Karnataka Drought: ರಾಜ್ಯದಲ್ಲಿ ಬರದ ಭೀತಿ, ದೆಹಲಿಯಲ್ಲಿ ಕುರ್ಚಿ ಕುಸ್ತಿ: ಕಾಂಗ್ರೆಸ್‌ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಭಾವ ಮತ್ತು ಅಂತರ್ಜಲ ಮಟ್ಟದ ತೀವ್ರ ಕುಸಿತದಿಂದಾಗಿ ಬರಗಾಲದ ಕರಿನೆರಳು ಆವರಿಸುತ್ತಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಡಳಿತವನ್ನು ಮರೆತು ದೆಹಲಿಯಲ್ಲಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಮೇಲಾಟದಲ್ಲಿ ಮಗ್ನರಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕರುನಾಡು ಬರದ ದವಡೆಗೆ ಸಿಲುಕುತ್ತಿರುವ ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರೈತರ ಸಹಾಯಕ್ಕೆ ನಿಲ್ಲಿ

ಮುಂಗಾರು ಕೊರತೆಯಿಂದ ಅನ್ನದಾತರು ಸಂಕಷ್ಟಕ್ಕೆ ಸಿಲುಕುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿರುವ ಅವರು, ಪ್ರಮುಖವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕಾಳಸಂತೆ ತಡೆಯಲು ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ರೈತರಿಗೆ ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಪಾರದರ್ಶಕ ದಾಸ್ತಾನು ವ್ಯವಸ್ಥೆ ಮಾಡಬೇಕು ಹಾಗೂ ಜಾನುವಾರುಗಳ ರಕ್ಷಣೆಗಾಗಿ ತಕ್ಷಣವೇ ತಾಲ್ಲೂಕು ಮಟ್ಟದಲ್ಲಿ ಮೇವು ಬ್ಯಾಂಕ್‌ಗಳನ್ನು ಸಕ್ರಿಯಗೊಳಿಸಬೇಕು, ಇಲ್ಲವಾದಲ್ಲಿ ರೈತರು ಅನಿವಾರ್ಯವಾಗಿ ಜಾನುವಾರುಗಳನ್ನು ಮಾರಾಟ ಮಾಡುವ ಸ್ಥಿತಿ ಬರಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

Karnataka drought

ಮಳೆಯ ಅನಿಶ್ಚಿತತೆಯ ಲಾಭ ಪಡೆದು ರೈತರನ್ನು ಲೂಟಿ ಮಾಡಲು ಕಾಳಸಂತೆಕೋರರು ಹೊಂಚು ಹಾಕುತ್ತಿದ್ದಾರೆ. ಸರ್ಕಾರ ಕೂಡಲೇ ಪ್ರತಿ ಜಿಲ್ಲೆಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಪಾರದರ್ಶಕವಾಗಿರುವಂತೆ ನೋಡಿಕೊಳ್ಳಬೇಕು. ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದಿದ್ದಾರೆ.

ಮೇವು ಬ್ಯಾಂಕ್‌ ಸ್ಥಾಪಿಸಿ

ಬರದಿಂದ ಜಾನುವಾರುಗಳಿಗೆ ಮೇವಿನ ಸಂಕಷ್ಟ ಎದುರಾಗಲಿದೆ. ತಕ್ಷಣವೇ ತಾಲ್ಲೂಕು ಮಟ್ಟದಲ್ಲಿ ಮೇವು ಬ್ಯಾಂಕ್‌ಗಳನ್ನು ಸಕ್ರಿಯಗೊಳಿಸಿ. ರೈತರು ಅನಿವಾರ್ಯವಾಗಿ ತಮ್ಮ ಜಾನುವಾರುಗಳನ್ನು ಕಾಸಾಯಿಖಾನೆಗಳಿಗೆ ಮಾರಾಟ ಮಾಡುವಂತಹ ಸ್ಥಿತಿ ನಿರ್ಮಾಣವಾಗಬಾರದು. ಭತ್ತ, ಜೋಳ ಹಾಗೂ ದ್ವಿದಳ ಧಾನ್ಯಗಳ ಇಳುವರಿ ಕುಂಠಿತಗೊಳ್ಳುವ ಭೀತಿಯಿದೆ. ಇದು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿಯಲಿದೆ. ಸರ್ಕಾರ ಈಗಲೇ ಬೆಳೆ ವಿಮೆ ಹಾಗೂ ಬರ ಪರಿಹಾರದ ಕ್ರಿಯಾ ಯೋಜನೆಯನ್ನು ರೂಪಿಸಿ, ಅನ್ನದಾತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು

ಅಂತರ್ಜಲ ಮಟ್ಟ ವೇಗವಾಗಿ ಕುಸಿಯುತ್ತಿದ್ದು, 12 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಬರುವ ಮುನ್ನವೇ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಿ. ದೆಹಲಿಯಲ್ಲಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಮೇಲಾಟಕ್ಕಿಂತ ರಾಜ್ಯದ ಜನರ ಹಿತ ಕಾಯುವುದು ಮುಖ್ಯಮಂತ್ರಿಗಳ ಪ್ರಥಮ ಆದ್ಯತೆಯಾಗಲಿ. ಸರ್ಕಾರ ಕೂಡಲೇ 'ಬರ ನಿರ್ವಹಣಾ ಸಮಿತಿ'ಯನ್ನು ಸಕ್ರಿಯಗೊಳಿಸಿ, ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+