ಕರ್ನಾಟಕ ಚುನಾವಣೆ 2023: ಗೋಕಾಕ್‌ನಿಂದ ನಾಮಪತ್ರ ಸಲ್ಲಿಸಿದ ರಮೇಶ್ ಜಾರಕಿಹೊಳಿ, ಇತರರ ಮಾಹಿತಿಯೂ ಇದೆ
ಬೆಂಗಳೂರು, ಏಪ್ರಿಲ್ 13: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಏಪ್ರಿಲ್ 13ರಂದು ಗುರುವಾರ ಅಧಿಸೂಚನೆ ಹೊರಡಿಸಲಾಗಿದೆ. ಅದರನ್ವಯ ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನವೇ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳು ಮುಖಂಡರು ನಾಮಪತ್ರ ಸಲ್ಲಿಸಿದ್ದಾರೆ.
ರಾಜ್ಯದ ಎರಡನೇ ದೊಡ್ಡ ಜಿಲ್ಲೆ ಬೆಳಗಾವಿ ವ್ಯಾಪ್ತಿಯ ಗೋಕಾಕ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮೊದಲು ದಿನವೇ ನಾಮಪತ್ರ ಸಲ್ಲಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ಅವರು ಚುನಾವಣಾಧಿಕಾರಿ ಗೀತಾ ಕೌಜಲಗಿ ಅವರಲ್ಲಿ ನಾಮಪತ್ರ ನೀಡಿದರು.

ರಮೇಶ್ ಜಾರಕಿಹೊಳಿ ಸುಮಾರು ನಾಲ್ಕು ದಶಕದಿಂದಲೂ ರಾಜಕೀಯದಲ್ಲಿದ್ದಾರೆ. ಇದವರೆಗೆ ಅವರು ಏಳು ಬಾರಿ ಚುನಾವಣೆ ಎದುರಿಸಿದ್ದಾರೆ. 2023ರ ಚುನಾವಣೆ ಇದು ಅವರಿಗೆ ಎಂಟನೇ ಬಾರಿ ಆಗಿದೆ. ಭರ್ಜರಿ ಪ್ರಚಾರ ಸಹಿತ ಅವರು ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.
ಮೊದಲು ಸೋಲು ನಂತರ ಹ್ಯಾಟ್ರಿಕ್ ಗೆಲುವು
ಮೊದಲ ಚುನಾವಣೆಯಲ್ಲಿ ಜಾರಕಿಹೊಳಿ ಅವರು ಅತ್ಯಂತ ಕಡಿಮೆ ಮತಗಳ (4000) ಅಂತರದಿಂದ ಸೋಲು ಕಂಡಿದ್ದರು. 1989 ಹಾಗೂ 1994ರ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ. 1999ರಲ್ಲಿ ಗೋಕಾಕ್‌ನಿಂದ ಮತ್ತೆ ಸ್ಪರ್ಧಿಸಲು ಶುರು ಮಾಡಿದ ರಮೇಶ್ ಜಾರಕಿಹೊಳಿ ಇದುವರೆಗೂ ಗೋಕಾಕ್‌ನಲ್ಲಿ ಸಸತ ಹ್ಯಾಟ್ರಿಕ್ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ.
ಇದೀಗ ಬಿಜೆಪಿಯಿಂದ ಗೋಕಾಕ್ ಟಿಕೆಟ್ ಪಡೆದಿದ್ದಾರೆ. ಜೊತೆಗೆ ಅವರು ಗುರುತಿಸಿದ ಮೂವರು ಅಭ್ಯರ್ಥಿಗಳಿಗೆ ಹೈಕಮಾಂಡ್ ಅಸ್ತು ಅಂದಿದೆ. ಅಥಣಿ ಶಾಸಕ ಮಹೇಶ್ ಕಮಟಳ್ಳಿ, ಕಾಗವಾಡದ ಶ್ರೀಮಂತ ಪಾಟೀಲ್, ಹಿಂಡಲಗಾ ಗ್ರಾಮ ಪಂಚಾಯತಿಯ ಅಧ್ಯಕ್ಷ ನಾಗೇಶ್ ಅವರಿಗೂ ಟಿಕೆಟ್ ಕೊಡಿಸುವಲ್ಲಿ ಜಾರಕಿಹೊಳಿಯವರು ಯಶಸ್ವಿಯಾಗಿದ್ದಾರೆ.

2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದು ನಂತರ 2019ರಲ್ಲಿ ಕಾಂಗ್ರೆಸ್ ತೊರೆದ ರಮೇಶ್ ಜಾರಕಿಹೊಳಿ ಬಿಜೆಪಿಗೆ ಸೇರಿದರು. ಅವರ ಆ ನಡೆಯಿಂದ ರಾಜ್ಯ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಮೇಶ್ ಜಾರಕಿಹೊಳಿ ಬಹುಮತ ಪಡೆದು ಗೆದ್ದರು.
ಈಗ ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಸಚಿವ ಸುಧಾಕರ್ ಇನ್ನಿತರರಿಂದ ನಾಮಪತ್ರ ಸಲ್ಲಿಕೆ
ರಾಜ್ಯದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸಹ ಗುರುವಾರವೇ ತಮ್ಮ ಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಚಿಕ್ಕಬಳ್ಳಾಪುರ ನಗರದ ತಾಲೂಕು ಕಚೇರಿಯಲ್ಲಿ ಸಾಂಕೇತಿಕವಾಗಿ ಉಮೇದುವಾರಿಕೆಯನ್ನು ಸುಧಾಕರ್ ಸಲ್ಲಿಸಿದರು. ಇದಕ್ಕ ಮುನ್ನ ಅವರು ಅವರು ಚಿಕ್ಕಪೈಲಗುರ್ಕಿಯಲ್ಲಿರುವ ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ರಾಮನಗರ ಜಿಲ್ಲೆಯ ಮಾಗಡಿಯಲ್ಲಿಯೂ ಬಿಜೆಪಿ ಅಭ್ಯರ್ಥಿ ಪ್ರಸಾದ್ ಗೌಡರು, ಇನ್ನು ಬಿಟಿಎಂ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಂ ಶ್ರೀನಿವಾಸ ರೆಡ್ಡಿ ಅವರು ಸಹ ನಾಮಪತ್ರ ಸಲ್ಲಿಸಿದರು.












Click it and Unblock the Notifications