Karnataka election 2023: ಗುರಿ ತಲುಪುವ ಹೊತ್ತಲ್ಲೇ ಎಡವಿದ್ರಾ "ಕೈ" ನಾಯಕರು?
ಬೆಂಗಳೂರು, ಮೇ, 05: ಕಳೆದ 2018ರ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಂದೂ ವಿರೋಧಿ ಅಲೆಯನ್ನು ಸೃಷ್ಟಿ ಮಾಡಿ ಅಧಿಕಾರ ಕಳೆದುಕೊಳ್ಳುವಂತೆ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಇದೀಗ ಮತ್ತೆ ಕಾಂಗ್ರೆಸ್ ನಾಯಕರು ಎಚ್ಚರ ತಪ್ಪಿದ ಪರಿಣಾಮ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಅಂತಹದ್ದೇ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.
ಸುಮಾರು ಐದು ವರ್ಷಗಳ ಕಾಲ ಅಂದರೆ 2013 ರಿಂದ 2018ರವರೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಬಳಿಕ 2018ರ ಚುನಾವಣೆಗೆ ಹೋದಾಗ ಸೋಲು ಕಾಣುವಂತಾಗಿತ್ತು. ಐದು ವರ್ಷಗಳ ಕಾಲ ಒಳ್ಳೆಯ ಆಡಳಿತ ನೀಡಿದರೂ ಜನ ಏಕೆ ಬಹುಮತ ನೀಡಿಲ್ಲ ಎಂಬುದನ್ನು ಇವತ್ತಿಗೂ ಕಾಂಗ್ರೆಸ್ ನಾಯಕರು ಕೇಳಿಕೊಳ್ಳುತ್ತಿದ್ದಾರೆ. ಆದರೆ ಅವತ್ತು ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಹಿಂದೂ ವಿರೋಧಿ ಹಣೆಪಟ್ಟಿ ಕಟ್ಟಿದ್ದೇ ಕಾರಣ ಎನ್ನುವುದನ್ನು ತಳ್ಳಿಹಾಕುವಂತಿಲ್ಲ.

ಈ ವಿಚಾರದಲ್ಲಿ ಕಾಂಗ್ರೆಸ್ ಸ್ವಲ್ಪ ಎಚ್ಚರ ವಹಿಸಬೇಕಾಗಿತ್ತು. ಸರ್ವಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಹೊರಟ ಕಾಂಗ್ರೆಸ್ ಗುರಿ ತಲುಪುವ ಕೊನೆಗಳಿಗೆಯಲ್ಲಿ ಎಡವಿದೆ. ಅಷ್ಟೇ ಅಲ್ಲದೆ ಮುಗ್ಗರಿಸಿ ಬೀಳುವ ಹಂತಕ್ಕೂ ಹೋಗುವಂತಾಗಿದೆ.
ಅವತ್ತಿನ ಕಾಂಗ್ರೆಸ್ ತಂತ್ರ ಫಲಿಸಲಿಲ್ಲ
2018ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ನಡೆಸಲು ಬಹುಮತವಿಲ್ಲದಿದ್ದೂ ಮತ್ತು ಹೆಚ್ಚು ಸ್ಥಾನ ಪಡೆದು ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದ ಬಿಜೆಪಿಗೆ ಅಧಿಕಾರ ನಡೆಸಲು ಅವಕಾಶ ನೀಡಬಾರದು ಎಂಬ ಹಠಕ್ಕೆ ಬಿದ್ದಿದ್ದ ಕಾಂಗ್ರೆಸ್ ಜೆಡಿಎಸ್ ನಾಯಕರ ಮನೆ ಬಾಗಿಲು ತಟ್ಟಿ, ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದರು. ಅದಾದ ನಂತರ ತುಂಬಾ ಬೆಳವಣಿಗೆಗಳು ನಡೆದವು.
ಸಮ್ಮಿಶ್ರ ಸರ್ಕಾರದಲ್ಲಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ಕಡೆಗೆ ಒಲವು ತೋರಿದ ಪರಿಣಾಮ ಸಮ್ಮಿಶ್ರ ಸರ್ಕಾರ ಕುಸಿದು ಬಿದ್ದಿತು. ಇದಾದ ನಂತರ ಸರ್ಕಾರ ರಚನೆ ಮಾಡಿದ್ದ ಜೆಡಿಎಸ್ ಮತ್ತು ಕಾಂಗ್ರೆಸ್ ಸೇರಿ ಬಿಜೆಪಿ ವಿರುದ್ಧ ರಾಜಕೀಯವಾಗಿ ಹೋರಾಟಕ್ಕಿಳಿಯಬಹುದಿತ್ತು. ಆದರೆ ಅಧಿಕಾರದಲ್ಲಿರುವ ತನಕ ಜೋಡೆತ್ತುಗಳಂತೆ ಇದ್ದವರು ಅಧಿಕಾರ ಕಳೆದುಕೊಳ್ಳುತ್ತಿದ್ದಂತೆಯೇ ವಿರೋಧಿಗಳಾಗಿ ಒಬ್ಬರ ಮೇಲೆ ಒಬ್ಬರು ಆರೋಪ ಮಾಡಲು ಆರಂಭಿಸಿದ್ದರು. ಅಲ್ಲದೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಬಿರುಕು ಜಾಸ್ತಿಯಾಗುತ್ತಲೇ ಹೋಗಿತ್ತು.
ರಾಜ್ಯದಲ್ಲಿ ಹವಾ ಸೃಷ್ಟಿಸಿದ್ದ ಕಾಂಗ್ರೆಸ್
ಜೆಡಿಎಸ್‌ನ ಸಂಬಂಧ ಕಳೆದುಕೊಂಡ ಬಳಿಕ ಕಾಂಗ್ರೆಸ್ ಕಳೆದ ಮೂರು ವರ್ಷಗಳಿಂದ ಅಧಿಕಾರಕ್ಕೆ ಬರಲೇಬೇಕೆಂಬ ಹಠಕ್ಕೆ ಬಿದ್ದಿದೆ. ಜೆಡಿಎಸ್ ಮತ್ತು ಬಿಜೆಪಿಯನ್ನು ಸಮಾನಾಂತರವಾಗಿ ಟೀಕಿಸುತ್ತಾ ಬಂದ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಕಾಂಗ್ರೆಸ್ ಹವಾ ಸೃಷ್ಟಿಸಲು ಸರ್ವ ರೀತಿಯಲ್ಲಿ ತಯಾರಿ ಮಾಡಿಕೊಳ್ಳುತ್ತಲೇ ಬಂದಿದ್ದರು.
ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ನಡೆದ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಪ್ರತಿಷ್ಠೆಯನ್ನಾಗಿ ಪರಿಗಣಿಸಿ ಚುನಾವಣೆ ನಡೆಸಿದ್ದವು. ಆದರೆ ಈ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಬಿಜೆಪಿ ಠಕ್ಕರ್ ನೀಡಿತ್ತು.
ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿ
ಇದಾದ ಬಳಿಕ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ವಿರುದ್ಧ ಹೋರಾಡಲು ವೇದಿಕೆಯನ್ನು ಸೃಷ್ಟಿ ಮಾಡಿತ್ತು. ಬಿಜೆಪಿ ವಿರುದ್ಧ ಹೋರಾಡಲು ರಾಜಕೀಯವಾಗಿ ಕಾಂಗ್ರೆಸ್ ಹಲವು ವಿಚಾರಗಳನ್ನು ಮುನ್ನೆಲೆಗೆ ತಂದಿತ್ತು. ಆದರೆ ಅದರ ನಡುವೆ ಆಗಾಗ್ಗೆ ಕಾಂಗ್ರೆಸ್ ನಾಯಕರು ಆರ್‌ಎಸ್‌ಎಸ್ ಸೇರಿದಂತೆ ಹಿಂದೂಪರ ಸಂಘಟನೆಗಳನ್ನು ಟಾರ್ಗೆಟ್ ಮಾಡಿ ಹೇಳಿಕೆ ನೀಡುತ್ತಾ ಬಂದಿದ್ದನ್ನು ಗಮನಿಸಬಹುದಾಗಿದೆ.
ಬಿಜೆಪಿ ವಿರುದ್ಧ ಹೋರಾಟಕ್ಕೆ ಹತ್ತು ಹಲವು ವಿಚಾರಗಳಿದ್ದರೂ ಕಾಂಗ್ರೆಸ್ ಹೋರಾಟಕ್ಕೆ ತೆಗೆದುಕೊಳ್ಳುವ ವಿಷಯಗಳು ಬಹಳಷ್ಟು ಸಲ ಉಲ್ಟಾ ಹೊಡೆದಿದೆ. ಎಲ್ಲೋ ಒಂದು ಕಡೆ ಕಾಂಗ್ರೆಸ್ ಒಂದು ವರ್ಗವನ್ನಷ್ಟೆ ಓಲೈಕೆ ಮಾಡುತ್ತಿದೆಯೇನೋ ಎಂಬ ಅನುಮಾನ ಹುಟ್ಟಿಕೊಳ್ಳುವಂತೆಯೂ ನಾಯಕರು ನಡೆದುಕೊಂಡಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರು ಚಡ್ಡಿಗೆ ಬೆಂಕಿ ಹಚ್ಚುವಂತೆ ಹೇಳಿಕೆ ನೀಡಿದ್ದು, ನಂತರ ಆರ್‌ಎಸ್‌ಎಸ್ ಮತ್ತು ಸಾರ್ವಕರ್ ವಿಚಾರದ ಹೇಳಿಕೆಗಳು ಸಂಚಲನ ಸೃಷ್ಟಿಸಿದ್ದವು.
ಹಿಂದೂ ವಿರೋಧಿ ವಿಚಾರ ಮುನ್ನಲೆಗೆ
ಇದೆಲ್ಲದರ ನಡುವೆಯೂ ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಹಲವು ವೈಫಲ್ಯ ಮತ್ತು ಆರೋಪಗಳನ್ನು ಮಾಡುವ ಮೂಲಕ ಆಡಳಿತ ವಿರೋಧಿ ಅಲೆಯನ್ನು ಸೃಷ್ಟಿ ಮಾಡಿದ್ದಲ್ಲದೆ, ಕಾಂಗ್ರೆಸ್ ಪರ ಅಲೆಯನ್ನು ಹುಟ್ಟುಹಾಕುವಲ್ಲಿ ಯಶಸ್ವಿಯಾಗಿತ್ತು. ಆದರೆ ಅದನ್ನು ಚುನಾವಣೆ ಹೊಸ್ತಿಲ ತನಕ ತಂದಿದ್ದ ಕಾಂಗ್ರೆಸ್ ಕೊನೆಗಳಿಗೆಯಲ್ಲಿ ಎಡವಿದ್ದರಿಂದ ಪರಿಸ್ಥಿತಿಯೇ ಬದಲಾದಂತೆ ಗೋಚರಿಸುತ್ತಿದೆ.
ಈ ಹಿಂದೆ ಅಂದರೆ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದ ಕಾಂಗ್ರೆಸ್ ಅವತ್ತು ಸರ್ಕಾರದ ಆಡಳಿತ ವೈಫಲ್ಯಕ್ಕಿಂತ ಹೆಚ್ಚಾಗಿ ಹಿಂದೂ ವಿರೋಧಿ ಎಂಬ ವಿಚಾರವನ್ನೇ ಮುನ್ನಲೆಗೆ ತರುವಲ್ಲಿ ಯಶಸ್ವಿಯಾಗಿತ್ತು. ಮತ್ತು ಅದು ಚುನಾವಣೆ ಸಮಯದಲ್ಲಿ ಬಿಜೆಪಿಗೆ ವರದಾನವಾಗಿತ್ತು.
ಕಾಂಗ್ರೆಸ್ ಇದನ್ನು ಹೇಗೆ ನಿಭಾಯಿಸಲಿದೆ?
ಇದನ್ನು ಕಾಂಗ್ರೆಸ್ ನಾಯಕರು ಅರಿತುಕೊಂಡು ತುಂಬಾ ಎಚ್ಚರಿಕೆ ವಹಿಸಬೇಕಾಗಿತ್ತು. ಆದರೆ ಚುನಾವಣೆಗೆ ಕೆಲವೇ ಕೆಲವು ದಿನಗಳು ಹತ್ತಿರವಿರುವಾಗಲೇ ಲಿಂಗಾಯಿತ ಸಿಎಂ ಭ್ರಷ್ಟರು, ಮೋದಿ ವಿಷದ ಹಾವು, ನಾಲಾಯಕ್ ಮಗ, ಮತ್ತು ಬಜಂಗದಳ ನಿಷೇಧಗಳ ವಿಚಾರಗಳು ಬಿಜೆಪಿಗೆ ಅಸ್ತ್ರವಾಗಿವೆ ಎಂದರೆ ತಪ್ಪಾಗಲಾರದು.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಹತ್ತು ಹಲವು ವಿಚಾರಗಳನ್ನು ಪ್ರಕಟಿಸಿತ್ತಾದರೂ ಅದೆಲ್ಲವೂ ಬಜರಂಗದಳ ನಿಷೇಧ ವಿಚಾರದ ಮುಂದೆ ನಗಣ್ಯವಾಗಿದೆ. ಬಜರಂಗದಳ ಈಗ ರಾಜ್ಯದ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟಕ್ಕಿಳಿದಿದ್ದು, ಬಿಜೆಪಿ ಕೂಡ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಪ್ರತಿ ಕ್ಷೇತ್ರದ ಅಭ್ಯರ್ಥಿಗಳವರೆಗೆ ಬಳಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಇದನ್ನು ಹೇಗೆ ನಿಭಾಯಿಸುತ್ತದೆ ಎಂಬುದೇ ಪ್ರಶ್ನೆಯಾಗಿ ಉಳಿದಿದೆ.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ










Click it and Unblock the Notifications