ಹೆಚ್ಚಾಯ್ತು ಚುನಾವಣಾ ಕಾವು; ಬಿಜೆಪಿ ಮತ್ತೆ ಅಧಿಕಾರಕ್ಕೆ ಏರುವುದರಲ್ಲಿ ಸಂಶಯವಿಲ್ಲ; ಬಿ.ಎಲ್.ಸಂತೋಷ್ ಭವಿಷ್ಯ
ಬೆಂಗಳೂರು,ಏಪ್ರಿಲ್8: ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಡಳಿತರೂಢ ಬಿಜೆಪಿ ಮತ್ತೆ ಅಧಿಕೃದ ಗದ್ದು ಹಿಡಿಯಲು ಹಲವು ತಂತ್ರಗಳನ್ನ ರೂಪಿಸುತ್ತಿದೆ. ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆಯಲ್ಲಿ ಬಿಜೆಪಿ ಕಸರತ್ತು ನಡೆಸುತ್ತಿದೆ.
ಕರ್ನಾಟಕದಲ್ಲಿ ಚುನಾವಣೆ ಘೋಷಣೆ ಆದ ಹಿನ್ನೆಲೆ ರಾಷ್ಟ್ರ ಬಿಜೆಪಿ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದು, ಪಕ್ಷವನ್ನ ಕೆಳಮಟ್ಟದಿಂದಲೂ ಭದ್ರಪಡಿಸಲು ಬಿಜೆಪಿ ಕೇಂದ್ರ ನಾಯಕರು ಹಲವು ತಂತ್ರಗಾರಿಕೆಯನ್ನ ನಡೆಸಿದ್ದು, ಮತ್ತೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾತನಾಡಿ,ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರುವುದರಲ್ಲಿ ಸಂಶಯವಿಲ್ಲ ಎಂದು ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.
ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, 125ರಿಂದ 135 ಸ್ಥಾನ ಗೆದ್ದು, ಮತ್ತೆ ಸರ್ಕಾರ ರಚಿಸಲಿದೆ ಎಂದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆಯಲ್ಲಿ ಹಿಂದೇಟು ಹಾಕುತ್ತಿದ್ದು, ಈಗಾಗಲೇ ಆಯ್ಕೆ ಮಾಡಿರುವ ಅಭ್ಯರ್ಥಿಗಳನ್ನು ನೋಡಿದರೆ, ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವು ಸುಲಭವಾಗಲಿದೆ ಎಂದು ಹೇಳಿದರು.
ಇನ್ನೂ ನಮ್ಮ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಹಾಗೂ ರಾಜ್ಯದ ಉತ್ತಮ ಆಡಳಿತ ಬಿಜೆಪಿಗೆ ವರದಾನವಾಗಲಿದೆ. ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಈ ಭಾರಿ ಬಿಜೆಪಿ ಗೆಲುವು ಖಚಿತ ಎಂದರು. ಹಾಲಿ ಶಾಸಕರಾದ ರಾಮಲಿಂಗಾರೆಡ್ಡಿ ಅವರ ದುರಾಡಳಿತ ಹಾಗೂ ಈ ಭಾರಿ ಬಿಜೆಪಿಯಲ್ಲಿ ಬಿಟಿಎಂನಲ್ಲಿ ಕಮಲ ಅರಳಿಸಲೇಬೇಕೆಂಬ ಕಾರ್ಯಕರ್ತರ ಉತ್ಸಾಹವೇ ಮುಂದಿನ ಗೆಲುವಿನ ಸೋಪಾನವಾಗಲಿದೆ. ಬೆಂಗಳೂರಿನ ಹಲವು ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಲಿದೆ ಎಂದು ಹೇಳಿದರು.

ದೇಶದ ಕಟ್ಟಕಡೆಯ ನಾಗರಿಕನಿಗೂ ಸರ್ಕಾರಿ ಯೋಜನೆಯ ಸೌಲಭ್ಯಗಳು ಸಿಗಬೇಕೆಂಬ ನಿಟ್ಟಿನಲ್ಲಿ ಡಬಲ್ ಎಂಜಿನ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳ ಸೌಲಭ್ಯಗಳು ಡಿಬಿಟಿ ಮೂಲಕ ನೇರ ವರ್ಗಾವಣೆಯಾಗುತ್ತಿರುವುದರಿಂದ ಭ್ರಷ್ಟಾಚಾರ ನಿಯಂತ್ರಣಗೊಂಡು ಫಲಾನುಭವಿಗಳು ಪೂರ್ಣ ಸೌಲಭ್ಯ ಪಡೆಯುತ್ತಿದ್ದಾರೆ ಎಂದರು.
ಗರೀಬ್ ಕಲ್ಯಾಣ್ ಅನ್ನ ಯೋಜನೆ ಎಂದರೆ ಕಟ್ಟಕಡೆಯ ವ್ಯಕ್ತಿಯವರೆಗೆ ಅಕ್ಕಿ ತಲುಪುತ್ತದೆ. ಕಿಸಾನ್ ಸಮ್ಮಾನ್ ನಿಧಿ 12 ಕೋಟಿ ಸಣ್ಣ ರೈತರಿಗೆ ತಲುಪುತ್ತದೆ. ಯಾವುದೇ ಯೋಜನೆಗಳ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಹೀಗಾಗಿ ಡಬಲ್ ಎಂಜಿನ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಭ್ರಷ್ಟಾಚಾರ ಕಡಿಮೆ ಮಾಡಲು ಪಾರದರ್ಶಕತೆ ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಈ ವಿಚಾರದಲ್ಲಿ ಅತ್ಯಂತ ಯಶಸ್ವಿಯಾಗಿದೆ ನಡೆಸಿಕೊಂಡು ಬಂದಿದೆ ಎಂದು ತಿಳಿಸಿದರು.
ಇನ್ನೂ ಎರಡ್ಮೂರು ವರ್ಷಗಳ ಕಾಲ ನಮ್ಮನ್ನ ಕಾಡುತ್ತಿದ್ದ ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಉಚಿತವಾಗಿ ಲಸಿಕೆ ನೀಡಿ, ಶೇ.98ರಷ್ಟು ಲಸಿಕೆ ವಿತರಣೆ ಪ್ರಮಾಣ ಇದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 5.5 ಲಕ್ಷ ಕೋಟಿ ರು. ವಿವಿಧ ಯೋಜನೆಗಳ ಮೊತ್ತವು ಡಿಬಿಟಿ ಮೂಲಕ ತಲುಪಿದೆ. ಆರ್ಥಿಕ ವರ್ಷ ಮುಗಿಯುವ ವೇಳೆಗೆ 6.7 ಲಕ್ಷ ಕೋಟಿ ರು.ಗಳನ್ನು ಡಿಬಿಟಿ ಮೂಲಕ ಕಳುಹಿಸಲಾಗುವುದು. ಕಳೆದ ಸಾಲಿನಲ್ಲಿ 6.2 ಲಕ್ಷ ಕೋಟಿ ರು. ಡಿಬಿಟಿ ಮಾಡಲಾಗಿತ್ತು ಎಂದು ಹೇಳಿದರು.












Click it and Unblock the Notifications