Karnataka Economy: ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೃಹ ಸಚಿವ ಜಿ. ಪರಮೇಶ್ವರ್
Karnataka Economy: ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ "ಪ್ರಗತಿಯತ್ತ ಕರ್ನಾಟಕ" ಮೂರು ವರ್ಷಗಳ ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ತುಮಕೂರು ಜಿಲ್ಲೆಯಲ್ಲಿ ನಡೆದಿರುವ 682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಕಂದಾಯ ಇಲಾಖೆಯ ಹಕ್ಕು ಪತ್ರಗಳನ್ನು ವಿತರಿಸಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಡವರು, ರೈತರು, ಕಾರ್ಮಿಕರು ಮತ್ತು ಶೋಷಿತರ ಸ್ವಾಭಿಮಾನದ ಬದುಕಿಗಾಗಿ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದಕ್ಕಾಗಿ ಈ ನಾಲ್ಕು ವರ್ಷಗಳಲ್ಲಿ ಬರೋಬ್ಬರಿ 2 ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದರು.
ಹಲವು ದಶಕಗಳಿಂದ ರಾಜ್ಯದ ಹಟ್ಟಿ, ತಾಂಡ, ಮಜರೆ ಗ್ರಾಮಗಳು ಕಂದಾಯ ಗ್ರಾಮಗಳಾಗದೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದರು. ಇದನ್ನು ರಾಜ್ಯ ಕಂದಾಯ ಇಲಾಖೆ ಆದ್ಯತೆ ಕಾರ್ಯಕ್ರಮವಾಗಿ ತೆಗೆದುಕೊಂಡು 14 ಲಕ್ಷಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ರಾಜ್ಯದಲ್ಲಿ ವಿತರಿಸಿದೆ. ತುಮಕೂರು ಜಿಲ್ಲೆಯೊಂದರಲ್ಲೇ 22 ಸಾವಿರ ಕಂದಾಯ ಗ್ರಾಮಗಳ ಹಕ್ಕು ಪತ್ರಗಳನ್ನು ನೀಡುವ ಮೂಲಕ ಇಂದು ಗಿನ್ನಿಸ್ ದಾಖಲೆ ಸೃಷ್ಟಿಸಲಾಗಿದೆ. ಅಲ್ಲದೆ, ತುಮಕೂರು ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ 650 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ನೀಡಿ ಇಂದು ಮತ್ತೊಂದು ದಾಖಲೆ ಸೃಷ್ಟಿಸಿದೆ ಎಂದರು.
Karnataka Economy: ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕವು ಮುಂಚೂಣಿ
ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದ್ದು, ವಿದೇಶಿ ನೇರ ಹೂಡಿಕೆಯಲ್ಲಿ ದೇಶದಲ್ಲೇ 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯಕ್ಕೆ 10 ಲಕ್ಷದ 24 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ಹರಿದುಬಂದಿದೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ನೀಡಿದ ಪ್ರತಿಯೊಂದು ಮಾತನ್ನು ಉಳಿಸಿಕೊಂಡಿದ್ದಾರೆ ಎಂದರು.
ರಾಜ್ಯ ಸರ್ಕಾರದ 3 ವರ್ಷಗಳ ಸಾಧನೆಗಳ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು. ಕಂದಾಯ ಇಲಾಖೆಯ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳ ವಿತರಣೆಯ ಮಾಹಿತಿಯನ್ನು ಒಳಗೊಂಡ ಬೃಹತ್ ವಸ್ತುಪ್ರದರ್ಶನವನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿತ್ತು.
ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಿಕಿಹೊಳಿ, ಬಿ.ಝೆಡ್. ಜಮೀರ್ ಅಹಮದ್ ಖಾನ್, ಈಶ್ವರ ಖಂಡ್ರೆ, ಆರ್.ಬಿ.ತಿಮ್ಮಾಪುರ, ಕೆ.ವೆಂಕಟೇಶ್, ಶಿವಾರಾಜ್ ತಂಗಡಗಿ, ಸುರೇಶ್ ಬಿ.ಎಸ್. ಲಕ್ಷ್ಮೀ ಹೆಬ್ಬಾಳ್ಕರ್, ಮಂಕಾಳ ಎಸ್.ವೈದ್ಯ, ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್, ಎನ್.ಎಸ್.ಬೋಸರಾಜು, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ಹಾಗೂ ಶಾಸಕರುಗಳು, ಸರ್ಕಾರದ ಅಪರ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ ಮುಂತಾದವರು ಇದ್ದರು.












Click it and Unblock the Notifications