಂಚಾರದ ವೇಳೆ ವಾಹನಗಳು ಸೈರನ್ ಬಳಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಖಡಕ್ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣಿಸುವ ಉದ್ದೇಶದಿಂದ ಈ ಮಹತ್ವದ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕರ ಸುರಕ್ಷತೆ, ಶಬ್ದ ಮಾಲಿನ್ಯ ನಿಯಂತ್ರಣಿಸುವ ಉದ್ದೇಶದಿಂದ ಹೊರಡಿಸಲಾಗಿರುವ ಈ ಆದೇಶವನ್ನು ಎಲ್ಲ ಘಟಕಾಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಸೂಚಿಸಿದ್ದಾರೆ. ಆದೇಶದಲ್ಲಿ ವಿಐಪಿ ಸಂಚಾರ ವೇಳೆ ಅನವಶ್ಯಕ ಸೈರನ್ ಬಳಕೆ ಮಾಡುವುದರಿಂದ ಗಣ್ಯರು ಸಂಚಾರ ಮಾಡುವ ರಸ್ತೆಯ ಮಾಹಿತಿ ಅನಧಿಕೃತ ವ್ಯಕ್ತಿಗಳಿಗೆ ಲಭ್ಯವಾಗುತ್ತಿದ್ದು, ಇದರಿಂದ ಅವರ ಭದ್ರತೆಗೆ ಅಪಾಯಕಾರಿ ಪರಿಸ್ಥಿತಿ ಸೃಷ್ಟಿಯಾಗಬಹುದು ಎಂದು ತಿಳಿಸಲಾಗಿದೆ.

ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆ ಒಡ್ಡುತ್ತದೆ ಹಾಗು ಶಬ್ದ ಮಾಲಿನ್ಯವೂ ಹೆಚ್ಚುತ್ತದೆ ಎಂದು ಕೂಡಲೇ ಎಚ್ಚರಿಸಲಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ಹಠಾತ್ ಸೈರನ್ ಘೋಷಣೆಯಿಂದ ಇತರ ವಾಹನ ಚಾಲಕರಲ್ಲಿ ಗೊಂದಲ ಉಂಟಾಗುವುದು, ವಾಹನಗಳು ಅಡ್ಡಾದಿಡ್ಡಿಯಾಗಿ ಚಲಿಸುವ ಪರಿಸ್ಥಿತಿ ಉಂಟಾಗುವುದು ಸೇರಿ ಹಲವು ಸಮಸ್ಯೆಗಳು ಎದುರಾಗುತ್ತವೆ.
ಈ ಕಾರಣದಿಂದಾಗಿ, ಎಲ್ಲ ಘಟಕಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಕಟ್ಟುನಿಟ್ಟಾಗಿ ಈ ನಿಷೇಧವನ್ನು ಪಾಲಿಸುವಂತೆ ಸೂಚಿಸಲಾಗಿದೆ. ಸೈರನ್ ಬಳಕೆ ತುರ್ತು ಪರಿಸ್ಥಿತಿಗಳಾದ ಹಣಕಾಸು ವಾಹನಗಳು, ಅಗ್ನಿಶಾಮಕ ವಾಹನಗಳು ಮತ್ತು ವೈದ್ಯಕೀಯ ತುರ್ತು ಸೇವೆಗಳಿಗಷ್ಟೇ ಮಿತಿ ಇರಲಿದ್ದು, ವಿಐಪಿ ಸಂಚಾರದಲ್ಲಿ ಸೈರನ್ ಬಳಕೆಯು ಸಂಪೂರ್ಣ ನಿಷೇಧಿಸಲಾಗಿದೆ.
ಯಾರಿಗೆ ವಿನಾಯಿತಿ?
ವಿಐಪಿ ಸಂಚಾರದಲ್ಲಿ ಮಾತ್ರವಲ್ಲದೆ, ಯಾವುದೇ ಪ್ರಕರಣದಲ್ಲಿ ಆಂಬ್ಯುಲೆನ್ಸ್, ಅಗ್ನಿಶಾಮಕ ಮತ್ತು ಪೊಲೀಸ್ ವಾಹನಗಳು ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಸೈರನ್ ಬಳಕೆ ಮಾಡಲು ಅನುಮತಿ ಇದೆ. ಇನ್ನು ಮುಂದೆ ವಿಐಪಿ ಸಂಚಾರಕ್ಕೆ ಸೈರನ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರವೇ ಸೈರನ್ ಬಳಸಬೇಕು. ಈ ನಿಯಮ ಉಲ್ಲಂಘಿಸಿದರೆ ಮೋಟಾರ್ ವಾಹನ ಕಾಯ್ದೆ 190(2)ರಡಿ ದಂಡ ಹಾಗೂ ಮೂರು ತಿಂಗಳು ಜೈಲುಶಿಕ್ಷೆ ವಿಧಿಸಬಹುದು ಎಂದು ಎಚ್ಚರಿಕೆ ಕೊಡಲಾಗಿದೆ.
ವಿಐಪಿ ಸಂಚಾರದ ವೇಳೆ ತುರ್ತು ಅವಶ್ಯಕತೆಗಳಿಗೆ ವೈರ್‌ಲೆಸ್ ಕಮ್ಯುನಿಕೇಶನ್ ಮುಖಾಂತರ ಮಾಹಿತಿ ವಿನಿಮಯ ಮಾಡಬೇಕು. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ತುರ್ತು ಸೇವೆಯ ವಾಹನಗಳನ್ನು ಹೊರತುಪಡಿಸಿ, ಬೇರೆ ಯಾರೂ ಸೈರನ್ ಬಳಸುವಂತಿಲ್ಲ. ಹಾಗೆಯೇ ಪೊಲಿಸ್ ಸೈರನ್ ಕೂಡ ಬಳಸಬಾರದು ಎಂದು ಹೇಳಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications