Karnataka: "ಈ ಕಾರಣದಿಂದ ಕರ್ನಾಟಕದ ಅಭಿವೃದ್ಧಿಗೆ ಹಿನ್ನಡೆ"

ರಾಜ್ಯದಲ್ಲಿ ಮುಡಾ ಹಗರಣ ಹಾಗೂ ಆ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿ ಬಂದಾಗಿನಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವರೇಲ್ಲರೂ ಹೇಳಿಕೆ ಕೊಡುವುದರಲ್ಲೇ ಬ್ಯುಸಿಯಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳು ಮೂಲೆಗುಂಪಾಗಿವೆ ಎನ್ನುವ ಆರೋಪ ಇದೆ. ಇದೇ ವಿಷಯವನ್ನು ಇಟ್ಟುಕೊಂಡು ಜೆಡಿಎಸ್‌ ಪಕ್ಷವು ಕಾಂಗ್ರೆಸ್‌ನ ಮೇಲೆ ಕಿಡಿಕಾರಿದೆ.

ಕಳೆದ ಮೂರ್ನಾಲ್ಕು ತಿಂಗಳಿನಿಂದ ರಾಜ್ಯದಲ್ಲಿ ಮುಡಾ ಹಗರಣಗಳದ್ದೇ ಸದ್ದು. ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಬದಲಿ ನಿವೇಶನ ಪಡೆದ ಆರೋಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (ಅವರ ಪತ್ನಿ) ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರೂ, ಸಿ.ಎಂ ಈ ಸಂಕಷ್ಟದಿಂದ ಪಾರಾಗಿಲ್ಲ. ಇನ್ನೋಂದು ಕಡೆ ಸ್ವಪಕ್ಷದಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಜುಗರವತಂಹ ಹೇಳಿಕೆಗಳು ಕೇಳಿಬರುತ್ತಿವೆ.

Karnataka Due to this Karnataka s development is set back

ಇದೀಗ ವಿರೋಧ ಪಕ್ಷವು ಇದನ್ನೇ ಗುರಿಯಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿವೆ. ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಜೆಡಿಎಸ್‌ ಪಕ್ಷವು ಕುರ್ಚಿ ಕನಸಿಗೆ ರಾಜ್ಯದಲ್ಲಿ ಕುಸಿದ ಆಡಳಿತ ಯಂತ್ರ ಎನ್ನುವ ಶೀರ್ಷಿಕೆಯೊಂದಿಗೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದೆ.

ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಹಗರಣಗಳ ಸುಳಿಯಲ್ಲಿ ಸಿಲುಕಿ ರಾಜ್ಯದ ಅಭಿವೃದ್ಧಿಯನ್ನು ಪಾತಳಕ್ಕೆ ಇಳಿಸಿಬಿಟ್ಟಿದೆ. ರಾಜಧಾನಿ ಬೆಂಗಳೂರಿನ ರಸ್ತೆಗಳ ಗುಂಡಿಗಳು ಕಾಂಗ್ರೆಸ್‌ ಸರ್ಕಾರದ ಸರ್ಕಾರದ ಹದಗೆಟ್ಟ ಆಡಳಿತಕ್ಕೆ ಕನ್ನಡಿ ಹಿಡಿದಂತಿದೆ. ರಾಜ್ಯದಲ್ಲಿ ನೆರೆಹಾನಿಯಿಂದ ಸಂಕಷ್ಟಕ್ಕೊಳಗಾದವರಿಗೆ ಇಲ್ಲಿಯವರೆಗೂ ಪುನರ್‌ ಜೀವನ ಕಟ್ಟಿಕೊಡುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದೆ.

ಅಲ್ಲದೇ ದೀರ್ಘವಾಧಿ ಯೋಜನೆಗಳ ಅನುಷ್ಠಾನ ಮರೀಚಿಕೆಯಾಗಿದ್ದು, ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರಗಳಲ್ಲಿ ತೊಡಗಿ ಪ್ರತಿನಿತ್ಯ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ. ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳುವುದರಲ್ಲೇ ಮಗ್ನರಾಗಿದ್ದಾರೆ. ಇತ್ತ ತೆರವಾಗಲಿರುವ ಸಿಎಂ ಕುರ್ಚಿಗೆ ಟವೆಲ್‌ ಹಾಕಲು ಡೆಲ್ಲಿಯಾತ್ರೆ ಮಾಡುತ್ತಿರುವ ಆಕ್ಷಾಂಕ್ಷಿಗಳು, ರಹಸ್ಯ ಸಭೆಗಳನ್ನು ಮಾಡುತ್ತಾ ಅಧಿಕಾರಕ್ಕಾಗಿ ಹವಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ.

ವಿರೋಧ ಪಕ್ಷಗಳ ನಾಯಕರ ವಿರುದ್ಧ ಮಾಡುತ್ತಿರುವ ಸೇಡಿನ ರಾಜಕಾರಣವನ್ನೇ ಸಾಧನೆ ಎಂದು ಬಿಂಬಿಸುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ ನಾಡಿನ ಜನರೇ ತಕ್ಕ ಪಾಠ ಕಲಿಸುವುದು ಗ್ಯಾರಂಟಿ ಎಂದೂ ಜೆಡಿಎಸ್‌ ಪಕ್ಷ ಟ್ವೀಟ್‌ ಮಾಡಿದೆ.

ದಲಿತ ಸಚಿವರ ಸಭೆ: ರಾಜ್ಯದಲ್ಲಿ ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರವನ್ನು ತೀಕ್ಷ್ಣವಾಗಿ ಟೀಕೆ ಮಾಡುತ್ತಿವೆ. ಮತ್ತೊಂದು ಕಡೆ ಕಾಂಗ್ರೆಸ್‌ ನಾಯಕರು ಹಾಗೂ ಸಚಿವರ ನಡೆಯಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರೀ ಮುಜುಗರವಾಗುತ್ತಿದೆ. ರಾಜ್ಯದ ಪ್ರಮುಖ ಹಾಗೂ ದಲಿತ ಸಮುದಾಯದ ಸಚಿವರು ಪದೇ ಪದೇ ಸಭೆ ಸೇರುತ್ತಿದ್ದಾರೆ. ಇದರಿಂದ ಸಹಜವಾಗಿಯೇ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ವಿರೋಧ ಪಕ್ಷದವರಿಗಿಂತ ಹೆಚ್ಚಾಗಿ ಆಡಳಿತ ಪಕ್ಷದವರೇ ರಿಯಾಕ್ಟ್‌ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+