ಕರ್ನಾಟಕದಲ್ಲಿ ಬರಪೀಡಿತ ತಾಲೂಕುಗಳು 177! ಪರಿಹಾರ ಬಗ್ಗೆ ಜಿ.ಪರಮೇಶ್ವರ ಅಪ್ಡೇಟ್ ಇಲ್ಲಿದೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರಂತರವಾಗಿ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಲಾಗುತ್ತಿದೆ. ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತಿದ್ದೇವೆ. ಇದೀಗ ಮೂರನೇ ಹಂತದಲ್ಲಿ ಮತ್ತಷ್ಟು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದರು.

ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ಮತ್ತೆ 53 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಈ ಪೈಕಿ 51 ತಾಲೂಕುಗಳು ತೀವ್ರ ಹಾಗೂ 2 ತಾಲೂಕುಗಳು ಸಾಧಾರಣ ಬರಪೀಡಿತವಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ ಎಂದು ಲೆಕ್ಕ ಕೊಟ್ಟರು.

Karnataka Drought

11 ತಾಲೂಕುಗಳಲ್ಲಿ ಕ್ಷೇತ್ರ ಪರಿಶೀಲನೆ, ಪರಿಹಾರ ಯಾವಾಗ?

ಇದರ ಜೊತೆಗೆ, ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸ್ಥಿತಿ ಸೇರಿದಂತೆ ವಿವಿಧ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ 4ನೇ ಹಂತದಲ್ಲಿ 7 ಜಿಲ್ಲೆಗಳ 11 ತಾಲೂಕುಗಳು ಕ್ಷೇತ್ರ ಪರಿಶೀಲನೆಗೆ ಅರ್ಹತೆ ಪಡೆದಿವೆ. ವೈಜ್ಞಾನಿಕ ಪರಿಶೀಲನೆ, ಪಾರದರ್ಶಕ ಸಮೀಕ್ಷೆ ಮತ್ತು ನಿಖರ ವರದಿಯ ಆಧಾರದಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಮೂಲಕ ವರದಿ ನೋಡಿಕೊಂಡು ಶೀಘ್ರವೇ ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಅವರು ಸುಳಿವು ನೀಡಿದರು.

ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಕೆ

ಮುಂಗಾರು ಹಂಗಾಮು ಮುಗಿಯುವವರೆಗೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದೆ. ಅಗತ್ಯ ಕಂಡುಬಂದಲ್ಲಿ ಮುಂದಿನ ಹಂತದಲ್ಲಿಯೂ ಹೆಚ್ಚುವರಿ ತಾಲೂಕುಗಳನ್ನು ಕ್ಷೇತ್ರ ಪರಿಶೀಲನೆಗೆ ಸೇರಿಸಲಾಗುವುದು. ಬೆಳೆ ಹಾನಿಯ ನೈಜ ಚಿತ್ರಣ ಆಧರಿಸಿ, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನಿಯಮಾನುಸಾರ ಅಗತ್ಯ ನೆರವು ತಲುಪಿಸಲು ನಾವು ಬದ್ಧರಿದ್ದೇವೆ ಎಂದರು.

ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಗರಿಷ್ಠ ಮಳೆ ಕೊರತೆ ಕಾಣುವಂತಾಗಿದೆ. ಒಟ್ಟಾರೆ ಶೇಕಡಾ 36ರಷ್ಟು ಮಳೆ ಕೊರತೆ ಉಂಟಾಗಿದೆ. ಅದರಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ 46%, ಉತ್ತರ ಒಳನಾಡಿನಲ್ಲಿ 44%, ಮಲೆನಾಡು ಭಾಗದಲ್ಲಿ 38% ಮತ್ತು ಮೂರು ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಭಾಗದಲ್ಲಿ 28%ರ ಷ್ಟು ಮಳೆ ಕೊರತೆ ಉಂಟಾಗಿದೆ. ಇದು ರೈತರ ನಿದ್ದೆಗಡಿಸಿದೆ. ಆರಂಭದಲ್ಲಿ ಬಂದ ಮಳೆ ನೋಡಿದ ರೈತರು ಬಿತ್ತನೆ ಮಾಡಿದರು. ಆದರೆ ನಂತರದ ದಿನಳಗಳಲ್ಲಿ ಮಳೆ ಆಗದೇ ಬೆಳೆಗಳು ಒಣಗಿದ ಪರಿಣಾಮ ಬೆಳೆ ಹಾನಿ ಆಯಿತು. ಕೆಲವು ರೈತರು ಎರಡನೇ ಬಾರಿ ಬಿತ್ತನೆ ಮಾಡಿ ಕೈ ಸುಟ್ಟುಕೊಂಡರು. ರೈತರ ಸಂಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸುತ್ತಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+