ಬರದ ಹೊಡೆತಕ್ಕೆ ಕರ್ನಾಟಕ ತತ್ತರ: ಪ್ರಧಾನಿ ಮೋದಿಗೆ ಡಿಕೆಶಿ ಪತ್ರ; ಮಧ್ಯಂತರ ಪರಿಹಾರಕ್ಕೆ ಆಗ್ರಹ

Karnataka Drought: ಕರ್ನಾಟಕದಲ್ಲಿ ಮಳೆ ಕೊರತೆ ತೀವ್ರಗೊಂಡಿರುವ ಬೆನ್ನಲ್ಲೇ, ರಾಜ್ಯದ ಬರ ಪರಿಸ್ಥಿತಿಗೆ ತುರ್ತು ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 177ಕ್ಕೆ ಏರಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

2026ರ ನೈಋತ್ಯ ಮುಂಗಾರು ಅಂತ್ಯದ ವೇಳೆಗೆ ರಾಜ್ಯದ 200ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಪರಿಸ್ಥಿತಿ ಎದುರಾಗಬಹುದು ಎಂದು ಅಂದಾಜಿಸಲಾಗಿದೆ. ಹೊಸದಾಗಿ ಬರಪೀಡಿತ ಎಂದು ಘೋಷಿಸಲಾದ ಪ್ರದೇಶಗಳಲ್ಲಿ ಬೆಳೆ ಹಾಗೂ ಇತರೆ ನಷ್ಟ-ಹಾನಿಗಳ ಮೌಲ್ಯಮಾಪನ ನಡೆಯುತ್ತಿದ್ದು, ಅದು ಪೂರ್ಣಗೊಂಡ ಬಳಿಕ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (NDRF) ಅಡಿಯಲ್ಲಿ ಹೆಚ್ಚುವರಿ ಆರ್ಥಿಕ ನೆರವು ಕೋರಿ ಕೇಂದ್ರಕ್ಕೆ ಹೆಚ್ಚುವರಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Karnataka Drought Intensifies CM DK Shivakumar Writes to PM Narendra Modi Seeking Urgent Central Relief

Karnataka Drought: ಬರದಿಂದ ಎಲ್ಲಾ ಕ್ಷೇತ್ರದ ಮೇಲು ಪರಿಣಾಮ

ಕರ್ನಾಟಕದ ಪ್ರಮುಖ ಮಳೆಗಾಲವಾಗಿರುವ ನೈಋತ್ಯ ಮುಂಗಾರು ಕೃಷಿಗೆ ಮಾತ್ರವಲ್ಲದೆ, ಜಲಾಶಯಗಳ ನೀರು ಸಂಗ್ರಹ, ಜಲವಿದ್ಯುತ್ ಉತ್ಪಾದನೆ, ಮೇವಿನ ಲಭ್ಯತೆ ಹಾಗೂ ಅಂತರ್ಜಲ ಮರುಪೂರಣಕ್ಕೂ ಅತ್ಯಂತ ಮಹತ್ವದ್ದಾಗಿದೆ. ಆದರೆ ಪ್ರಸಕ್ತ ಮುಂಗಾರಿನಲ್ಲಿ ಉಂಟಾಗಿರುವ ಮಳೆ ಕೊರತೆಯಿಂದ ಈ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ.

ವಿಶೇಷವಾಗಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದು ಗಂಭೀರ ವಿಚಾರವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ತಿಂಗಳುಗಳಲ್ಲಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಕುಡಿಯುವ ನೀರಿನ ಲಭ್ಯತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ.

ಬರ ಪರಿಸ್ಥಿತಿ ಮತ್ತಷ್ಟು ತೀವ್ರ

ನೈಋತ್ಯ ಮುಂಗಾರು ಅಂತಿಮ ಹಂತಕ್ಕೆ ತಲುಪುತ್ತಿರುವ ಸಂದರ್ಭದಲ್ಲಿ ಮಳೆ ಹಾಗೂ ಮಣ್ಣಿನ ತೇವಾಂಶದಲ್ಲಿ ನಿರಂತರ ಕುಸಿತ ಕಂಡುಬರುತ್ತಿದೆ. ಇದರಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದ್ದು, ಬೇಸಿಗೆಯಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡುವ ಆತಂಕವಿದೆ. 40 ಲಕ್ಷ ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟ ಸಂಭವಿಸುವ ಸಾಧ್ಯತೆಯನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬರದಿಂದ ಉಂಟಾದ ನಷ್ಟ ಮತ್ತು ಹಾನಿಗಳ ಪ್ರಾಥಮಿಕ ಮೌಲ್ಯಮಾಪನಕ್ಕಾಗಿ ಅಂತರ-ಸಚಿವಾಲಯ ಕೇಂದ್ರ ತಂಡವನ್ನು (IMCT) ರಾಜ್ಯಕ್ಕೆ ನಿಯೋಜಿಸುವ ಪ್ರಸ್ತಾವನೆಯಿದೆ. ತಂಡದ ವರದಿ ಬಳಿಕ ಅದನ್ನು ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಉಪಸಮಿತಿಯ ಮುಂದೆ ಮಂಡಿಸಲಾಗುತ್ತದೆ. ನಂತರ ಉಪಸಮಿತಿಯ ಶಿಫಾರಸುಗಳನ್ನು ಉನ್ನತ ಮಟ್ಟದ ಸಮಿತಿ ಪರಿಶೀಲಿಸಿ ಅನುಮೋದಿಸುವ ಪ್ರಕ್ರಿಯೆ ನಡೆಯಲಿದೆ.

ಶೇ.50ರಷ್ಟನ್ನು ಮಧ್ಯಂತರ ಆರ್ಥಿಕ ನೆರವಿಗೆ ಮನವಿ

ಆದರೆ ಬರ ಪರಿಸ್ಥಿತಿ ವೇಗವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಈ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕಾಯುವುದು ಕಷ್ಟವಾಗಬಹುದು ಎಂದು ರಾಜ್ಯ ಸರ್ಕಾರ ಕೇಂದ್ರದ ಗಮನಕ್ಕೆ ತಂದಿದೆ. ಹೀಗಾಗಿ ಜ್ಞಾಪಕ ಪತ್ರದಲ್ಲಿ ಕೋರಿರುವ ಒಟ್ಟು ಪರಿಹಾರ ಮೊತ್ತದ ಶೇ.50ರಷ್ಟನ್ನು ಮಧ್ಯಂತರ ಆರ್ಥಿಕ ನೆರವಿನ ರೂಪದಲ್ಲಿ ತಕ್ಷಣ ಬಿಡುಗಡೆ ಮಾಡುವಂತೆ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಮಧ್ಯಂತರ ನೆರವು ದೊರೆತರೆ ಬೆಳೆ ನಷ್ಟಕ್ಕೆ ಇನ್‌ಪುಟ್ ಸಬ್ಸಿಡಿ ನೀಡುವುದು, ಕುಡಿಯುವ ನೀರು ಪೂರೈಸುವುದು, ಜಾನುವಾರುಗಳನ್ನು ರಕ್ಷಿಸುವುದು ಸೇರಿದಂತೆ ತುರ್ತು ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನೆರವಾಗಲಿದೆ. ಇದರಿಂದ ಸಂಕಷ್ಟದಲ್ಲಿರುವ ರೈತರು ಹಾಗೂ ಗ್ರಾಮೀಣ ಜನರಿಗೆ ತಕ್ಷಣದ ಬೆಂಬಲ ಒದಗಿಸಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದರ ಜೊತೆಗೆ, ಬರ ಪರಿಸ್ಥಿತಿಯ ತೀವ್ರತೆಯನ್ನು ಪರಿಗಣಿಸಿ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (SDRF)ಯ ಎರಡನೇ ಕಂತಿನ ಕೇಂದ್ರ ಪಾಲನ್ನೂ ಮುಂಚಿತವಾಗಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.

ಕರ್ನಾಟಕದಲ್ಲಿ ಬರದ ವ್ಯಾಪ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದಿಂದ ತುರ್ತು ಆರ್ಥಿಕ ನೆರವು ಕೋರಿ ರಾಜ್ಯ ಸರ್ಕಾರ ಮಾಡಿರುವ ಮನವಿ ಇದೀಗ ಮಹತ್ವ ಪಡೆದುಕೊಂಡಿದೆ. ಮುಂದಿನ ವಾರಗಳಲ್ಲಿ ಮಳೆಯ ಪ್ರಮಾಣ, ಜಲಾಶಯಗಳ ನೀರಿನ ಮಟ್ಟ ಹಾಗೂ ಬೆಳೆ ನಷ್ಟದ ವಾಸ್ತವಿಕ ಚಿತ್ರಣದ ಆಧಾರದ ಮೇಲೆ ಬರ ಪರಿಸ್ಥಿತಿಯ ಪ್ರಮಾಣ ಮತ್ತಷ್ಟು ಸ್ಪಷ್ಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+