102 ತಾಲೂಕುಗಳಲ್ಲಿ ಬರ: ಶಾಸಕರೊಂದಿಗೆ ಇಂದು ಸಿಎಂ ಸಭೆ; ತಿಂಗಳಾಂತ್ಯದಲ್ಲಿ ಕೇಂದ್ರಕ್ಕೆ ಬರ ವರದಿ: ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಈ ಬಗ್ಗೆ ಸದನದಲ್ಲಿ ಚರ್ಚೆಗಳೇ ಆಗುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ. ಇದರ ಬೆನ್ನಲ್ಲೇ ರಾಜ್ಯದ ಬರ ವರದಿಯನ್ನು ಇದೇ ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ಸಲ್ಲಿಸಲಾಗುವುದು. ಆಯಾ ಜಿಲ್ಲೆಗಳಿಗೆ ಸಚಿವರನ್ನು ನೇಮಕ ಮಾಡಿದ್ದು ಅವರು ಜಿಲ್ಲೆ ಅಭಿವೃದ್ಧಿ, ಪಕ್ಷದ ಕೆಲಸ ಎರಡು ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರ ಜೊತೆಗೆ ಮಾತನಾಡಿದ ಪರಮೇಶ್ವರ್ ಅವರು, ಪ್ರತಿನಿತ್ಯ ಅನೇಕ ಶಾಸಕರುಗಳು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತಾರೆ. ಆ ಕಾರಣಕ್ಕಾಗಿ ಇಂದು ಮುಖ್ಯಮಂತ್ರಿಗಳು ಶಾಸಕರುಗಳ ಜೊತೆ ಸಭೆ ನಡೆಸಲಿದ್ದಾರೆ. ಅವರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆಗಳು ನಡೆಯಲಿದೆ ಎಂದರು.

Karnataka Drought

ಬ್ಯಾಚ್‌ ಟು ಬ್ಯಾಚ್‌ ರೀತಿಯಲ್ಲಿ ಸಾಯಂಕಾಲದವರೆಗೆ ಶಾಸಕರುಗಳ ಜೊತೆ ಸಭೆಯನ್ನು ಮಾಡಿ ಸಮಸ್ಯೆಯನ್ನು ಆಲಿಸಿ ಮುಖ್ಯಮಂತ್ರಿಗಳು ಪರಿಹಾರ ನೀಡಲಿದ್ದಾರೆ. ಕಾಂಗ್ರೆಸ್ ಎಂಎಲ್ಎಗಳನ್ನು ಮಾತ್ರ ಸಭೆಗೆ ಕರೆದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆಡಳಿತ ಪಕ್ಷವಾಗಿ ನಾವು ಒಗ್ಗಟ್ಟಾಗಿ ಇರಬೇಕು. ಯಾವುದೇ ಪಕ್ಷವು ಆಡಳಿತದಲ್ಲಿದ್ದಾಗ ಹೆಚ್ಚಿನ ಒತ್ತು ಕೊಡುತ್ತಾರೆ. ಹಾಗಾಗಿ ನಾವು ಕೂಡ ಅದೇ ಕೆಲಸವನ್ನು ಮಾಡುತ್ತಿದ್ದೇವೆ. ನಮ್ಮನ್ನು ಜನರು ಆರಿಸಿದ್ದಾರೆ, ಆಡಳಿತ ಪಕ್ಷ ಅವರದ್ದು ಎಂಬ ನಿರೀಕ್ಷೆ ಕೂಡ ಹಾಗೆಯೇ ಇರುತ್ತದೆ. ಹಾಗಾಗಿ ಹೆಚ್ಚು ಅವಕಾಶಗಳು ಇರುತ್ತವೆ ಎಂದು ತಿಳಿಸಿದರು.

ಸ್ಥಳೀಯ ಚುನಾವಣೆ ಜವಾಬ್ದಾರಿ ಜಿಲ್ಲಾ ಮಂತ್ರಿಗಳಿಗೆ?

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದಾಗಲಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಜವಾಬ್ದಾರಿಯನ್ನು ಸಚಿವರಿಗೆ ಒಪ್ಪಿಸುತ್ತಾರೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಪ್ರತಿ ಜಿಲ್ಲೆಗೆ ಒಬ್ಬ ಮಂತ್ರಿಯನ್ನು ನೇಮಕ ಮಾಡಿದ್ದೇವೆ. ಅವರು ಎರಡು ಕೆಲಸವನ್ನು ಮಾಡಬೇಕು. ಅವರು ಪಕ್ಷದ ಕೆಲಸವನ್ನು ಮಾಡಬೇಕು. ಜೊತೆಗೆ ಅಭಿವೃದ್ಧಿ ಕೆಲಸವನ್ನು ಮಾಡಬೇಕು. ಅವರಿಗೆ ಅದಕ್ಕೆ ಜವಾಬ್ದಾರಿಯನ್ನು ಕೊಡುತ್ತೇವೆ. ಜಿಲ್ಲಾ ಮಂತ್ರಿಗಳಾಗಿದ್ದಾಗ, ಆ ಜಿಲ್ಲೆಗೆ ಸಂಬಂಧಿಸಿದ ಪಕ್ಷದ ಸಮಸ್ಯೆಯನ್ನು ಬಗೆಹರಿಸಬೇಕು. ಜೊತೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿರುವಂತದ್ದು ಎಂದು ವಿವರಿಸಿದರು.

ಆಗಸ್ಟ್ ಅಂತ್ಯಕ್ಕೆ ಕೇಂದ್ರಕ್ಕೆ ವರದಿ

ಶಾಸಕರುಗಳ ಜೊತೆಗೆ ಇಂದಿನ ಸಭೆಯಲ್ಲಿ ಬರಗಾಲ ಕುರಿತು ಮಹತ್ವದ ಚರ್ಚೆಗಳು ಆಗಲಿವೆ. ಕೇಂದ್ರ ಸರ್ಕಾರದಿಂದ ಬರ ಘೋಷಣೆಗಿರುವ ನಿಯಮಗಳ ಪ್ರಕಾರ ನಾವು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬಹುದು. ಮಾನದಂಡಗಳ ಪ್ರಕಾರ ಈಗ 102 ತಾಲೂಕುಗಳಲ್ಲಿ ಬರ ಇದೆ. ಗ್ರೌಂಡ್ ಟ್ರೂಥಿಂಗ್ ಮಾಡಿದನ್ನು ನಾವು ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ. ಪ್ರತಿ ವಾರವೂ ಈ ಬಗ್ಗೆ ವಿಮರ್ಶಿಸುತ್ತೇವೆ. ಈ ತಿಂಗಳ ಕೊನೆಯಲ್ಲಿ ಸಂಪೂರ್ಣ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಹನೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇಂತಹ ಘಟನೆಗಳು ಆದಾಗ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಅನುಮಾನಗಳನ್ನು ಉಂಟಾದಾಗ ಅದನ್ನು ಸಿಐಡಿಗೆ ಕೊಡುತ್ತೇವೆ. ಅದೇ ರೀತಿಯಲ್ಲಿ ಈ ಕೇಸ್ ಅನ್ನು ಕೂಡ ಕೊಡಲಾಗಿದೆ. ಅದರಲ್ಲಿ ಹೊಸತೇನಿಲ್ಲ ಎಂದು ಸ್ಪಷ್ಟಪಡಿಸಿದರು.

ಕಂದಾಯ ಸಹಾಯಕರಿಗೆ ಡಿಸಿಎಂ ಭರವಸೆ

ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದವರು ಸೋಮವಾರ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಭೇಟಿ ನೀಡಿ ಅವರ ಬೇಡಿಕೆಗಳ ಮನವಿ ಪತ್ರ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು, ನಿಮ್ಮದು ನ್ಯಾಯಯುತವಾಗಿರುವಂತಹ ಬೇಡಿಕೆ. ನಿಮ್ಮ ಸಂಕಷ್ಟಗಳು, ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡಿ, ಬಗೆಹರಿಸಲು ಎಲ್ಲಾ ರೀತಿಯ ಪ್ರಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಭರವಸೆ ಕೊಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+