ವಿಧಾನಸಭೆ ಚುನಾವಣೆ : ಕಾಂಗ್ರೆಸ್‌ನಿಂದ 4 ಸಂಚಾಲಕರ ನೇಮಕ

Posted By: Gururaj
Subscribe to Oneindia Kannada
   Karnataka Elections 2018 : ಕಾಂಗ್ರೆಸ್ ನಿಂದ ನೇಮಕಗೊಂಡ 4 ಸಂಚಾಲಕರು | Oneindia Kannada

   ಬೆಂಗಳೂರು, ಮಾರ್ಚ್ 14 : ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್‌ ರಾಜ್ಯದ 4 ವಿಭಾಗಗಳಿಗೆ ಸಂಚಾಲಕರನ್ನು ನೇಮಕ ಮಾಡಿದೆ. ಟಿಕೆಟ್ ಹಂಚಿಕೆ ಕುರಿತು ಚರ್ಚೆ ನಡೆಸಲು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯುತ್ತಿದೆ.

   ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

   ಬುಧವಾರ ಕಾಂಗ್ರೆಸ್ ಬೆಂಗಳೂರು, ಮೈಸೂರು, ಕಲಬುರಗಿ ಮತ್ತು ಬೆಳಗಾವಿ ವಿಭಾಗಕ್ಕೆ ಸಂಚಾಲಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ವಿಭಾಗದ ಮಟ್ಟದ ಎಲ್ಲಾ ಚುನಾವಣಾ ತಯಾರಿಯ ಕೆಲಸಗಳ ಉಸ್ತುವಾರಿಯನ್ನು ಸಂಚಾಲಕರು ನೋಡಿಕೊಳ್ಳುತ್ತಾರೆ.

   ಚುನಾವಣೆ 2018: ಕಾಂಗ್ರೆಸ್ 123 ಅಭ್ಯರ್ಥಿಗಳ ಪಟ್ಟಿ

   ಬೆಂಗಳೂರು ವಿಭಾಗಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಮೈಸೂರು ವಿಭಾಗಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಕಲಬುರಗಿ ವಿಭಾಗಕ್ಕೆ ಬಿ.ಕೆ.ಹರಿಪ್ರಸಾದ್, ಬೆಳಗಾವಿ ವಿಭಾಗಕ್ಕೆ ಎಸ್.ಆರ್.ಪಾಟೀಲ್ ಸಂಚಾಲಕರಾಗಿದ್ದಾರೆ.

   Karnataka election 2018 : Congress appoints 4 new conveners

   ಮಹತ್ವದ ಸಭೆ : ಕಾಂಗ್ರೆಸ್ ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ನಡೆಸಲು ಬೆಂಗಳೂರು ಹೊರವಲಯದ ಕ್ಲಾರ್ಕ್ ಎಕ್ಸೋಟಿಕಾ ರೆಸಾರ್ಟ್‌ನಲ್ಲಿ ಬುಧವಾರ ಚುನಾವಣಾ ಸಮಿತಿಯ ಮೊದಲ ಸಭೆ ನಡೆಯುತ್ತಿದೆ.

   ವಿಧಾನಸಭೆ ಚುನಾವಣೆ : ಕಾಂಗ್ರೆಸ್‌ನ 80 ಅಭ್ಯರ್ಥಿಗಳ ಪಟ್ಟಿ!

   ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ರಚನೆ ಮಾಡಿರುವ 43 ಸದಸ್ಯರ ಚುನಾವಣಾ ಸಮಿತಿಯ ಮೊದಲ ಸಭೆ ಇದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

   ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್

   ಮೊದಲ ಹಂತದಲ್ಲಿ 100 ಕ್ಷೇತ್ರಗಳಿಗೆ ಟಿಕೆಟ್ ಅಂತಿಮಗೊಳಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಆದ್ದರಿಂದ, ಸಮಿತಿ ಸಭೆ ನಡೆಯುತ್ತಿದ್ದು, ಪ್ರತಿ ಕ್ಷೇತ್ರಕ್ಕೆ 2 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Ahead of Karnataka assembly elections 2018 Congress appointed conveners 4 new conveners. Conveners appointed to Bengaluru, Mysuru, Belagavi and Kalaburagi region.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ