ಕುಟುಂಬ ರಾಜಕಾರಣ ದ್ವೇಷಿ ಬಿಜೆಪಿಯಲ್ಲೇ ಹೆಚ್ಚಾದ ಫ್ಯಾಮಿಲಿ ಪಾಲಿಟಿಕ್ಸ್: ಒಂದೇ ಕುಟುಂಬದಲ್ಲಿ ಟಿಕೆಟ್ ಪಡೆದವರ ಮಾಹಿತಿ
ಬೆಂಗಳೂರು, ಏಪ್ರಿಲ್ 14: ಡಬಲ್ ಇಂಜಿನ್ ಬಿಜೆಪಿ ಸರ್ಕಾರವು ಸದಾ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಕುಟುಂಬ ರಾಜಕಾರಣವನ್ನು ದ್ವೇಷಿಸುತ್ತಲೇ ಬಂದಿತ್ತು. ಆದರೆ ಕುಟುಂಬ ರಾಜಕಾರಣ ದ್ವೇಷಿ ಎಂಬ ಬಿಜೆಪಿ ನಿಲುವು ತಾನು ಘೋಷಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಯವಾಗಿದೆ.
ಕರ್ನಾಟಕದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಮೇ 10ರಂದು ಮತದಾನ ನಡೆಯಲಿದೆ. ಈ ಚುನಾವಣೆ ಕುರಿತು ಬಿಜೆಪಿ ಎರಡು ಹಂತದಲ್ಲಿ ಒಟ್ಟು ರಾಜ್ಯದ 212 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಘೋಷಿಸಿದೆ.

ಚುನಾವಣಾ ಕಣಕ್ಕಿಳಿಯಲು ತಮಗೆ ಟಿಕೆಟ್ ಸುಮಾರು 10 ಕುಟುಂಬಗಳು ಬಂದಿದ್ದವು. ಅದರಲ್ಲಿ ಕಡಿಮೆ ಎಂದರೂ ಎರಡು ಡಜನ್ ಅಭ್ಯರ್ಥಿಗಳಿಗೆ ಕುಟುಂಬ ರಾಜಕಾರಣ ಧ್ವೇಷಿಸುವ ಬಿಜೆಪಿಯಿಂದ ಟಿಕೆಟ್ ಸಿಕ್ಕಿವೆ. ಅದರ ತಂದೆ-ಮಗ ಇದ್ದಾರೆ. ಸಹೋದರರಿಗೆ ಹಾಗೂ ಒಂದು ಕುಟುಂಬದ ಸಂಬಂಧಿಕರಿಗೆ ಟಿಕೆಟ್ ಧಕ್ಕಿದ್ದು, ಅವರೆಲ್ಲ ಪ್ರಚಾರ ಆರಂಭಿಸಿದ್ದಾರೆ.
ಬಿಜೆಪಿಯಿಂದ ಜಾರಕಿಹೊಳಿ ಸಹೋದರರಾದ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರಿಗೆ ಅವರಿಗೆ ಬಿಜೆಪಿ ಟಿಕೆಟ್ ಒದಗಿಸಿದೆ. ಇನ್ನೂ ದಿವಂಗತ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೂ ಎರಡು ಟಿಕೆಟ್‌ಗಳು ಲಭಿಸಿವೆ. ಉಮೇಶ್ ಕತ್ತಿಯವರ ಪುತ್ರ ನಿಖಿಲ್ ಕತ್ತಿ ಮತ್ತು ಅವರ ಸಹೋದರ ರಮೇಶ್ ಕತ್ತಿ ಸ್ಪರ್ಧೆಗೆ ಸಜ್ಜಾಗಿದ್ದಾರೆ.
ಜೊಲ್ಲೆ, ಜಾಧವ್ ಕುಟುಂಬಕ್ಕೂ ಟಿಕೆಟ್
ನಿಪ್ಪಾಣಿ ಶಾಸಕಿ ಹಾಲಿ ಬಿಜೆಪಿ ಸಚಿವೆ ಶಶಿಕಲಾ ಜೊಲ್ಲೆ ಅವರ ಪತಿಯಾದ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಈ ಬಾರಿಯು ಬಿಜೆಪಿಯ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಕಲ್ಯಾಣ ಕರ್ನಾಟಕದ ಕಲಬುರಗಿ ಸಂಸದ ಉಮೇಶ ಜಾಧವ್ ಅವರ ಪುತ್ರ ಅವಿನಾಶ್ ಜಾಧವ್ ಅವರು ಚಿಂಚೋಳಿ ಕಣದಿಂದ ಸ್ಪರ್ಧೆಗೆ ಇಳಿದಿದ್ದಾರೆ. ತುಮಕೂರು ಸಂಸದ ಜಿ.ಎಸ್.ಬಸವರಾಜ್ ಪುತ್ರ ಜ್ಯೋತಿ ಗಣೇಶ್ ಗೆ ತುಮಕೂರು ನಗರದ ಟಕೆಟ್ ಲಭಿಸಿದೆ.

ಇನ್ನೂ ಬಳ್ಳಾರಿಯ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿಯವರ ಸಹೋದರರಾದ ಸೋಮಶೇಖರ್ ರೆಡ್ಡಿ ಅವರಿಗೆ ಬಿಜೆಪಿಯಿಂದ ಬಳ್ಳಾರಿ ನಗರ ಕ್ಷೇತ್ರ ಹಾಗೂ ಕರುಣಾಕರ್ ರೆಡ್ಡಿ ಅವರಿಗೆ ಹರಪ್ಪನಹಳ್ಳಿ ಕ್ಷೇತ್ರದಿಂದ ಅಖಾಡಕ್ಕೆ ಇಳಿಯುತ್ತಿದ್ದಾರೆ.
ಶಿವಮೊಗ್ಗ: ಯಡಿಯೂರಪ್ಪ ಮಕ್ಕಳಿಗೆ ಟಿಕೆಟ್
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ್ ಸಿಂಗ್ ಅವರನ್ನು ವಿಜಯನಗರ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ ಅವರ ಚಿಕ್ಕಪ್ಪ ಶಾಸಕ ಎಲ್‌ಎ ರವಿ ಸುಬ್ರಹ್ಮಣ್ಯ ಅವರಿಗೆ ಬಸವನಗುಡಿ ಕ್ಷೇತ್ರಕ್ಕೆ ಟಿಕೆಟ್ ಲಭಿಸಿದೆ.
ಸಾಲದೆಂಬಂತೆ ಸಾರಿಗೆ ಸಚಿವ ಬಿ ಶ್ರೀರಾಮುಲು ಮತ್ತು ಅವರ ಸೋದರಳಿಯ ಟಿ ಹೆಚ್ ಸುರೇಶ್ ಬಾಬು ಇಬ್ಬರೂ ಈ ಸಲ ಚುನಾವಣೆಯ ಪ್ರಮುಳ ಅಭ್ಯರ್ಥಿಗಳಾಗಿ ಗುರುತಿಸಿಕೊಂಡಿದ್ದಾರೆ. ಬಿಜೆಪಿಯ ಪ್ರಬಲ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಶಿಕಾರಿಪುರ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಅವರ ಸಹೋದರ ಯಡಿಯೂರಪ್ಪ ಅವರ ಮತ್ತೋರ್ವ ಪುತ್ರ ಬಿ ವೈ ರಾಘವೇಂದ್ರ ಅವರು ಶಿವಮೊಗ್ಗ ಸಂಸದರಾಗಿದ್ದಾರೆ.
ಹೀಗೆ ಎರಡು ಡಜನ್ ನಷ್ಟು ಮಂದಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕುಟುಂಬ ರಾಜಕಾರಣ ವಿರೋಧಿ ನೀತಿಗೆ ತಿಲಾಂಜಲಿ ಹಾಡಲಾಗಿದೆ. ಕೇವಲ ಆರೋಪಕ್ಕೆ ಮಾತ್ರ ಸೀಮತ ಎಂಬಂತಾಗಿದೆ ಬಿಜೆಪಿರ ಕುಟುಂಬ ರಾಜಕರಾಣ ದ್ವೇಷಿ ನಡೆ.
ಕಾಂಗ್ರೆಸ್‌ನಿಂದ ಬಿಜೆಪಿ 'ರಾಜವಂಶಗಳ' ಪಟ್ಟಿ ಸಿದ್ದ
ಬಿಜೆಪಿ ಪಕ್ಷ ಘೋಷಿಸಿರುವ ಪ್ರತಿ ಆರು ಅಭ್ಯರ್ಥಿಗಳಲ್ಲಿ ಒಬ್ಬರು ಪರಿವಾರದ (ಕುಟುಂಬ) ರಾಜಕಾರಣದ ಹಿನ್ನೆಲೆ ಉಳ್ಳವರೇ ಆಗಿದ್ದಾರೆ. ಈವರೆಗೆ ಬಿಜೆಪಿ ಘೋಷಿಸಿದ 212 ಅಭ್ಯರ್ಥಿಗಳ ಪೈಕಿ 34 ಅಭ್ಯರ್ಥಿಗಳು ಸ್ವಜನಪಕ್ಷಪಾತದಿಂದಾಗಿಯೇ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ದ್ದಾರೆ ಎಂದು ಎಂದು ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಲೇವಡಿ ಮಾಡಿದ್ದಾರೆ.
ಬಿಜೆಪಿ ನಾಯಕರು ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬವನ್ನು ಗುರಿಯಾಗಿಸಲು ಕುಟುಂಬ ರಾಜಕರಾಣವನ್ನು ಸದಾ ಅಸ್ತ್ರವಾಗಿ ಬಳಸುತ್ತಿದ್ದರು. ಹೀಗೆ ಬಿಜೆಪಿಯಿಂದ, ಪ್ರಧಾನಿ ನರೇಂದ್ರ ಮೋದಿಯವರಿಂದ ಉಂಟಾಗುತ್ತಿದ್ದ ಟೀಕೆ, ತಿರಸ್ಕಾರಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬಿಜೆಪಿಯ ಕುಟುಂಬ ಸಂಬಂಧಗಳ ಪಟ್ಟಿ ಸಿದ್ಧಪಡಿಸಿದೆ. ಅದಕ್ಕೆ ವ್ಯಾಪಕ ಪ್ರಚಾರ ನೀಡುತ್ತಿದೆ. ಮೇ 10ರಂದು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಸಂದರ್ಭದಲ್ಲಿ ಬಿಜೆಪಿ ಪರಿವಾರಕ್ಕೆ ಮಣೆ ಹಾಕಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಬಿಜೆಪಿಯಲ್ಲಿ ಸಹ ಹಾಲಿ ಮತ್ತು ಮಾಜಿ ನಾಯಕರ ಮಕ್ಕಳಿಗೇ ಸಹೋದರರಿಗೇ ಟಿಕೆಟ್ ನೀಡಿರುವ ನಿದರ್ಶನಗಳನ್ನು ಕಾಣಬಹುದಾಗಿದೆ.
-
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications