Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ದಸರಾ ರಜೆ ಮುಗಿಯುವ ಮುನ್ನವೇ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಗುಡ್‌ ನ್ಯೂಸ್‌

ಬೆಂಗಳೂರು, ಸೆಪ್ಟೆಂಬರ್ 29: ರಾಜ್ಯದಲ್ಲಿ ದಸರಾ ರಜೆ ಮುಗಿಯಲು ಇನ್ನೂ ಕೆಲವೇ ದಿನಗಳು ಬಾಕಿಯಿರುವಾಗಲೇ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅನುಕೂಲಾಗುವಂತೆ ಮಹತ್ವದ ಯೋಜನೆಗಳನ್ನು ಜಾರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ಭರ್ಜರಿ ಗುಡ್‌ ನ್ಯೂಸ್‌ವೊಂದನ್ನು ನೀಡಿದೆ. ರಾಜ್ಯದ ಶಾಲಾ ಮಕ್ಕಳಿಗೆ ಸಂಭ್ರಮ ಶನಿವಾರ' (ಬ್ಯಾಗ್ ರಹಿತ ದಿನ) ಕಾರ್ಯಕ್ರಮದ ವರದಿಯನ್ನು ಸಲ್ಲಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

Karnataka Education Department Mandates Monthly Sambhrama Saturday Bag-Free Day in Schools

ವಿಷಯಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಶಾಲಾ ಬ್ಯಾಗ್ ಹೊರೆಯನ್ನು ತಗ್ಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದ ದಿನದಂದು ಬ್ಯಾಗ್ ರಹಿತ ದಿನವನ್ನು ಆಚರಣೆ ಮಾಡುವಂತೆ ಉಲ್ಲೇಖ-1ರ ಪತ್ರದಲ್ಲಿ ಆದೇಶ ಹೊರಡಿಸಲಾಗಿದೆ.

ಅದರಂತೆಯೇ ಪ್ರಸಕ್ತ ಸಾಲಿನಲ್ಲಿ ಕ್ರಮವಹಿಸಲು ಉಲ್ಲೇಖ-2 ರ ಸುತ್ತೋಲೆಯಲ್ಲಿ ಮಾರ್ಗದರ್ಶನ ನೀಡಲಾಗಿದೆ. ಮಕ್ಕಳನ್ನು ಹಲವು ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು, ವಿವಿಧ ಥೀಮ್‌ಗಳನ್ನು ಆಧರಿಸಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾದರಿಗಳು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಡಿಸರ್ಟ್‌ ವತಿಯಿಂದ ಸಿದ್ಧಪಡಿಸಲಾಗಿದೆ.

ಸದರಿ ಮಾದರಿಗಳು ಅರಿವು, ಅನುಭವ ಮತ್ತು ಅವಲೋಕನ ಎಂಬ ಮೂರು ಹಂತಗಳನ್ನು ಹೊಂದಿದ್ದು, ವಿದ್ಯಾರ್ಥಿಗಳೇ ಸ್ವತಃ ಕೈಗೊಳ್ಳಬಹುದಾದ ಚಟುವಟಿಕೆಗಳು ಆಗಿವೆ. ಸಂಭ್ರಮ ಶನಿವಾರದ ದಿನದಂದು ವೆಬ್‌ಸೈಟ್‌ನಲ್ಲಿ ಲಭ್ಯ ಇರುವ DSERTಯಿಂದ ಸಿದ್ಧಪಡಿಸಿರುವ ಹಾಗೂ ಎನ್‌ಸಿಆರ್‌ಟಿಯಿಂದ ನೀಡಿರುವ ಕಲಿಕಾ ಸಾಮಗ್ರಿಗಳನ್ನು ಉಪಯೋಗಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಎಲ್ಲಾ ಶಿಕ್ಷಕರಿಗೆ ಮಾಹಿತಿ ಒದಗಿಸುವುದು.

ಈ ಕುರಿತು ಜಿಲ್ಲೆ, ಬ್ಲಾಕ್, ಕ್ಲಸ್ಟರ್ ಮತ್ತು ಶಿಕ್ಷಕರ ಸಭೆಗಳಲ್ಲಿ ಕ್ಷೇತ್ರ ಮಟ್ಟದ ಎಲ್ಲಾ ಅಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡುವುದು ಹಾಗೂ 'ಸಂಭ್ರಮ ಶನಿವಾರ' ದಿನದಂದು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಮೇಲುಸ್ತುವಾರಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ.

ಎನ್‌ಸಿಇಆರ್‌ಟಿ ಮಾರ್ಗಸೂಚಿಯಲ್ಲಿ ನೀಡಿರುವ ಚಟುವಟಿಕೆಗಳನ್ನು ಸಂಭ್ರಮ ಶನಿವಾರ ಆಚರಿಸುವ ದಿನಗಳಂದು ಅಗತ್ಯಾನುಸಾರ ನಿರ್ವಹಿಸಲು ಉಲ್ಲೇಖ-3 ರಂತೆ ತಿಳಿಸಲಾಗಿತ್ತು. ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳುಗಳ ವರದಿಯನ್ನು ಕೆಲವು ಡಯಟ್‌ಗಳು ಮಾತ್ರ ಸಲ್ಲಿಸಿದ್ದು, ಸದರಿ ವರದಿಗಳಲ್ಲಿ ಇದರ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಸದರಿ ಚಟುವಟಿಕೆಗಳು ಶೈಕ್ಷಣಿಕ ವೃತ್ತಿ ಮಾರ್ಗದರ್ಶನಕ್ಕೆ ಪೂರಕ ಆಗಿರುವುದರಿಂದ ಎಲ್ಲರೂ ಕಟ್ಟುನಿಟ್ಟಾಗಿ ಕ್ರಮವಹಿಸಲು ತಿಳಿಸಿದೆ.

'ಸಂಭ್ರಮ ಶನಿವಾರ'ದ ಆಚರಣೆ ಕುರಿತು ಜಿಲ್ಲಾ ಹಂತದ ವರದಿಯನ್ನು ಉಪನಿರ್ದೇಶಕರು ಅಭಿವೃದ್ಧಿ ಮತ್ತು ಆಡಳಿತದವರು 3ನೇ ಶನಿವಾರ/ಶುಕ್ರವಾರದಂದು ಸಂಭ್ರಮ ಶನಿವಾರ ಕಾರ್ಯಕ್ರಮವನ್ನು ಆಚರಿಸಿ ಕಡ್ಡಾಯವಾಗಿ 2 ಪುಟಗಳ ವರದಿಯನ್ನು ಸಲ್ಲಿಸಬೇಕಿದೆ. 3 ದಿನಗಳೊಳಗಾಗಿ DSERT ಕಛೇರಿಯ EVG ಶಾಖೆಯ Email ID:[email protected]ಗೆ ಸಲ್ಲಿಸುವುದು ಹಾಗೂ ಉಲ್ಲೇಖ-4ರ ನಿರ್ದೇಶನದಂತೆ ವರದಿಯನ್ನು Websiteನಲ್ಲಿ ಅಪ್‌ಲೋಡ್‌ ಮಾಡಬೇಕು. ಒಂದು ವೇಳೆ ಇದನ್ನು ತಪ್ಪಿಸಿದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಹಾಗೂ ಮಾನ್ಯ ಆಯುಕ್ತರ ಗಮನಕ್ಕೆ ತರಲಾಗುವುದು ಎಂದು ತಿಳಿಸಲಾಗಿದೆ. ಈಗಾಗಲೇ ಈ ಹಿಂದಿನಿಂದಲೂ ಶಾಲಾ ಮಕ್ಕಳ ಬ್ಯಾಗ್‌ ಹೊರೆ ಕಡಿಮೆ ಮಾಡಲು ಸರ್ಕಾರ ಕ್ರಮವಹಿಸಿದ್ದು, ಇದೀಗ ಇದನ್ನು ಕಾರ್ಯರೂಪಕ್ಕೆ ತರಲು ಮುಂದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+