ವಿದೇಶದಿಂದ ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕುವುದು ಕೇವಲ ಭರವಸೆಯಾಗಿಯೇ ಉಳಿದಿದೆ: ಭೂಪೇಶ್ ಬಘೇಲ್

ಬೆಂಗಳೂರು, ಮೇ 7: ವಿದೇಶದಿಂದ ಕಪ್ಪುಹಣತಂದು ಎಲ್ಲರ ಖಆತೆಗೆ 15 ಲಕ್ಷ ಹಾಕುವುದಾಗಿ ಹೇಳಿದ್ದರು. 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು. ಇವೆಲ್ಲವೂ ಕೇವಲ ಭರವಸೆಯಾಗಿ ಉಳಿದಿದೆ ಎಂದು ಚತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಜಾರಿ ಮಾಡುವ ಯೋಜನೆಗಳನ್ನು ಮಾತ್ರ ಘೋಷಣೆ ಮಾಡಲಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ಆದರೆ ಬಿಜೆಪಿ ಸರ್ಕಾರ ಹೇಳಿದ ಯಾವುದೇ ಭರವಸೆ ಈಡೇರಿಸುವುದಿಲ್ಲ. ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿದೆ. ಬಿಜೆಪಿಯ ರಾಜ್ಯಪಾ ಹೇಲರಾದ ಸತ್ಯಪಾಲ್ ಮಲ್ಲಿಕ್ ಅವರು ಬಿಜೆಪಿಯಲ್ಲಿ ಭ್ರಷ್ಟಾಚಾರ ನಡೆದರೂ ಯಾವುದೇ ವ್ಯತ್ಯಾಸವಾಗುವುದಿಲ್ಲದಂತೆ ಇರುತ್ತಾರೆ.

Karnataka Election 2023: Bhupesh Baghel Slams On BJP Government

ಅದಾನಿ ಅವರ ಬೇನಾಮಿ ಕಂಪನಿಗಳ ಖಆತೆಗೆ 20 ಸಾವಿರ ಕೋಟಿಗೆ ತಲುಪಿತು ಎಂದು ಯಾವುದೇ ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಶಆಸಕರು 8 ಕೋಟಿ ಅಕ್ರಮ ಹಣದ ಜತೆ ಸಿಕ್ಕಿ ಬಿದ್ದರೂ ಯಾವುದೇ ಐಟಿ, ಇಡಿ ಸಂಸ್ಥೆಗಳು ತನಿಖೆ ಮಾಡುವುದಿಲ್ಲ. ಇಲ್ಲಿ ಡಬಲ್ ಇಂಜಿನ್ ಸರ್ಕಾರವಿದೆ. ಭ್ರಷ್ಟಾಚಾರದ ವಿಚಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ ಈಗ ತಾನೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಂತಹ ಪರಿಸ್ಥಿತಿಗಳಲ್ಲಿ ಪ್ರಧಾನಮಂತ್ರಿಗಳ ನಾ ಕಾವೂಂಗಾ, ನಾಖಾನೇದೂಂಗಾ, ದೇಶವನ್ನು ಮಾರಲು ಬಿಡುವುದಿಲ್ಲ ಎಂಬೆಲ್ಲಾ ಘೋಷವಾಕ್ಯಗಳು ಅರ್ಥಹೀನವಾಗಿವೆ ಎಂದರು.

ಮೋದಿ ಅವರು ಭಾರತದ ನವರತ್ನಗಳು ಎಂದೇ ಪರಿಗಣಿತವಾಗಿರುವ ಸಾರ್ವಜನಿಕ ಉದ್ದಿಮೆಗಳನ್ನು ಬಿಜೆಪಿ ಸರ್ಕಾರ ಕೆಲವನ್ನು ಮಾರಿದೆ, ಉದಿರುವುದನ್ನು ಮಾರಲು ತಯಾರಿ ಮಾಡೊಂಡಿದೆ. ಇಡೀ ದೇಶದಲ್ಲಿ ಇಂತಹ ದಯನೀಯ ಸ್ಥಿತಿ ಇದೆ. ಈ ಮಧ್ಯೆ ಬಿಜೆಪಿಯ ಅಧ್ಯಕ್ಷ ನಡ್ಡಾ ಅವರು ರಾಜ್ಯದ ಜನರನ್ನು ಬೆದರಿಸುತ್ತಿದ್ದಾರೆ. ನಮ್ಮ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧಮಕಿ ಹಾಕುತ್ತಿದ್ದಾರೆ. ಇದೆಲ್ಲವನ್ನು ರಾಜ್ಯದ ಜನ ನೋಡುತ್ತಿದ್ದಾರೆ.

ಕಾಂಗ್ರೆಸ್ ಪಕ್ಷ ಈ ಬಾರಿ ತನ್ನ ಪ್ರಣಾಳಿಕೆಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಹಾಗೂ ಉಚಿತ ಪಯಣ ಯೋಜನೆ ಘೋಷಣೆ ಮಾಡಿದ್ದು, ಕಾಂಗ್ರೆಸ್ ಸರ್ಕಾರ ಈ ಯೋಜನೆಗಳನ್ನು ಜಾರಿ ಮಾಡಿಯೇ ಮಾಡಲಿದೆ. ಇದೇ ಕಾರಣಕ್ಕೆ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ.

Karnataka Election 2023: Bhupesh Baghel Slams On BJP Government

ಚತ್ತೀಸಗಡದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆಯನ್ನು ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿದೆ. ರೈತರ ಸಾಲಮನ್ನಾ ಸೇರಿದಂತೆ ಅನೇಕ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜಾರಿ ಮಾಡಿದ್ದೇವೆ. ಕರ್ನಾಟಕದಲ್ಲಿ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ತಿಂಗಳು 200 ಯೂನಿಟ್ ಉಚಿತ ನೀಡಲಾಗುವುದು. ಈ ಯೋಜನೆಗಳನ್ನು ಬೇರೆ ರಾಜ್ಯಗಳಲ್ಲಿ ಜಾರಿ ಮಾಡಲಾಗಿದ್ದು, ಈಗ ಇಲ್ಲಿಯೂ ಘೋಷಣೆ ಮಾಡಿದ್ದೇವೆ.

ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯರಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಚತ್ತೀಸಗಡದಲ್ಲೂ ಇದೇ ರೀತಿಯ ಯೋಜನೆ ಜಾರಿ ಮಾಡಿದ್ದೇವೆ. ನಮ್ಮಲ್ಲಿ ಪ್ರತಿ ಕುಟುಂಬಕ್ಕೆ ಆಧಾರದ ಮೇಲೆ ನೀಡಿದ್ದು, ಇಲ್ಲಿ ಪ್ರತಿ ವ್ಯಕ್ತಿ ಆಧಾರದ ಮೇಲೆ ನೀಡಲಾಗುತ್ತಿದೆ.

ಇನ್ನು ಯುವನಿಧಿ ಕಾರ್ಯಕ್ರಮದ ಮೂಲಕ ನಿರುದ್ಯೋಗ ಪದವೀಧರರಿಗೆ ಪ್ರತಿ ತಿಂಗಳು 2 ವರ್ಷದವರೆಗೆ 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ ನಿರುದ್ಯೋಗ ಭತ್ಯೆ ನೀಡಲಾಗುವುದು. ನಮ್ಮ ರಾಜ್ಯದಲ್ಲಿ 12ನೇ ತರಗತಿ ಉತ್ತೀರ್ಣರಾದವರಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಇನ್ನು ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+